Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಸ್ಥಳೀಯ ಡಾ. ಬಿ. ತಿಪ್ಪೇಸ್ವಾಮಿಗೆ ಟಿಕೆಟ್ ನೀಡಬೇಕು
ರಾಜ್ಯ

ಸ್ಥಳೀಯ ಡಾ. ಬಿ. ತಿಪ್ಪೇಸ್ವಾಮಿಗೆ ಟಿಕೆಟ್ ನೀಡಬೇಕು

D KumaraswamyBy D KumaraswamyFebruary 7, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಬರುವ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡುವಂತೆ ಕಾಂಗ್ರೆಸ್ ಪಕ್ಷದ ಮುಖಂಡರನ್ನು ಲಿಡ್ಕರ್ ನಿಗಮದ ಮಾಜಿ ಅಧ್ಯಕ್ಷ ಓ ಶಂಕರ್ ಒತ್ತಾಯಿಸಿದ್ದಾರೆ.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು, ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ 24 ಜನ ಅಭ್ಯರ್ಥಿಗಳು ಅರ್ಜಿ ಹಾಕಿದ್ದಾರೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 18 ಲಕ್ಷ ಮತದಾರರಿದ್ದಾರೆ, ಅದರಲ್ಲಿ ಪರಿಶಿಷ್ಟ ಜಾತಿಯವರು 8 ಲಕ್ಷ ಮತದಾರರಿದ್ದು, ಅದರಲ್ಲಿ 4 ಲಕ್ಷ ಮಾದಿಗ ಸಮುದಾಯದ ಮತದಾರ ಇದ್ದಾರೆ. ಇದನ್ನು ಪಕ್ಷದ ವರಿಷ್ಠರು ಗಮನಿಸಿದ್ದಾರೆ. ಸ್ಥಳೀಯರಿಗೆ ಟಿಕೆಟ್ ನೀಡಬೇಕೆಂದು ವರಿಷ್ಠರ ಗಮನಕ್ಕೆ ಬಂದಿದೆ. ಕೆಲವರು ಮಿಸ್ ಗೈಡ್ ಮಾಡಿ ನನಗೆ ಟಿಕೆಟ್ ಸಿಕ್ಕಿದೆ ಅಂತ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿದರು.ಬೇರೆಯವರು ಜಿಲ್ಲೆಯ ಅಭಿವೃದ್ಧಿ ಮಾಡಿಲ್ಲ, ಸ್ಥಳೀಯರಾದರೆ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡುತ್ತಾರೆ. ಸ್ಥಳೀಯರಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಸ್ಥಳೀಯ ಅಭ್ಯರ್ಥಿ ಡಾ. ತಿಪ್ಪೇಸ್ವಾಮಿಗೆ ಟಿಕೆಟ್ ನೀಡಿದರೆ 2 ಲಕ್ಷ ಮತಗಳಿಂದ ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದರು.

 

 

ನಗರಸಭೆ ಮಾಜಿ ಅದ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆದರೂ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಹಾಗೂ ಜಗಳೂರಿನ ಇಮಾಮ್‍ಸಾಬ್ ರನ್ನು ಹೊರತುಪಡಿಸಿದರೆ, ಬೇರೆ ಯಾರಿಗೂ ಸಹ ಸ್ಥಳೀಯರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿರುವುದಿಲ್ಲ. ಸ್ಥಳೀಯರಿಗೆ ಟಿಕೆಟ್ ಕೊಟ್ಟರೆ ನಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು ಎಂದರು.

ನಗರಸಭೆಯ ಮತ್ತೋರ್ವ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ ಮಾತನಾಡಿ, ಬೇರೆಯವರಿಗೆ ಸಮಸ್ಯೆಗಳ ಅವರಿಗೆ ಅರಿವೇ ಇರುವುದಿಲ್ಲ. ಕಾಂಗ್ರೆಸ್ ಪಕ್ಷದ ಮುಖಂಡರು ಕಾಂಗ್ರೆಸ್ ಪಕ್ಷದಿಂದ ಸ್ಥಳೀಯರಿಗೆ ಟಿಕೆಟ್ ನೀಡಬೇಕು… ಅದರಲ್ಲೂ ಸ್ಥಳೀಯ ಅಭ್ಯರ್ಥಿಯಾದ ಡಾ. ತಿಪ್ಪೇಸ್ವಾಮಿ @ ಜೆ.ಜೆ ಹಟ್ಟಿ ತಿಪ್ಪೇಸ್ವಾಮಿ ರವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.

Share. Facebook Twitter Pinterest LinkedIn Tumblr WhatsApp Email
Previous Articleಅತ್ಯಾಚಾರಿಗೆ 10 ವರ್ಷ ಶಿಕ್ಷ ವಿಧಿಸಿದ ನ್ಯಾಯಾಲಯ
Next Article ಬಿಜೆಪಿ ಮನೆಯೊಂದು‌ ಮೂರು ಬಾಗಿಲು: ಭುಗಿಲೆದ್ದ ಅಸಮಾಧಾನ
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.