ರಾಜಕೀಯ ನಿವೃತ್ತಿ ಸುಳಿವು ನೀಡಿದ ಡಿಕೆ ಶಿವಕುಮಾರ್
ರಾಮನಗರ : ನನಗೆ ಇದೀಗ 60 ವರ್ಷ ತುಂಬಿದೆ, ಇನ್ನೂ 8 ರಿಂದ 10 ವರ್ಷ ಮಾತ್ರ ರಾಜಕಾರಣ ಮಾಡಬಹುದು ಎಂದು ಹೇಳುವ ಮೂಲಕ ರಾಜಕೀಯ ನಿವೃತ್ತಿ ಕುರಿತು ಕನಕಪುರ ಬಂಡೆ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ ಕನಕಪುರ ಕ್ಷೇತ್ರದ ಜನರು ನನಗೆ ಮತ ನೀಡಿ ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ. ಇನ್ನೂ 8 ರಿಂದ 10 ವರ್ಷ ಮಾತ್ರ ರಾಜಕಾರಣ ಮಾಡಬಹುದು, ಆ ಮೇಲೆ ರಾಜಕೀಯ ನಿವೃತ್ತಿ ಪಡೆಯಲಿದ್ದೇನೆ ಎಂದರು.ಕನಕಪುರದ ತಮ್ಮ ನಿವಾಸದಲ್ಲಿ ಶಿಕ್ಷಣ ಸಂಸ್ಥೆಯ ಸರ್ವ ಸದಸ್ಯರ ಸಭೆಯಲ್ಲಿ ಈ ಕುರಿತು ಮಾತನಾಡಿದ್ದಾರೆ. ರಾಜಕೀಯ ನಿವೃತ್ತಿ ಪಡೆಯುವದರೊಳಗೆ ಶಿಕ್ಷಣ ಸಂಸ್ಥೆಯಲ್ಲಿ ಏನಾದರೂ ಬದಲಾವಣೆ ತರಬೇಕು, ದೇವರು ಎಲ್ಲವನ್ನು ನೀಡಿದ್ದಾನೆ. ನನ್ನ ಮೇಲೆ ಹಲವು ಪ್ರಕರಣಗಳುದಾಖಲಾಗಿದ್ದು, ಅದೆಲ್ಲವನ್ನು ಅನುಭವಿಸುತ್ತೇನೆ. ಯಾವುದೇಕಾಮಗಾರಿಯಲ್ಲೂ ಕಮಿಷನ್ ಪಡೆದಿಲ್ಲ, ಜಾತಿ ಮೇಲೆ ನನಗೆ ನಂಬಿಕೆ ಇಲ್ಲ, ನೀತಿ ಮೇಲಿದೆ ಎಂದು ಡಿಕೆಶಿ ಹೇಳಿದರು.
ಡಿಕೆಶಿಗೆ ಇಡಿ ಸಮನ್ಸ್
ಇನ್ನೂ, ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಸಹೋದರರ ವಿಚಾರಣೆ ಮುಕ್ತಾಯವಾಗಿದ್ದು, ಡಿಕೆ ಸಹೋದರರು ಸತತ 4 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ.ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಹೋದರ ಡಿ.ಕೆ.ಸುರೇಶ್ ಅವರು ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ದೆಹಲಿಯಲ್ಲಿ ಇಡಿ ವಿಚಾರಣೆ ಎದುರಿಸಿದ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್ ‘ಯಂಗ್ ಇಂಡಿಯಾ ಹಣಕಾಸು ವ್ಯವಹಾರದ ಬಗ್ಗೆ ವರ್ಷದ ಮಾಹಿತಿ ಕೇಳಿದ್ದರು. ಅದಕ್ಕೆ ಸರಿಯಾದ ಉತ್ತರ ನೀಡಿದ್ದೇನೆ. ನಮ್ಮ ಸಂಸ್ಥೆಗಳ ಕುರಿತು ದಾಖಲೆ ಪತ್ರ ಕೇಳಿದ್ದಾರೆ, ದಾಖಲೆಗಳನ್ನು ಶೀಘ್ರ ಸಲ್ಲಿಸಲಿದ್ದೇನೆ , ನ್ಯಾಷನಲ್ ಹೆರಾಲ್ಡ್ ಬಗ್ಗೆ ಏನೂ ಕೇಳಿಲ್ಲ, ರಾಜಕಾರಣವನ್ನು ರಾಜಕೀಯ ಮೈದಾನದಲ್ಲೇ ಮಾಡಬೇಕು, ಸರ್ಕಾರಿ ಕಚೇರಿಯಲ್ಲಿ ಮಾಡಬಾರದು’ ಎಂದು ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಸಹೋದರರ ವಿಚಾರಣೆ ಮುಕ್ತಾಯವಾಗಿದ್ದು, ಡಿಕೆ ಸಹೋದರರು ಸತತ 4 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದು, ಇಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದೆ. ಸದ್ಯ ಡಿಕೆ ಸಹೋದರರು ಇಡಿ ಕಛೇರಿಯಿಂದ ತೆರಳಿದ್ದಾರೆ.ಸೆಪ್ಟೆಂಬರ್ 23ಕ್ಕೆ ಇಡಿ ವಿಚಾರಣೆ ಬರುವಂತೆ ಸಮನ್ಸ್ ನೀಡಿತ್ತು. ಆದರೆ ನಾವು ಭಾರತ್ ಜೋಡೋ ಯಾತ್ರೆಯಲ್ಲಿ ಇದ್ದೆವು. ಹೀಗಾಗಿ ಸಮಯಾವಕಾಶ ಕೇಳಿದ್ದೆವು. ಆದರೆ ಅಧಿಕಾರಿಗಳು ನಿರಾಕರಿಸಿದ ಹಿನ್ನೆಲೆ ನಾನು ವಿಚಾರಣೆಗೆ ಬಂದಿದ್ದೇನೆ. ನಾವು ಕಾನೂನಿಗೆ ಗೌರವ ಕೊಡಬೇಕು ಎಂದು ನಾನು ಮತ್ತು ನನ್ನ ಸಹೋದರ ಡಿ.ಕೆ.ಸುರೇಶ್ ದೆಹಲಿಗೆ ಬಂದಿದ್ದೇವೆ ಎಂದು ಡಿಕೆಶಿ ಹೇಳಿದ್ದರು.