Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸಲಾಗುವುದು: ಸಿಎಂ ಭರವಸೆ
ರಾಜ್ಯ

ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸಲಾಗುವುದು: ಸಿಎಂ ಭರವಸೆ

D KumaraswamyBy D KumaraswamyJune 25, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸಲಾಗುವುದು: ಸಿಎಂ ಭರವಸೆ

ಕುರಿಗಾಹಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, : ಕುರಿಗಾಹಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು.

ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮಾತ್ರ ಮೇಯಿಸಲು ಅವಕಾಶ ನೀಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕುರಿಗಳು ಸತ್ತರೆ ಒಂದು ಕುರಿಗೆ 5 ಸಾವಿರ ರೂಪಾಯಿ ಪರಿಹಾರ ನೀಡುವ ಅನುಗ್ರಹ ಯೋಜನೆ ಜಾರಿಯಲ್ಲಿದೆ. ಈ ಮೊತ್ತವನ್ನು ಇನ್ನಷ್ಟು ಹೆಚ್ಚಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದರು.

ರಾಜ್ಯದಲ್ಲಿನ ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸುವುದು, ಕುರಿಗಳಿಗೆ ಉಚಿತ ಲಸಿಕೆ ನೀಡಲೂ ಅಗತ್ಯ ಸೂಚನೆ ನೀಡಲಾಗುವುದು ಎಂದರು.

 

 

ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ ನೀಡಲು ವ್ಯವಸ್ಥೆ ಮಾಡಲಾಗುವುದು. ಈ ಗುರುತಿನ ಚೀಟಿ ಆಧಾರದ ಮೇಲೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಕೇರಂ ಕೈಗೊಳ್ಳಲಾಗುವುದು ಎಂದರು.

ಬಂದೂಕು ಪರವಾನಗಿ ನೀಡಲು ವ್ಯವಸ್ಥೆ,
ಕುರಿಗಾಹಿಗಳ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆಗಳಲ್ಲಿ ಆದ್ಯತೆ ಮೇರೆಗೆ ಪ್ರವೇಶ ನೀಡುವ ಬಗ್ಗೆ
ಬಜೆಟ್ ನಲ್ಲಿ ಘೋಷಣೆ ಮಾಡಿದ್ದು ಇವುಗಳಿಗೆ ಸರ್ಕಾರಿ ಆದೇಶ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಪಶುಸಂಗೋಪನಾ ಇಲಾಖೆಯಲ್ಲಿ 1300 ವೈದ್ಯರ ಹುದ್ದೆ ಖಾಲಿ ಇದ್ದು, ಪ್ರಸ್ತುತ 400 ವೈದ್ಯರನ್ನು ನೇಮಕ ಮಾಡಲಾಗುತ್ತಿದೆ. ಮುಂದಿನ ವರ್ಷ ಬಾಕಿ ವೈದ್ಯರ ನೇಮಕಾತಿ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕುರಿಗಾರರು ಕ್ಯಾಂಪ್ ಮಾಡಿರುವ ಕಡೆಗಳಲ್ಲೇ ವೈದ್ಯರು ಬಂದು ಚಿಕಿತ್ಸೆ ನೀಡಬೇಕು ಎಂದು ಸೂಚಿಸಲಾಗುವುದು.

ಕುರಿಗಾರರ ಕುರಿ ಕಳ್ಳತನವಾದರೆ ಕೂಡಲೇ ಪ್ರಕರಣ ದಾಖಲು ಮಾಡಬೇಕು, ಬಂಧಿಸಿ ತನಿಖೆ ಮಾಡಲು ಹಾಗು ರಕ್ಷಣೆ ನೀಡುವ ವ್ಯವಸ್ಥೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಹಿಂದಿನ ಸರ್ಕಾರ ಸತ್ತ ಕುರಿಗಳಿಗೆ ನೀಡುವ ಅನುಗ್ರಹ ಯೋಜನೆಯನ್ನು ನಿಲ್ಲಿಸಿದ್ದು, ಈ ಕುರಿತು ಪರಿಹಾರ ನೀಡುವ ಬಗ್ಗೆ ಎಲ್ಲಾ ಜಿಲ್ಲೆಗಳಿಂದ ವರದಿ ತರಿಸಲಾಗುವುದು ಎಂದರು.

ಗೋಮಾಳಗಳನ್ನು ಯಾರಿಗೂ ಪರಭಾರೆ ಮಾಡಬಾರದೆಂದು ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಆದೇಶ ಹೊರಡಿಸಲಾಗಿತ್ತು. ಗೋಮಾಳಗಳ ರಕ್ಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಈ ಭರವಸೆ ನೀಡಿದರು.

ಪಶುಸಂಗೋಪನಾ ಸಚಿವ ವೆಂಕಟೇಶ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವೇಂದ್ರಪ್ಪ ವರ್ತೂರು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಪಶು ಸಂಗೋಪನಾ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleನಗರಸಭೆ ಆಯುಕ್ತರಿಂದ ಶಿಷ್ಟಚಾರ ಉಲ್ಲಂಘನೆ: ಕಾನೂನು ಕ್ರಮಕ್ಕೆ ಆಗ್ರಹಿಸಿದ ಸದಸ್ಯರು
Next Article ಹಾಲಿನ ಪ್ರಮಾಣ ಹೆಚ್ಚಿಸಿದೆ, ಹಾಲಿನ ದರ ಹೆಚ್ಚಳವಾಗಿಲ್ಲ: ಸಿಎಂ ಸಿದ್ದರಾಮಯ್ಯ
D Kumaraswamy
  • Tumblr

Related Posts

ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

January 31, 2026

ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

January 30, 2026

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.