ಚಿತ್ರದುರ್ಗ,ಜ11:ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಹೊರವಲಯದ ತಮಟುಕಲ್ಲು ಬ್ರಿಡ್ಜ್ ಬಳಿ ಶನಿವಾರ ತಡರಾತ್ರಿ ನಡೆದಿದೆ. ಮೃತರ ಹೆಸರು ತಿಳಿದು ಬಂದಿಲ್ಲ, ಮಹಾರಾಷ್ಟ್ರದಿಂದ ಬೆಂಗಳೂರಿಗೆ ಹೊರಟಿದ್ದ ಇನ್ನೋವಾ ಕಾರಿನಲ್ಲಿದ್ದ ಪ್ರಯಾಣಿಕರು, ಗಾಯಗೊಂಡಿದ್ದ ಮೂವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರನಾಯ್ಕ್ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Author: D Kumaraswamy
ಲಾರಿ ಮತ್ತು ಕಾರಿನ ನಡುವೆ ಮುಖಾ ಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶನಿವಾರ ತಡರಾತ್ರಿ ಹಿರಿಯೂರಿನ ಹಿಂಡಸಕಟ್ಟೆ ಬಳಿ ನಡೆದಿದೆ. ಮೃತರನ್ನು ನಂಜಯ್ಯನ ಕೊಟ್ಟಿಗೆ ಗ್ರಾಮದ ನಂಜುಂಡಿ,ವಿಶ್ವನಾಥ್ ರಾಹುಲ್ ಮತ್ತು ಯಶ್ವಂತ್ ಎಂದು ಗುರುತಿಸಲಾಗಿದೆ. ಲಾರಿಡಿಕ್ಕಿ ಹೊಡೆದ ರಭಸಕ್ಕೆ ಕಾರು ನುಜ್ಜುಗಜ್ಜಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ ಬೆಂಗಳೂರು: ಒಳಮೀಸಲಾತಿ ಜಾರಿ ಬಳಿಕ ಮೊದಲ ಬಾರಿಗೆ ಅದರ ಸೌಲಭ್ಯವನ್ನು ಪಡೆದ ಹೆಗ್ಗಳಿಕೆಗೆ ಪಾತ್ರರಾದ ವೈದ್ಯಕೀಯ ಸ್ನಾತಕೋತ್ತರ ಉನ್ನತ (ಎಂಎಸ್, ಎಂಡಿ) ಶಿಕ್ಷಣಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ನಿಯೋಗ ಮಾಜಿ ಸಚಿವ ಎಚ್.ಆಂಜನೇಯ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಂಭ್ರಮಿಸಿತು. ಸಿಎಂ ನಿವಾಸ ಕಾವೇರಿಗೆ ಗುರುವಾರ ಭೇಟಿ ನೀಡಿ ಸಿದ್ದರಾಮಯ್ಯ ಅವರಿಗೆ ಸಿಹಿ ತಿನ್ನಿಸಿ, ಬೃಹತ್ ಹೂವಿನ ಹಾರ, ಹೂವಿನ ಗುಚ್ಛ ಕೊಟ್ಟು ಕೃತಜ್ಞತೆ ಸಲ್ಲಿಸಿದರು. ಮಾದಿಗ ಸಮುದಾಯಕ್ಕೆ ಉನ್ನತ ಶಿಕ್ಷಣ ಗಗನಕುಸಮವಾಗಿತ್ತು. ಅದರಲ್ಲೂ ಎಂಎಸ್, ಎಂಡಿ ಪ್ರವೇಶ ಪಡೆಯಲು ಸಾಧ್ಯವೇ ಇರಲಿಲ್ಲ. ಆದರೆ, ಒಳಮೀಸಲಾತಿ ಜಾರಿ ಬಳಿಕ ನೀಟ್ ಪರೀಕ್ಷೆ ಬರೆದ ಮಾದಿಗ ಸಮುದಾಯದ ವಿದ್ಯಾರ್ಥಿಗಳೆಲ್ಲರಿಗೂ ಮೊದಲಬಾರಿಗೆ ಪ್ರವೇಶ ಸಿಕ್ಕಿದೆ ಎಂದು ಸಂತಸ ಹಂಚಿಕೊಂಡರು. ಮಕ್ಕಳು, ಮೂಳೆ, ನರರೋಗ ಸೇರಿ ಬಹಳ ಬೇಡಿಕೆ ಇರುವ ವಿಭಾಗಗಳೇ ನಮಗೆ ದೊರೆತಿವೆ. ಇದೆಲ್ಲ…
