ಆಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಜಿಲ್ಲಾ ಸುದ್ದಿ

ಆಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

 

 

 

ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಸಮೀಪದಲ್ಲಿರುವ ಮನಮೈನಹಟ್ಟಿ ಗ್ರಾಮದ ಮಹಿಳೆ ಸುಚಿತ್ರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.ಮನಮೈನಹಟ್ಟಿ ಗ್ರಾಮದಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಹೆರಿಗೆಗೆ ಕರೆದುಕೊಂಡು ಬರುವ ಸಂದರ್ಭದಲ್ಲಿ ಬೆಳಗಟ್ಟ ಗ್ರಾಮದ ಸಮೀಪದಲ್ಲಿ ಆಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮವನ್ನು ನೀಡಿದ್ದಾರೆ.
ತಾಯಿ ಮತ್ತು ಮಗುವಿಗೆ ಯಾವುದೇ ರೀತಿ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.ಈ ಸಂದರ್ಭದಲ್ಲಿ ಆರೋಗ್ಯಧಿಕಾರಿ ಪ್ರಹ್ಲಾದ್, ಚಿದಾನಂದ ಹಾಗೂ ಆಶಾ ಕಾರ್ಯಕರ್ತರು ಇದ್ದರು.

Leave a Reply

Your email address will not be published. Required fields are marked *