ಜಿಲ್ಲೆಯಲ್ಲಿ 53 ಜನರಿಗೆ ಕೋವಿಡ್ ಸೋಂಕು ದೃಢ

ಆರೋಗ್ಯ

ಜಿಲ್ಲೆಯಲ್ಲಿ 53 ಜನರಿಗೆ ಕೋವಿಡ್ ಸೋಂಕು ದೃಢ
ಚಿತ್ರದುರ್ಗ, ನವೆಂಬರ್ 18: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 53 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,186ಕ್ಕೆ ಏರಿಕೆಯಾಗಿದೆ.

 

 

 


ಜಿಲ್ಲೆಯ ಹಲವೆಡೆ ಕೋವಿಡ್‍ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 37 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಬುಧವಾರ ಒಟ್ಟು 2691 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಒಟ್ಟು 64 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 12,858 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಸದ್ಯ 263 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,06,997 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.ಈವರೆಗೆ 1,43,795 ಜನರ ಮಾದರಿ ಸಂಗ್ರಹಿಸಲಾಗಿದ್ದು, 1,28,684 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1428 ಜನರ ವರದಿ ಬರುವುದು ಬಾಕಿ ಇದೆ. 497 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.
ಸಂಯುಕ್ತವಾಣಿ

Leave a Reply

Your email address will not be published. Required fields are marked *