ಅಪರ ಜಿಲ್ಲಾಧಿಕಾರಿಯಾಗಿ ಬಿ.ಟಿ. ಕುಮಾರಸ್ವಾಮಿ ಅಧಿಕಾರ ಸ್ವೀಕಾರ
ಚಿತ್ರದುರ್ಗ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಬಿ.ಟಿ.ಕುಮಾರಸ್ವಾಮಿ ಶುಕ್ರವಾರ ಅಧಿಕಾರ ವಹಿಸಿಕೊಂಡರು.
ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಟಿ.ಜವರೇಗೌಡ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದ್ದು, ಬಿ.ಟಿ.ಕುಮಾರಸ್ವಾಮಿ ಅವರನ್ನು ಅಪರ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿದೆ.
ಬಿ.ಟಿ.ಕುಮಾರ ಸ್ವಾಮಿ ಅವರು ಈ ಹಿಂದೆ ಚಿತ್ರದುರ್ಗ ತಹಶೀಲ್ದಾರ್, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಡಳಿತಾಧಿಕಾರಿ ಸೇರಿದಂತೆ ವಿವಿಧೆಡೆ ಕಾರ್ಯನಿರ್ವಹಿಸಿದ್ದಾರೆ. ಇದೀಗ ಚಿತ್ರದುರ್ಗ ಜಿಲ್ಲೆಗೆ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ





