ಹಾಡು ಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಒಡವೆ ದೋಚಿದ ಡರೋಡೆ ಗ್ಯಾಂಗ್

ಕ್ರೈಂ ಜಿಲ್ಲಾ ಸುದ್ದಿ
Spread the love

 

ದಾವಣಗೆರೆ: ಮನೆಗೆ ನುಗ್ಗಿದ ದರೋಡೆಕೋರರ ತಂಡವು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾದ ಘಟನೆ ನಗರದಲ್ಲಿ ನಡೆದಿದೆ.

ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಗಮನಿಸಿದ ಕಳ್ಳರು ಬೀಗ ಒಡೆದು ಒಳನುಗ್ಗಿ ಅಲಮಾರಿಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣವನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ. ಮನೆ ಮಾಲೀಕರು ವಾಪಸ್ ಬಂದಾಗ ಘಟನೆ ಬೆಳಕಿಗೆ ಬಂದಿದೆ.

 

 

ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.

ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *