Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಚಂದ್ರಪ್ಪ ಅವರನ್ನು ಮಾನಸಿಕ ವೈದ್ಯರ ಬಳಿ ಪರೀಕ್ಷೆ ಮಾಡಿಸಿ
ಜಿಲ್ಲಾ ಸುದ್ದಿ

ಚಂದ್ರಪ್ಪ ಅವರನ್ನು ಮಾನಸಿಕ ವೈದ್ಯರ ಬಳಿ ಪರೀಕ್ಷೆ ಮಾಡಿಸಿ

D KumaraswamyBy D KumaraswamyMay 17, 2021No Comments2 Mins Read
Facebook Twitter Pinterest LinkedIn Tumblr WhatsApp VKontakte Email
Chitradurga pakshabeda maretu development work madi
Share
Facebook Twitter LinkedIn Pinterest Email

 

((ಪ್ರಕಟಣೆ ವಿನಂತಿ)

*ಜನರಲ್ಲಿ ಭೀತಿ ಹುಟ್ಟಿಸುವ ಶಾಸಕನ ವಿರುದ್ಧ ಕ್ರಮಕೈಗೊಳ್ಳಿ*

*ಜನ ಸಾಯಿಲಿ ಎಂಬ ಮಾತು ಅಪಾಯ*

*ಎಂ.ಚಂದ್ರಪ್ಪಗೆ ಮಾನಸಿಕ ಚಿಕಿತ್ಸೆ ನೀಡಿ*

*ಮಾಜಿ ಸಚಿವ ಆಂಜನೇಯ ಒತ್ತಾಯ*

 

 

ಚಿತ್ರದುರ್ಗ: ಕರೋನಾ ಸೋಂಕು ಎಲ್ಲೆಡೆ ವ್ಯಾಪಿಸುತ್ತಿದ್ದು, ಈ ವೇಳೆ ಜವಾಬ್ದಾರಿಯುತವಾಗಿ ವರ್ತಿಸಬೇಕಾದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಜನ ಎಲ್ಲಾದ್ರೂ ಸಾಯಿಲಿ ಬಿಡ್ರಿ, ಇಲ್ಲಿ ಆಸ್ಪತ್ರೆ ಮಾಡಲು ಬಿಡುವುದಿಲ್ಲ ಎಂಬ ಮಾತು ಉದ್ಧಟತನದಿಂದ ಕೂಡಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.
ಸೋಂಕು ಎಲ್ಲೆಡೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ. ಈ ಸಂದರ್ಭ ಗುಣಮಟ್ಟ ಚಿಕಿತ್ಸೆ ನೀಡಲು ಗ್ರಾಮೀಣ ಮಟ್ಟದಲ್ಲಿ ಆರೋಗ್ಯ ಸೇವೆ ಕಲ್ಪಿಸಲು ಕ್ರಮಕೈಗೊಳ್ಳಬೇಕಾದ ಚಂದ್ರಪ್ಪ ಅವರ ಉದ್ಧಟತನ ಮಾತು ಜನರಲ್ಲಿ ಭೀತಿ ಹುಟ್ಟಿಸುತ್ತಿದೆ ಎಂದು ದೂರಿದ್ದಾರೆ.
ಜಿಲ್ಲಾ ಆರೋಗ್ಯ ಅಧಿಕಾರಿಗಳು ತಪ್ಪು ಮಾಡಿದರೆ ಅಥವಾ ಜನಪ್ರತಿನಿಧಿಗಳ ಮಾತು ಕೇಳದಿದ್ದರೆ ಅವರ ಮೇಲೆ ಅಧಿಕಾರ ಚಲಾಯಿಸಿ ಸೌಲಭ್ಯ ಪಡೆಯುವುದು ಜನಪ್ರತಿನಿಧಿಗಳಾದವರ ಹೊಣೆಗಾರಿಕೆ. ಅದನ್ನು ಬಿಟ್ಟು ಹೊಳಲ್ಕೆರೆಯಲ್ಲಿ ಕೋವಿಡ್ ಆಸ್ಪತ್ರೆ ಮಾಡಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಜನ ಎಲ್ಲಿದ್ದಾರೋ ಅಲ್ಲಿಯೇ ಸಾಯಲಿ ಬಿಡ್ರಿ ಎಂಬ ಉದ್ಧಟತನ ವರ್ತನೆ ಜನರನ್ನು ಭೀತಿಗೊಳಿಸುವಂತದ್ದಾಗಿದೆ.
ಬೆಳಗ್ಗೆಯಿಂದ ರಾತ್ರಿಯವರೆಗೂ ಕ್ಷೇತ್ರ ಸುತ್ತಾಟ ನಡೆಸಿ ಜನರ ಆರೋಗ್ಯ ವಿಚಾರಣೆ, ಗ್ರಾಮೀಣ ಮಟ್ಟದಲ್ಲಿ ಕೋವಿಡ್ ಕೇಂದ್ರ, ಆರೋಗ್ಯ ಕೇಂದ್ರಗಳ ವ್ಯವಸ್ಥೆ ಪರಿಶೀಲಿಸದ ಚಂದ್ರಪ್ಪ, ಜಿಲ್ಲಾ ಸಚಿವ ಶ್ರೀರಾಮುಲು ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆಯೂ ಆರೋಗ್ಯ ಸೇವೆ ಕ್ಷೇತ್ರಕ್ಕೆ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ.
ಇಂತಹ ವೇಳೆ ಹೊಳಲ್ಕೆರೆಯಲ್ಲಿ 50 ಹಾಸಿಗೆಯ ಕೋವಿಡ್ ಆಸ್ಪತ್ರೆ ಮಾಡಲು ಮುಂದಾದ ಜಿಲ್ಲಾ ಆರೋಗ್ಯ ಅಧಿಕಾರಿಗಳ ಮೇಲೆ ದಬ್ಬಾಳಿಕೆ ಮಾಡಿದ್ದು ಸರಿಯಲ್ಲ. ಚಂದ್ರಪ್ಪ ಅವರಿಗೆ ಬಹುತೇಕ ಮತಿಭ್ರಮಣೆ ಆಗಿರಬೇಕು, ಇಲ್ಲದಿದ್ದರೆ ಜಾಸ್ತಿ ತೆಗೆದುಕೊಂಡು ಮಾತನಾಡಿರಬೇಕು.
ಆದ್ದರಿಂದ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಶಾಸಕ ಎಂ.ಚಂದ್ರಪ್ಪ ಅವರನ್ನು ಮಾನಸಿಕ ವೈದ್ಯರ ಬಳಿ ಪರೀಕ್ಷೆ ಮಾಡಿಸಬೇಕು. ಅಲ್ಲಿಯವರೆಗೆ ಎಲ್ಲಿಯೂ ಹೊರಗಡೆ ಮಾತನಾಡದಂತೆ ನಿರ್ಬಂಧ ವಿಧಿಸಬೇಕು. ಇಲ್ಲದಿದ್ದರೆ ಜನರನ್ನು ಭೀತಿಗೆ ಒಳಪಡಿಸಿ ಜನರ ಜೀವದ ಜತೆ ಚೆಲ್ಲಾಟವಾಡುತ್ತಾರೆ. ಆದ್ದರಿಂದ ಜನರ ಆರೋಗ್ಯ ದೃಷ್ಟಿಯಿಂದ ಕೂಡಲೆ ಅವರನ್ನು ಮಾನಸಿಕ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

