ಮದುವೆಗೆಂದು ಹೊರಟ ಬಸ್ ಪಲ್ಟಿ ಓರ್ವ ಸಾವು 60 ಜನರಿಗೆ ಗಾಯ
ಇವರೆಲ್ಲರೂ ಕೂಡ ಮದುವೆಗೆ ಹೋಗಿ ವಧು ವರರಿಗೆ ಅಕ್ಷತೆ ಹಾಕಬೇಕಿತ್ತು. ಆದರೆ ವಿಧಿಯಾಟ ಬೇರೆನೆಯಾಗಿದೆ ಸಂತಸದ ಮನೆಯಲ್ಲಿ ಈಗ ಸೂತಕ ಮನೆ ಮಾಡಿದೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಆವಿನಹಟ್ಟಿ ಹಾಗೂ ಉಗಣೆಕಟ್ಟೆ ಗ್ರಾಮದ ಮಧ್ಯ ಭಾಗದಲ್ಲಿ ಖಾಸಗಿ ಬಸ್ಸೊಂದು ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಸ್ಥಳದಲ್ಲಿ ಓರ್ವ ಮೃತಪಟ್ಟು 60 ಜನರಿಗೆ ಗಂಭೀರ ಗಾಯವಾಗಿದೆ.
ಚಿಕ್ಕ ಯಗಟಿಯಿಂದ ದಾವಣಗೆರೆಯಲ್ಲಿನ ಮದುವೆಗೆ ಸುಮಾರು 70 ಕ್ಕೂ ಹೆಚ್ಚು ಜನರು ತೆರಳುತ್ತಿದ್ದರು, ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಸ್ಥಳದಲ್ಲಿ ಓರ್ವ ಮೃತಪಟ್ಟಿದ್ದಾನೆ
60 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಹೊಳಲ್ಕೆರೆ, ದಾವಣಗೆರೆ ಹಾಗೂ ಚಿತ್ರದುರ್ಗ ಆಸ್ಪತ್ರೆಗಳಿಗೆ 108 ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.





