ಜಿಲ್ಲೆಯಲ್ಲಿ 37 ಜನರಿಗೆ ಕೋವಿಡ್ ಸೋಂಕು ದೃಢ

ಆರೋಗ್ಯ

ಜಿಲ್ಲೆಯಲ್ಲಿ 37 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 12,619ಕ್ಕೆ ಏರಿಕೆ
ಚಿತ್ರದುರ್ಗ, ನವಂಬರ್06:Chitradurga 37 corona positive case
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 37 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,619 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶುಕ್ರವಾರ 56 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ಒಟ್ಟು 2132 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 37 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 12,619ಕ್ಕೆ ಏರಿಕೆಯಾಗಿದೆ. ಒಟ್ಟು 60 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 12,134 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 424 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 99,928 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 1,19,915 ಜನರ ಮಾದರಿ ಸಂಗ್ರಹಿಸಲಾಗಿದ್ದು, 1,06,198 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 606 ಜನರ ವರದಿ ಬರುವುದು ಬಾಕಿ ಇದೆ. 492 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

 

 

 

ಸಂಯುಕ್ತವಾಣಿ

ಡಿ.ಕುಮಾರಸ್ವಾಮಿ

Leave a Reply

Your email address will not be published. Required fields are marked *