ಹೊಸ ಮೊಬೈಲ್ ಗಾಗಿ ಪ್ರಾಣ ತೆತ್ತ ಯುವಕ

ಕ್ರೈಂ

ಅಜ್ಜ ಮೊಬೈಲ್ ಕೊಡಿಸಲಿಲ್ಲ ಎಂದು ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಳಲ್ಕೆರೆಯ ಕೊಳಾಳ್ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಯಶವಂತ್ ಎಂದು ಗುರುತಿಸಲಾಗಿದೆ.
ಅಕ್ಟೋಬರ್ 8 ರಂದು ಹಿಂದೂ ಮಹಾ ಗಣಪತಿ ಶೋಭಾಯಾತ್ರೆಯಲ್ಲಿ ಮೊಬೈಲ್ ಕಳೆದುಕೊಂಡಿದ್ದ ಯುವಕ, ಮೊಬೈಲ್ ಕೊಡಿಸುವಂತೆ ಹಠ ಹಿಡಿದ್ದಿದ್ದ, ಈರುಳ್ಳಿ ಬೆಳೆ ಬಂದ ನಂತರ ಮೊಬೈಲ್ ಕೊಡಿಸುವುದಾಗಿ ಅಜ್ಜ ಹೇಳಿದ್ದರು. ಇದರಿಂದ ಬೇಸತ್ತ ಯುವಕ ರಾಸಾಯನಿಕ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರಿಸ್ಥಿತಿ ಗಂಭೀರವಾದಾಗ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಚಿತ್ರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

 

 

Leave a Reply

Your email address will not be published. Required fields are marked *