ಹುಬ್ಬಳ್ಳಿ, 05: ಇನಾಂ ವೀರಾಪುರದ ಮಾನ್ಯಾಳ ಮರ್ಯಾದೆ ಹತ್ಯೆಗೇಡಾದ ಹಿನ್ನೆಲೆಯಲ್ಲಿ ಸ್ವಗ್ರಾಮಕ್ಕೆ ಅಸದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿಎಸ್ ಮಂಜುನಾಥ್ ಹಾಗೂ ಅಧಿಕಾರಿಗಳು ಸೋಮವಾರ ಭೇಟಿ ನೀಡಿ ಪೋಷಕರಿಗೆ ಸಾಂತ್ವಾನ ಹೇಳಿದರು. ಅಭಿವೃದ್ದಿ ನಿಗಮದಿಂದ ಪೋಷಕರಿಗೆ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ಈ ಸಮಯದಲ್ಲಿ ಅದಿ ಜಾಂಬವ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ಬಿಟಿ ಮಂಜುನಾಥ್ ಹಾಗು ಹುಬ್ಬಳ್ಳಿ ಜಿಲ್ಲಾ ನಿಗಮದ ಅಧಿಕಾರಿ ವರ್ಗ ಹಾಗು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ ಚಿತ್ರದುರ್ಗ ಡಿ. 20: ನನ್ನ 35 ವರ್ಷದ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಜನ ಸೇವೆಯನ್ನೆ ಗುರಿಯಾಗಿಸಿಕೊಂಡು ಕೆಲಸ ಮಾಡುತ್ತಾ ಬಂದಿದ್ದೇನೆ. ಅಕ್ರಮ ಗಣಿಗಾರಿಕೆ, ಭೂಕಬಳಿಕೆ, ಒತ್ತುವರಿ ಯಾವುದೇ ಕೆಲಸ ನಾನು ಮಾಡಿಲ್ಲ ಇದರಲ್ಲಿ ಯಾವುದಾದರೊಂದು ಮಾಡಿರುವುದಾಗಿ ಯಾರಾದರೂ ಒಬ್ಬರು ಸಾಕ್ಷಿಯನ್ನು ಹೇಳಿದರೆ, ಅಥವ ಮಾಜಿ ಸಚಿವರು ಇದನನ್ನು ಸಾಬೀತುಪಡಿಸಿದರೆ ನಾನು ರಾಜಕೀಯದಿಂದಲೇ ನಿವೃತ್ತಿ ಹೊಂದುವುದಾಗಿ ಹೊಳಲ್ಕೆರೆ ಕ್ಷೇತ್ರದ ಶಾಸಕ ಡಾ.ಎಂ.ಚಂದ್ರಪ್ಪ ಸವಾಲ್ ಹಾಕಿದ್ದಾರೆ. ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತಾಡಿ, ರಾಜಕೀಯದಲ್ಲಿ ನನ್ನ ತೇಜೋವಧೆ ಮಾಡುವುದಕ್ಕಾಗಿ ಕೆಲವರು ನನ್ನ ಮೇಲೆ ಇಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ.ಆರೋಪಕ್ಕು ಅದು ಸರಿಯಿದೆಯೇ ಎಂದು ಪರೀಶಿಲನೆ ಮಾಡಬೇಕೆಂದು ಮಾಜಿ ಸಚಿವ ಅಂಜನೇಯನ ಮೇಲೆ ಹರಿಹಾಯ್ದರು. ಹೊಳಲ್ಕೆರೆಯಲ್ಲಿ ನನ್ನ ಮಗನ ಹೆಸರಿನಲ್ಲಿ ದಲಿತರ ಭೂಮಿ ಖರೀದಿಸಲಾಗಿದೆ ಎಂದು ಆರೋಪವನ್ನು ಹೊರಿಸಲಾಗಿದೆ. ಆದರೆ ನಾನು ಜಮೀನನ್ನು ಖರೀದಿ ಮಾಡಿದ್ದು, ಆ…
ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ ಚಿತ್ರದುರ್ಗ:ಡಿ.19: ಸರ್ಕಾರಿ ಜಾಗ, ದಲಿತ ಭೂಮಿ ಕಬಳಕಿ ಮಾಡುತ್ತಿರುವ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಗಳಿಸಿರುವ ಅಕ್ರಮ ಆಸ್ತಿ ಕುರಿತು ಸಮಗ್ರ ತನಿಖೆ ನಡೆಸುವಂತೆ ಮಾಜಿ ಸಚಿವ ಹೆಚ್.ಆಂಜನೇಯ ಆಗ್ರಹಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಳಲ್ಕೆರೆಯಲ್ಲಿ ಈ ಹಿಂದೆ ಸತ್ತವರ ಆಸ್ತಿ ಕಬಳಿಸಲು ನಡೆಸಿದ್ದ ಪ್ರಯತ್ನವನ್ನು ಬಹಿರಂಗಗೊಳಿಸುತ್ತಿದ್ದಂತೆ ಕದ್ದುಮುಚ್ಚಿ ಹೋಗಿ ಅವರಿಗೆ ಆಸ್ತಿಯನ್ನು ಮರು ನೋಂದಣಿ ಮಾಡಿಸಿಕೊಟ್ಟಿದ್ದ ಚಂದ್ರಪ್ಪ, ಈಗ ದಲಿತರ ಭೂಮಿ ಮೇಲೆ ಕೆಂಗಣ್ಣು ಹಾಕಿದ್ದಾರೆ ಎಂದು ದೂರಿದರು. ಕ್ಷೇತ್ರದಲ್ಲಿ ದಲಿತರ ಭೂಮಿಯನ್ನು ಬೇರೊಬ್ಬರ ಹೆಸರಿಗೆ ಮಾಡಿಸಿ, ಅದನ್ನು ತನ್ನ ಕುಟುಂಬದ ಹೆಸರಿಗೆ ನೋಂದಣಿ ಮಾಡಿಸಿಕೊಳ್ಳುವ ಷಡ್ಯಂತರ ನಿರಂತವಾಗಿ ನಡೆಯುತ್ತಿದೆ. ಈ ಕಾರ್ಯಕ್ಕೆ ಜಿಲ್ಲಾ, ತಾಲ್ಲೂಕು ಆಡಳಿತ ಬೆಂಬಲವಾಗಿ ನಿಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಎಸ್ಸಿ ಮೀಸಲಾತಿ ಸೌಲಭ್ಯದಡಿ ಜನಪ್ರತಿನಿಧಿ ಆಗಿರುವ, ಅನೇಕ ಸೌಲಭ್ಯ ಪಡೆದಿರುವ ಚಂದ್ರಪ್ಪ, ದಲಿತರ ಭೂಮಿ…
ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ ಚಿತ್ರದುರ್ಗ,ಡಿ.13 : ಒಂದು ವರ್ಷದಿಂದ ನಿರಂತರ 10 ವರ್ಷದ ಬಾಲಕಿ ಮೇಲೆ ಇಬ್ಬರು ಕಾಮುಕರಿಬ್ಬರು ಅತ್ಯಾಚಾರ ನಡೆಸಿರುವ,ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ವಡ್ಡನಹಳ್ಳಿ ಗ್ರಾಮದಲ್ಲಿಂದು ಬೆಳಕಿಗೆ ಬಂದಿದೆ.4ನೇ ತರಗತಿ ಬಾಲಕಿ ಮೇಲೆ ಪ್ರಭುದೇವ ಮತ್ತು ಗುರು ಮೂರ್ತಿ ಪದೆ ಪದೆ ಅತ್ಯಾಚಾರ ನಡೆಸಿದ್ದು,ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ.ಬಾಲಕಿ ಶಾಲಾ ಶಿಕ್ಷಕಿ ಬಳಿ ಹೇಳಿಕೊಂಡಿದ್ದು,ಅವರು ಬಾಲಕಿ ಪೋಷಕರಿಗೆ ವಿಷಯ ತಿಳಿಸಿದ್ದಾರೆ.ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು,ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ ಚಿತ್ರದುರ್ಗ:ಡಿ.12:ಒಳಮೀಸಲಾತಿ ಜಾರಿ ಬಳಿಕವೂ ಕೆಲ ಗೊಂದಲಗಳು ಇದ್ದು, ಅವುಗಳನ್ನು ನಿವಾರಿಸಲು ರಾಜ್ಯ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕೆಂದು ಮಾಜಿ ಸಚಿವ ಎಚ್.ಆಂಜನೇಯ ಒತ್ತಾಯಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳಮೀಸಲಾತಿ ಜಾರಿಗೊಳಿಸಿ, ಕಾಯ್ದೆ ರೂಪಿಸಲು ಮುಂದಾಗಿರುವುದು ಸ್ವಾಗತರ್ಹ ಆದರೆ, ಬಡ್ತಿ, ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆಗೂ ಅನ್ವಯಿಸುವ ರೀತಿ ನೀತಿ ರೂಪಿಸಬೇಕೆಂದು ಆಗ್ರಹಿಸಿದರು. ಎ ಗುಂಪಿನಲ್ಲಿರುವ ಮಾದಿಗರು ಪೈಪೋಟಿ ನೀಡುವಲ್ಲಿ ದುರ್ಬಲರೆಂಬ ಕಾರಣಕ್ಕೆ ತಮಿಳುನಾಡಿನಿಂದ ವಲಸೆ ಬಂದ ಪರಿಯಾ ಹಾಗೂ ಎಕೆ, ಎಡಿಯಲ್ಲಿರುವ ಮೂಲ ಜಾತಿ ಮಾದಿಗರಲ್ಲದವರು ಕೂಡ ಎ ವರ್ಗಕ್ಕೆ ನುಸುಳುವ ಪ್ರಯತ್ನ ಮಾಡುತ್ತಿದ್ದಾರೆ. ಕೆಲವೆಡೆ ಈ ಕೃತ್ಯ ಈಗಾಗಲೇ ಆಗಿದೆ ಎಂಬ ಆರೋಪ ಇದೆ. ಇದಕ್ಕೆ ಶಾಶ್ವತ ತಡೆ ಹಾಕಲು ಕಠಿಣ ಕಾನೂನು ರೂಪಿಸಬೇಕೆಂದು ಹೇಳಿದರು. ಒಳಮೀಸಲಾತಿಯಲ್ಲಿ ಎ, ಬಿ, ಸಿ ಗುಂಪುಗಳನ್ನಾಗಿಸಿದ್ದು, ಶಿಕ್ಷಣ,…
ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್ ಸಾಂಗ್ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ’45’ರ ಪ್ರಮೋಷನಲ್ ಹಾಡು ‘AFRO ಟಪಾಂಗ್’ ಭಾರತದಲ್ಲಿ ಟ್ರೆಂಡಿಂಗ್ ಟಾಪ್ ಹಾಡು ಎನಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ದಾಖಲೆ ಮಟ್ಟದ ವೀಕ್ಷಣೆಯನ್ನು ‘AFRO ಟಪಾಂಗ್’ ಹಾಡು ಪಡೆದಿದೆ. ಇದು ಭಾರತದಲ್ಲಿ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ ಪಂಚ ಭಾಷೆಗಳಲ್ಲೂ ಟಾಪ್ ಟ್ರೆಂಡಿಂಗ್ ಸಾಂಗ್ ಆಗಿದೆ. ಈ ಹಾಡು ಜಾಗತಿಕವಾಗಿ 28.5 ಮಿಲಿಯನ್ ವೀಕ್ಷಣೆಗಳೊಂದಿಗೆ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ರಿಯಲ್ ಸ್ಟಾರ್ ಉಪೇಂದ್ರ, ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ರಾಜ್ ಬಿ ಶೆಟ್ಟಿ ಒಟ್ಟಾಗಿ ನಟಿಸಿರುವ 45 ಚಿತ್ರ ಡಿಸೆಂಬರ್ 25ರಂದು ಬಿಡುಗಡೆ ಆಗಲಿದೆ. ಈ ವರ್ಷದ ಕೊನೆಯ ನಿರೀಕ್ಷಿತ ಸಿನಿಮಾದ ಟ್ರೈಲರ್ ಶೀಘ್ರ ಬಿಡುಗಡೆ ಆಗಲಿದೆ. ನಿರ್ಮಾಪಕ ರಮೇಶ್ ರೆಡ್ಡಿ ಅವರ 45 ಚಿತ್ರದ ಬಜೆಟ್ ₹100 ಕೋಟಿ ಎಂದು ಅಂದಾಜಿಸಲಾಗಿದೆ. ಹಾಡಿನ ಭರ್ಜರಿ ಯಶಸ್ಸು ಚಿತ್ರದ ಬಿಡುಗಡೆಗೆ ಭದ್ರ ಬುನಾದಿ ಹಾಕಿದೆ.…
ಚಿತ್ರದುರ್ಗ ನ. 30:ರಾಜ್ಯದಲ್ಲಿ ರೈತರ ಸಮಸ್ಯೆಗಳು ಹೆಚ್ಚಾಗುತ್ತಿದೆ. ಈ ಹಿಂದಿನ ಸರ್ಕಾರದ ಮುಖ್ಯ ಮಂತ್ರಿಗಳು ಲಭ್ಯವಿರುವ ಅನುದಾನದಲ್ಲಿಯೇ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಿದ್ದರು. ಆದರೆ ಇಂದು ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಈ ನಡುವೆ ಅಧಿಕಾರ ಹಂಚಿಕೆ ವಿಷಯದಲ್ಲಿ ಜನರ ದಿಕ್ಕನ್ನು ತಪ್ಪಿಸಲು ಆಡಳಿತ ನಡೆಸು ವವರು ಕಿತ್ತಾಡುತ್ತಿದ್ದಾರೆ ಇದನ್ನು ನಾಡಿನ ಜನರು ಗಮನಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿಧಾನ ಪರಿಷತ್ತಿನ ವಿರೋಧಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ. ಚಿತ್ರದುರ್ಗದದಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈಗಿನ ಸರ್ಕಾರದ ಆಡಳಿತ ವೈಖರಿ ಭಿನ್ನವಾಗಿದೆ. ಪಕ್ಷದವರು ಕಾನೂನು ಬಾಹಿರವಾಗಿ ಅಧಿಕಾರ ಚಲಾಯಿಸುವ ಮೂಲಕ ಅನ್ಯಾಯ, ಅಕ್ರಮದ ವಿರುದ್ಧ ಹೋರಾಡುವ ಬೇರೆ ಪಕ್ಷದವರನ್ನು ಅಧಿಕಾರಿಗಳನ್ನು ನಡೆಸಿಕೊಳ್ಳುತ್ತಿರುವ ರೀತಿ ಮುಂದೆ ಆಡಳಿತ ನಡೆಸುವವರಿಗೆ, ಅಧಿಕಾರದಲ್ಲಿರುವವರಿಗೆ ಪಾಠ ಹೇಳಿಕೊಡುವಂತಿದೆ. ಈ ಬ್ರೇಕ್ ಫಾಸ್ಟ್ ಮೀಟಿಂಗ್‍ನಲ್ಲಿ ಇಡ್ಲಿ, ದೋಸೆ, ಉಪ್ಪಿಟ್ಟು ಬಿಟ್ಟು ಬೇರೇನೂ ಆಗಲ್ಲ, ಸಿಎಂ ಪದವಿ ಸಿದ್ದರಾಮಯ್ಯ ಅವರಿಗೆ ಎರಡೂವರೆ ವರ್ಷ ಎಂದು ಮಾತುಕತೆಯಾಗಿದೆ ಎಂದು…

