Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಡಿ. ಉಮಾಪತಿ ಆಯ್ಕೆ
ರಾಜ್ಯ

ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಡಿ. ಉಮಾಪತಿ ಆಯ್ಕೆ

D KumaraswamyBy D KumaraswamyDecember 5, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಡಿ.ಉಮಾಪತಿಯವರಿಗೆ
ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

ಬೆಂಗಳೂರು ಡಿ.5:ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ” ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ ,ವಿಶೇಷ ಲೇಖನಗಳ ಪ್ರಕಟಣೆಯನ್ನು ಗುರುತಿಸಿ,ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿಯವರು 2024 ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ “ವಡ್ಡರ್ಸೆ ರಘುರಾಮಶೆಟ್ಟಿ” ಅವರ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು. ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.ಪ್ರಶಸ್ತಿಯು 2 ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

ಡಿ.ಉಮಾಪತಿ ಅವರ ಪರಿಚಯ:ಮಾರ್ಚ್ 18,1959 ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಕೆ. ದಾಸಪ್ಪ ಹನುಮಮ್ಮ ದಂಪತಿಗೆ ಜನಿಸಿದ ಡಿ ಉಮಾಪತಿ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಬಿ.ಎ, ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಎರಡನೆ ರ‍್ಯಾಂಕ್ ಪಡೆದವರು.

 

 

ನ್ಯೂ ಇಂಡಿಯನ್ ಎಕ್ಸಪ್ರೆಸ್ ಸಮೂಹ ಸಂಸ್ಥೆಯ ಕನ್ನಡಪ್ರಭ, ಈ ಟಿವಿಯ ದೆಹಲಿ ಕರೆಸ್ಪಾಂಡೆಂಟ್ ಅಗಿ 27 ವರ್ಷಗಳ ಪರಿಣಾಮಕಾರಿ ವರದಿಗಳಿಂದ ಹೆಸರುಗಳಿಸಿದವರು.

ಪಾರ್ಲಿಮೆಂಟ್ ವರದಿ, ಚುನಾವಣಾ ವಿಶ್ಲೇಷಣೆಗಳು , ಸುಪ್ರೀಂ ಕೋರ್ಟು ಗಳಲ್ಲಿನ ನದಿ ನೀರು ನ್ಯಾಯಾಧೀಕರಣ ವ್ಯಾಜ್ಯಗಳ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು, ಮತ್ತು ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜೊತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಇವರದ್ದಾಗಿದೆ.

ದೆಹಲಿಯಲ್ಲಿ ನೆಲೆಸಿರುವ ಡಿ. ಉಮಾಪತಿ ಅವರು ಆಂದೋಲನ , ರೈತ ಚಳವಳಿ, ವಿಜಯಕರ್ನಾಟಕ, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ. ಪ್ರಸ್ತುತ ’ನ್ಯಾಯಪಥ(ಗೌರಿ ಮಿಡಿಯಾ)’ ಮತ್ತು ’ಈದಿನ’ ವೆಬ್ ಜರ್ನಲ್ ಸಂದರ್ಶಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

’ದೆಹಲಿ ನೋಟ’ , ’ಪದಕುಸಿಯೇ ನೆಲವಿಲ್ಲ’ ಉಮಾಪತಿ ಅವರ ಎರಡು ಮಹತ್ವದ ಕೃತಿಗಳು ಪ್ರಕಟವಾಗಿವೆ.

Share. Facebook Twitter Pinterest LinkedIn Tumblr WhatsApp Email
Previous Articleಟ್ಯಾಲೆಂಟ್ ಹಂಟ್ ನಡೆಸಿದ ನೂತನ್ ಎಜುಕೇಷನ್ ಮತ್ತು ಡೆವೆಲೆಪ್ಮೆಂಟ್ ಸೊಸೈಟಿ
Next Article 7 ಕೋಟಿ 45 ಲಕ್ಷ ರೂ.ವೆಚ್ಚದಲ್ಲಿ ನೂತನ ಚೆಕ್‍ಡ್ಯಾಂಗಳ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಚಂದ್ರಪ್ಪ
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.