Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡುವುದು ರಾಜಧರ್ಮ : ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯ

ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡುವುದು ರಾಜಧರ್ಮ : ಮುಖ್ಯಮಂತ್ರಿ ಸಿದ್ದರಾಮಯ್ಯ

D KumaraswamyBy D KumaraswamyAugust 30, 2023No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡುವುದು ರಾಜಧರ್ಮ : ಮುಖ್ಯಮಂತ್ರಿ ಸಿದ್ದರಾಮಯ್ಯ

ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡಬೇಕಿರುವುದು ಯಾವುದೇ ಸರ್ಕಾರದ ರಾಜಧರ್ಮ. ಅದರಂತೆ ನಮ್ಮ ಸರ್ಕಾರ ಗೃಹಲಕ್ಮೀ ಯೋಜನೆಯನ್ನು ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು .

ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ, ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಈವರೆಗೆ ಕೊಟ್ಟ ಮಾತಿನಂತೆ ಯಾವ ಸರ್ಕಾರವೂ ನಡೆದುಕೊಂಡಿಲ್ಲ ಎಂದರೆ ಅತಿಶಯೋಕ್ತಿಯಲ್ಲ. ನಮ್ಮ ಸರ್ಕಾರ ಮುಂದಿನ 5 ವರ್ಷಗಳಲ್ಲಿ ಜನರಿಗೆ ನೀಡಿರುವ ಭರವಸೆಗಳನ್ನು ನೂರಕ್ಕೆ ನೂರು ಈಡೇರಿಸುವ ವಿಶ್ವಾಸ, ಭರವಸೆ ನಮಗಿದೆ. ಐದು ಗ್ಯಾರಂಟಿಗಳನ್ನು ನಾವು ಜನರ ಮುಂದಿಟ್ಟಿದ್ದೆವು. ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ, ನಾಲ್ಕನೇ ಗ್ಯಾರಂಟಿಯಾಗಿ ಗೃಹಲಕ್ಷ್ಮೀ ಯೋಜನೆಯನ್ನು ಇಂದು ಜಾರಿಮಾಡಲಾಗಿದೆ ಎಂದರು.

*ನೂರ ದಿನಗಳ ಸಾಧನೆ ಬಿಂಬಿಸುವ ಕಿರುಹೊತ್ತಿಗೆ*
ಈ ತಿಂಗಳ 27 ನೇ ತಾರೀಖೆಗೆ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಜನತೆಯ ಮುಂದೆ ಸರ್ಕಾರದ ಸಾಧನೆಗಳನ್ನು ತಿಳಿಸಲು ಸಣ್ಣ ಕೈಪಿಡಿ ಹೊರತರಲಾಗಿದೆ. ಈ ಕಿರುಹೊತ್ತಿಗೆ ಕಳೆದ ಮೂರು ತಿಂಗಳು, 10 ದಿನಗಳಲ್ಲಿ ಮಾಡಿರುವ ಸಾಧನೆಗಳನ್ನು ಒಳಗೊಂಡಿದೆ. ಈ ರಾಜ್ಯದ ಜನತೆಗೆ ನಮ್ಮ ಕರ್ತವ್ಯ ಜವಾಬ್ದಾರಿ ಹಾಗೂ ಸಾಧನೆಗಳನ್ನು ಮುಂದಿಡುವ ಪ್ರಯತ್ನ ಮಾಡಿದೆ ಎಂದರು.

 

 

*ಬೃಹತ್ ಪ್ರಮಾಣದಲ್ಲಿ ಬಡವರಿಗೆ ಹಣ ವರ್ಗಾವಣೆ*
ಕರ್ನಾಟಕದಲ್ಲಿ 1.26 ಕೋಟಿ ಕುಟುಂಬಗಳಿವೆ. ಆ ಕುಟುಂಬಗಳ ಯಜಮಾನಿಯಾರಿಗೆ 2000 ರೂ.ಗಳನ್ನು ಅವರ ಖಾತೆಗೆ ಇಂದು ಜಮಾ ಮಾಡಲಾಗಿದೆ. ಈ ಯೋಜನೆಗೆ 1.10 ಕೋಟಿ ಜನ ನೋಂದಾಯಿಸಿಕೊಂಡಿದ್ದಾರೆ. ಇಡೀ ಭಾರತದಲ್ಲಿ ಯಾವ ರಾಜ್ಯವೂ ತೊಂದರೆಯಲ್ಲಿರುವ ಜನರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಂದರೆ ವರ್ಷಕ್ಕೆ 24 ಸಾವಿರ ಹಣವನ್ನು ಬಡವರಿಗೆ ವರ್ಗಾಯಿಸಿಲ್ಲ ಎನ್ನುವುದು ಕಟುಸತ್ಯ. ಜೂನ್ 11 ರಂದು ಶಕ್ತಿ ಯೋಜನೆ ಜಾರಿಯಾಗಿದ್ದು, 48,500 ಕೋಟಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮವನ್ನು ಜುಲೈ 10 ರಂದು ಜಾರಿಗೆ ತಂದೆವು. ಕೇಂದ್ರ ಸರ್ಕಾರ ಅಕ್ಕಿಯನ್ನು ನೀಡದೇ ಹೋದರೂ ನಾವು 170 ರೂ.ಗಳನ್ನು ಅಕ್ಕಿ ಸಿಗುವವರೆಗೂ ಪ್ರತಿ ಬಿಪಿಎಲ್, ಅಂತ್ಯೋದಯ ಕಾರ್ಡುದಾರರ ಖಾತೆಗೆ ಜಮಾ ಮಾಡಿದ್ದೇವೆ ಎಂದರು.

*ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ*
ಜುಲೈ ತಿಂಗಳಿಂದ ಗೃಹಜ್ಯೋತಿ ಕಾರ್ಯಕ್ರಮದಡಿ 200 ಯೂನಿಟ್‍ವರೆಗೆ ವಿದ್ಯುತ್ ಬಳಸುವವರಿಗೆಲ್ಲಾ ಉಚಿತ ವಿದ್ಯುತ್ ಒದಗಿಸಿ ಶೂನ್ಯ ಬಿಲ್ ನೀಡುತ್ತಿದ್ದೇವೆ. ಈ ಯೋಜನೆಗೆ 1.56 ಕೋಟಿ ಜನ ನೋಂದಾಯಿಸಿಕೊಂಡಿದ್ದಾರೆ. ಪ್ರಧಾನಿಗಳೇ ಈ 5 ಗ್ಯಾರಂಟಿಗಳನ್ನು ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ಆದರೆ ಗೃಹಲಕ್ಷ್ಮೀ ಯೋಜನೆ ಜಾರಿಯಾಗಿದೆ. ಯುವನಿಧಿಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಪ್ರಾರಂಭವಾಗಲಿದೆ. ಎಲ್ಲಾ ಅಭಿವೃದ್ದಿ ಕಾರ್ಯಕ್ರಮಗಳನ್ನು ಜಾರಿ ಮಾಡಿ, ನೀರಾವರಿ, ಲೋಕೋಪಯೋಗಿ, ವಸತಿ, ಗ್ರಾಮಿಣಾಭಿವೃದ್ಧಿಗೆ ಅನುದಾನವಿಟ್ಟು 5 ಗ್ಯಾರಂಟಿಗಳನ್ನು ಜಾರಿ ಮಾಡಿದೆ. 56 ಸಾವಿರ ಕೋಟಿ ರೂ.ಗಳು ಒಂದು ವರ್ಷಕ್ಕೆ ತಗಲುತ್ತದೆ. ನಮ್ಮದು ಬಡವರ , ದಲಿತರ, ಹಿಂದುಳಿದ, ಅಲ್ಪಸಂಖ್ಯಾತರ ರೈತರ, ಕಾರ್ಮಿಕರ, ಯುವಕರ ಪರವಾದ ಸರ್ಕಾರ ಎಂದು ಸಾಬೀತು ಮಾಡಲಾಗಿದೆ. ಯಾರು ಏನೇ ಹೇಳಿದರೂ ನಾನು ನುಡಿದಂತೆ ನಡೆದಿದ್ದೇವೆ. ವಿರೋಧ ಪಕ್ಷದವರು ಹೇಳಿರುವುದು ಸುಳ್ಳು ಎಂದರು. ರಾಜ್ಯದಲ್ಲಿ ಐತಿಹಾಸಿಕ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ಓದಲಾಯಿತು.

ನೂರು ದಿನಗಳಲ್ಲಿ ಸರ್ಕಾರದ ಸಾಧನೆಯನ್ನು ಬಿಂಬಿಸುವ *ಕರ್ನಾಟಕ ಮಾದರಿ* ಪುಸಕ್ತವನ್ನು ಬಿಡುಗಡೆ ಮಾಡಲಾಯಿತು.

ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ರಾಜ್ಯಸಭಾ ಸದಸ್ಯ ಹಾಗೂ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಸಚಿವ ಡಾ: ಕೆ.ಹೆಚ್.ಮುನಿಯಪ್ಪ, ಸಚಿವರಾದ ಕೃಷ್ಣಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಚೆಲುವರಾಯಸ್ವಾಮಿ, ಕೆ.ಹೆಚ್.ಮುನಿಸ್ವಾಮಿ, ಡಾ:ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಪಿ.ನರೇಂದ್ರಸ್ವಾಮಿ, ಬೋಸರಾಜು , ಶಾಸಕರು ಉಪಸ್ಥಿತರಿದ್ದರು.

—

Share. Facebook Twitter Pinterest LinkedIn Tumblr WhatsApp Email
Previous Articleರಾಜಕಾರಣದಲ್ಲಿ ಉತ್ತುಂಗಕ್ಕೆ ಹೋಗಿದ್ದರೂ ಅಂತಿಮವಾಗಿ ಸಾರ್ವಜನಿಕರ ಬಳಿ ಬರಲೇಬೇಕು
Next Article ನಮ್ಮ ಗ್ಯಾರಂಟಿ ಯೋಜನೆಗಳು ಬಿಜೆಪಿ ಆರೋಪಗಳನ್ನು ಸುಳ್ಳು ಎಂದು ಸಾಬೀತುಪಡಿಸಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.