ಚಿತ್ರದುರ್ಗದಲ್ಲಿ ಜವರಾಯನ ಅಟ್ಟಹಾಸಕ್ಕೆ 5 ಜನರ ಬಲಿ
ಚಿತ್ರದುರ್ಗ,ಮಾ09: ಗುಡ್ಡದ ರಂಗವ್ವನಹಳ್ಳಿ ಬಳಿ ನಿಂತಿದ್ದ ಲಾರಿಗೆ ಹಿಂಬಂದಿಯಿಂದ ಇನ್ನೋವಾ ಕಾರು ಡಿಕ್ಕಿ ಹೊಡೆದ,ಭೀಕರ ಅಪಘಾತದಲ್ಲಿ ಸ್ಥಳದಲ್ಲಿಯೇ 5 ಜನರು ಮೃತಪಟ್ಟ ಘಟನೆ ಇಂದು ನಡೆದಿದೆ.
ಮೃತರನ್ನು ರುದ್ರಸ್ವಾಮಿ, ಮಲ್ಲಕಾರ್ಜುನ,ಎನ್ ಬಿ ಚಿದಂಬರಾಚಾರ್, ಶಾಂತಮೂರ್ತಿ ಮತ್ತು ಇನ್ನೋವಾ ಕಾರು ಚಾಲಕ ಚಂದ್ರಹಾಸ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಅಡಿಷನಲ್ ಎಸ್ಪಿ ಕುಮಾರಸ್ವಾಮಿ, ಡಿವೈಎಸ್ಪಿ ದಿನಕರ್ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.