Chitradurga take  chandrappa to mental heath doctor

 

*ಆಸ್ಪತ್ರೆಗಳ ಕಟ್ಟಡ ಜನಸೇವೆಗೆ ಬಳಕೆ ಆಗಲಿ:*
ನಾನು ಸಚಿವನಾಗಿದ್ದ ವೇಳೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ತಂದು ಎಚ್.ಡಿ.ಪುರದಲ್ಲಿ 2.50 ಕೋಟಿ ರೂ., ರಾಮಗಿರಿಯಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಿಸಿದ್ದೇ. ಆದರೆ, ಚುನಾವಣೆ ಎದುರಾಗಿದ್ದರಿಂದ ಉದ್ಘಾಟನೆ ಮಾಡಲು ಸಾಧ್ಯವಾಗಿರಲಿಲ್ಲ ಎಂದು ಆಂಜನೇಯ ತಿಳಿಸಿದ್ದಾರೆ.
ಆದರೆ, ಬಳಿಕ ಕ್ಷೇತ್ರದ ಶಾಸಕರಾದ ಎಂ.ಚಂದ್ರಪ್ಪ, ಮೂರು ವರ್ಷವಾದರೂ ಈ ಕಟ್ಟಡಗಳ ಉದ್ಘಾಟನೆ ಮಾಡದೇ ನಿರ್ಲಕ್ಷೃ ವಹಿಸಿದ್ದಾರೆ. ಪರಿಣಾಮ ಮೂರು ವರ್ಷದಿಂದ ಅ ಕಟ್ಟಡಗಳು ಪಾಳು ಬಿದ್ದು ಅನುಪಯುಕ್ತವಾಗಿವೆ. ಕೋಟ್ಯಂತರ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಿದ್ದರೂ ಜನರಿಗೆ ಆರೋಗ್ಯ ಸೇವೆ ದೊರೆಯದಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಶಾಸಕರ ನಿರ್ಲಕ್ಷೃದಿಂದ ಜನರ ಹಣ ಸದ್ಬಳಕೆ ಆಗುತ್ತಿಲ್ಲ. ಜತೆಗೆ ಈ ಪ್ರದೇಶದಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ ಬಾಡಿಗೆ ಅಥವಾ ಕಿಷ್ಕಿಂಧೆ ಕಟ್ಟಡಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಸ್ತುತ ಕರೋನಾ ಸೋಂಕು 2ನೇ ಅಲೆ ತೀವ್ರವಾಗುತ್ತಿರುವ ಸಂದರ್ಭದಲ್ಲಿ ಜಿಲ್ಲಾಡಳಿತ ಈ ಎರಡು ಆಸ್ಪತ್ರೆಗಳ ಕಟ್ಟಡಗಳನ್ನು ವೈದ್ಯಕೀಯ ಚಿಕಿತ್ಸೆ ನೀಡಲು ತಕ್ಷಣವೇ ಬಳಸಿಕೊಳ್ಳಬೇಕು. ಈ ಸಂಬಂಧ ಶಾಸಕ ಎಂ.ಚಂದ್ರಪ್ಪ ಏನಾದ್ರೂ ತಕಾರಾರು ತೆಗೆದರೆ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಜನರಿಗೆ ಆರೋಗ್ಯ ಸೇವೆ ಮುಖ್ಯ ಆಗಬೇಕು ಎಂದು ಆಂಜನೇಯ ಒತ್ತಾಯಿಸಿದ್ದಾರೆ.

 

ಸಂಯುಕ್ತವಾಣಿ

Share. Facebook Twitter Pinterest LinkedIn Tumblr WhatsApp Email
Previous ArticlePrevious Post
Next Article ಕೋಟೆ ನಾಡಿನಲ್ಲೂ ಕಾಣಿಸಿಕೊಂಡ ಬ್ಲಾಲ್ ಫಂಗಸ್
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.