ಹಾಗೂ ನ್ಯಾಯಸಮ್ಮತ ಚುನಾವಣೆಗೆ ಮಾಧ್ಯಮಗಳ ಸಹಕಾರ ಅಗತ್ಯ

ಜಿಲ್ಲಾ ಸುದ್ದಿ

 ಹಾಗೂ ನ್ಯಾಯಸಮ್ಮತ ಚುನಾವಣೆಗೆ ಮಾಧ್ಯಮಗಳ ಸಹಕಾರ ಅಗತ್ಯ

 

ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಮಾಧ್ಯಮಗಳ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣೆ ಅಧಿಕಾರಿ ಟಿ.ವೆಂಕಟೇಶ್ ಹೇಳಿದರು.

 

 

 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮಾದರಿ ನೀತಿ ಸಂಹಿತೆ ಹಾಗೂ ಮಾಧ್ಯಮಗಳ ಹೊಣೆಗಾರಿಕೆ ಕುರಿತಂತೆ ಮಾಧ್ಯಮ ಪ್ರತಿನಿಧಿಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಚುನಾವಣೆ ಕಾರ್ಯವನ್ನು ಸುಗಮವಾಗಿ ನಿರ್ವಹಿಸಲು ಹಾಗೂ ಮಾಧ್ಯಮಗಳೊಂದಿಗೆ ಸಮನ್ವಯಕ್ಕಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತ್ಯೇಕ ಘಟಕವನ್ನು ತೆರೆಯಲಾಗುವುದು. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಭೌಗೋಳಿಕ ವ್ಯಾಪ್ತಿ ದೊಡ್ಡದಿದೆ. ತುಮಕೂರು ಜಿಲ್ಲೆಯ ಎರೆಡು ವಿಧಾನಸಭಾ ಕ್ಷೇತ್ರಗಳು ಚಿತ್ರದುರ್ಗ ಲೋಕಸಭಾ ಕ್ಷೇತಕ್ಕೆ ಸೇರುತ್ತವೆ. ಮಾಧ್ಯಮಗಳು ತಮ್ಮ ಹೊಣೆಗಾರಿಕೆ ಅರಿತು ಯಶಸ್ವಿಯಾಗಿ ಚುನಾವಣೆ ನಡೆಸಲು ಸಹಕಾರ ನೀಡಬೇಕು. ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಚುನಾವಣೆ ಜಾಹೀರಾತುಗಳನ್ನು ಪ್ರಕಟಿಸುವ ಮುನ್ನ ಪ್ರಮಾಣೀಕರಣ ಪಡೆದುಕೊಳ್ಳಬೇಕು. ಮಾಧ್ಯಮಗಳು ಸುಳ್ಳು, ದ್ವೇಷ ಬಿತ್ತುವ ಹಾಗೂ ಪೇಯ್ಡ್ ನ್ಯೂಸ್ ಪ್ರಕಟಿಸಬಾರದು. ಇವುಗಳು ಮಾದರಿ ನೀತಿಯ ಸ್ಪಷ್ಟ ಉಲಂಘನೆಯಾಗುತ್ತವೆ. ಇದನ್ನು ಚುನಾವಣೆ ಆಯೋಗ ಗಂಭೀರವಾಗಿ ಪರಿಗಣಿಸುತ್ತದೆ. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಿಗೆ ಪ್ರಜಾಪ್ರಾತಿನಿಧ್ಯ ಕಾಯ್ದೆ ಅನ್ವಯ ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಜಿಲ್ಲಾ ಮಾಸ್ಟರ್ ತರಬೇತುದಾರ ಹಾಗೂ ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ಚುನಾವಣೆ ಮಾಧ್ಯಮ ಘಟಕ, ಮಾಧ್ಯಮ ಪ್ರಮಾಣೀಕರಣ ಹಾಗೂ ನಿಗಾ ಸಮಿತಿ, ಪೇಯ್ಡ್ ನ್ಯೂಸ್, ಸಾಮಾಜಿಕ ಮಾಧ್ಯಮಗಳ ಪಾತ್ರ ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರಾತ್ಯಕ್ಷತೆಯೊಂದಿಗೆ ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಜಿ.ಪಂ.ಸಿಇಓ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ , ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಜೆ.ಕುಮಾರಸ್ವಾಮಿ, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಹಾಗೂ ಜಿಲ್ಲಾ ವೆಚ್ಚ ಉಸ್ತುವಾರು ಕೋಶದ ನೋಡಲ್ ಅಧಿಕಾರಿ ಡಿ.ಆರ್.ಮಧು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಸೇರಿದಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳು ಮತ್ತಿತರರು ಇದ್ದರು.

Leave a Reply

Your email address will not be published. Required fields are marked *