Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಜಿಲ್ಲೆಯಲ್ಲಿ 31.06 ಲಕ್ಷ ನಗದು, 8.16 ಲಕ್ಷ ಮೌಲ್ಯದ ಮದ್ಯ, ಮಾದಕಗಳ ವಶ  – ದಿವ್ಯಪ್ರಭು ಜಿ.ಆರ್.ಜೆ
ಜಿಲ್ಲಾ ಸುದ್ದಿ

ಜಿಲ್ಲೆಯಲ್ಲಿ 31.06 ಲಕ್ಷ ನಗದು, 8.16 ಲಕ್ಷ ಮೌಲ್ಯದ ಮದ್ಯ, ಮಾದಕಗಳ ವಶ  – ದಿವ್ಯಪ್ರಭು ಜಿ.ಆರ್.ಜೆ

D KumaraswamyBy D KumaraswamyApril 10, 2023No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಜಿಲ್ಲೆಯಲ್ಲಿ 31.06 ಲಕ್ಷ ನಗದು, 8.16 ಲಕ್ಷ ಮೌಲ್ಯದ ಮದ್ಯ, ಮಾದಕಗಳ ವಶ
– ದಿವ್ಯಪ್ರಭು ಜಿ.ಆರ್.ಜೆ

 

 

ವಿಧಾನಸಭಾ ಸಾರ್ವತ್ರಿಕ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ತೀವ್ರ ನಿಗಾ ವಹಿಸಲಾಗಿದ್ದು ಈವರೆಗೆ ಜಿಲ್ಲೆಯಲ್ಲಿ ದಾಖಲೆ ರಹಿತ ರೂ.31.06 ಲಕ್ಷ ನಗದು, 7.86 ಲಕ್ಷ ರೂ. ಮೌಲ್ಯದ ಒಟ್ಟು 1956.22 ಲೀ. ಅಕ್ರಮ ಮದ್ಯ ಹಾಗೂ 30,500 ರೂ. ಅಂದಾಜು ಮೌಲ್ಯದ 1.267 ಕೆ.ಜಿ ಮಾದಕ ವಸ್ತುವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.
ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಅಕ್ರಮ ಚಟುವಟಿಕೆಗಳನ್ನು ನಿಗ್ರಹಿಸಲು ಜಿಲ್ಲೆಯಾದ್ಯಂತ 35 ಚೆಕ್‍ಪೋಸ್ಟ್‍ಗಳು ಕಾರ್ಯನಿರ್ವಹಿಸುತ್ತಿವೆ. ದಿನದ 24 ಗಂಟೆಯೂ ಚೆಕ್‍ಪೋಸ್ಟ್‍ಗಳಲ್ಲಿ ಅಧಿಕಾರಿ, ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.  ಜಿಲ್ಲಾಧಿಕಾರಿಗಳು ಸೋಮವಾರದಂದು ಖುದ್ದಾಗಿ ಹಿರಿಯೂರು ತಾಲ್ಲೂಕಿನ ಗುಯಿಲಾಳು ಚೆಕ್‍ಪೋಸ್ಟ್, ಪಿ.ಡಿ. ಕೋಟೆ ಚೆಕ್‍ಪೋಸ್ಟ್ ಸೇರಿದಂತೆ ವಿವಿಧೆಡೆ ಸ್ಥಾಪಿಸಲಾಗಿರುವ ಚೆಕ್‍ಪೋಸ್ಟ್ ಗಳಿಗೆ ಭೇಟಿ ನೀಡಿ, ವಾಹನಗಳ ತಪಾಸಣೆ ಕಾರ್ಯವೈಖರಿಯನ್ನು ಪರಿಶೀಲಿಸಿದರು.  ಚುನಾವಣೆ ಸಂದರ್ಭದಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ನಿಟ್ಟಿನಲ್ಲಿ ಅಕ್ರಮವಾಗಿ ನಗದು ಸಾಗಾಣಿಕೆ, ಮದ್ಯ ಸಾಗಾಣಿಕೆ ಅಲ್ಲದೆ ಸೀರೆ, ಕುಕ್ಕರ್ ಸೇರಿದಂತೆ ವಿವಿಧ ಬಗೆಯ ಸಾಮಗ್ರಿಗಳ ಸಾಗಾಣಿಕೆ ಸಂಭವ ಹೆಚ್ಚಾಗಿರುತ್ತದೆ, ಚೆಕ್‍ಪೋಸ್ಟ್‍ಗಳಲ್ಲಿ ಈ ಬಗ್ಗೆ ದಿನದ 24 ಗಂಟೆಯೂ ತೀವ್ರ ನಿಗಾ ವಹಿಸಬೇಕು, ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರುವಂತಿಲ್ಲ ಎಂದು ತಾಕೀತು ಮಾಡಿದರು.   ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಚೆಕ್‍ಪೋಸ್ಟ್ ಸಿಬ್ಬಂದಿಗಳಿಗೆ ಅಕ್ರಮ ತಡೆ ಕುರಿತಂತೆ ಸಲಹೆ ಸೂಚನೆಗಳನ್ನು ನೀಡಿದರು. ರೂ.31,06,700 ನಗದು ವಶ: ಜಿಲ್ಲೆಯಲ್ಲಿ ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಿನ ನಿಗಾ ವಹಿಸಲು ರಚಿಸಲಾಗಿರುವ ಫ್ಲೈಯಿಂಗ್ ಸ್ಕ್ವಾಡ್ ಹಾಗೂ ಸ್ಟ್ಯಾಟಿಕ್ ಸರ್ವೆಲೆನ್ಸ್ ತಂಡಗಳು ಅಕ್ರಮ ತಡೆಗೆ ಕಾರ್ಯೋನ್ಮುಖರಾಗಿವೆ.  ಜಿಲ್ಲೆಯಲ್ಲಿ ಈವರೆಗೆ ಒಟ್ಟು ರೂ. 31,06,700 ನಗದು ವಶ ಪಡಿಸಿಕೊಳ್ಳಲಾಗಿದೆ. ಮೊಳಕಾಲ್ಮುರು ತಾಲ್ಲೂಕಿನಲ್ಲಿ ರೂ. 11,02,700, ಹಿರಿಯೂರು ತಾಲ್ಲೂಕಿನಲ್ಲಿ ರೂ.17,84,000 ನಗದು ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ ರೂ.2,20,000 ಸೇರಿದಂತೆ ಒಟ್ಟು ರೂ.31,06,700 ನಗದು ವಶ ಪಡಿಸಿಕೊಳ್ಳಲಾಗಿದೆ.8.16 ಲಕ್ಷ ಮೌಲ್ಯದ ಮದ್ಯ, ಮಾದಕಗಳ ವಶ: ಜಿಲ್ಲೆಯಲ್ಲಿ ಈವರೆಗೆ ಒಟ್ಟು 8.16 ಲಕ್ಷ ಮೌಲ್ಯದ ಅಕ್ರಮ ಮದ್ಯ, ಮಾದಕಗಳ ವಸ್ತುಗಳ ವಶಪಡಿಸಿಕೊಳ್ಳಲಾಗಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ 1,48,951.42 ರೂ. ಮೌಲ್ಯದ 382.090 ಲೀ. ಅಕ್ರಮ ಮದ್ಯ ಹಾಗೂ 15,000 ರೂ. ಮೌಲ್ಯದ 0.514 ಕೆ.ಜಿ. ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ.  ಮೊಳಕಾಲ್ಮೂರು ತಾಲ್ಲೂಕಿನಲ್ಲಿ 1,02,792.93 ರೂ. ಮೌಲ್ಯದ 255.190 ಲೀ. ಮದ್ಯ,   ಚಿತ್ರದುರ್ಗ ತಾಲ್ಲೂಕಿನಲ್ಲಿ 1,14,046.81 ರೂ. ಮೌಲ್ಯದ 270.160 ಲೀ. ಮದ್ಯ ಹಾಗೂ 10,500 ರೂ. ಮೌಲ್ಯದ 0.541 ಕೆ.ಜಿ. ಮಾದಕ, ಹಿರಿಯೂರು ತಾಲ್ಲೂಕಿನಲ್ಲಿ 2,23,876.91 ರೂ. ಮೌಲ್ಯದ 569.520 ಲೀ. ಮದ್ಯ ಹಾಗೂ 5,000 ರೂ. ಮೌಲ್ಯದ 0.212 ಕೆ.ಜಿ. ಮಾದಕ,  ಹೊಸದುರ್ಗ ತಾಲ್ಲೂಕಿನಲ್ಲಿ 86,807 ರೂ. ಮೌಲ್ಯದ 211.140 ಲೀ. ಮದ್ಯ,  ಹೊಳಲ್ಕೆರೆ ತಾಲ್ಲೂಕಿನಲ್ಲಿ 1,09,526.96 ರೂ. ಮೌಲ್ಯದ 268.121 ಲೀ ಮದ್ಯ ವಶಪಡಿಸಿಕೊಂಡು, ಅಕ್ರಮ ಚಟುವಟಿಕೆ ನಡೆಸಿದವರ ವಿರುದ್ಧ ಕಾನೂನು ರೀತ್ಯ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr WhatsApp Email
Previous Articleತಪ್ಪಿದ ಕಾಂಗ್ರೆಸ್ ಟಿಕೆಟ್ ಪಕ್ಷೇತರ ಅಭ್ಯರ್ಥಿಯಾಗಿ ಎಸ್ ಕೆ ಬಿ ಪತ್ನಿ ಸೌಭಾಗ್ಯ ಕಣಕ್ಕೆ
Next Article ಕೆರೆ ಹೆಸರಲ್ಲಿ ಕೋಟಿ ಕೋಟಿ ಲೂಟಿ ಶಾಸಕ ಎಂ.ಚಂದ್ರಪ್ಪ ಸಾಧನೆ:ಮಾಜಿ ಸಚಿವ ಎಚ್.ಆಂಜನೇಯ ಆರೋಪ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.