2022- 23ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯಲ್ಲಿ ಪಿಯುಸಿಯಲ್ಲಿ ಶೇಕಡ 70ಕ್ಕಿಂತ ಹೆಚ್ಚು ಫಲಿತಾಂಶ ಪಡೆದ ಚಿತ್ರದುರ್ಗ ತಾಲೂಕಿನ ಆದಿ ಕರ್ನಾಟಕ ಜನಾಂಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಇದೇ 29 ರಂದು ತ.ರಾ.ಸು ರಂಗಮಂದಿರದಲ್ಲಿ ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮ ಹಮ್ಮಿಕೊಳ್ಳಾಗಿದೆ ಎಂದು ಮಾದಿಗ ನೌಕರರ ಸಾಂಸ್ಕೃತಿಕ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ತಿಳಿಸಿದ್ದಾರೆ. ಪಿ.ಯು.ಸಿ.ಯಲ್ಲಿ ಶೇಕಡ 70ಕ್ಕಿಂತ ಹೆಚ್ಚು ಎಸ್.ಎಸ್.ಎಲ್.ಸಿ.ಯಲ್ಲಿ ಶೇಕಡ 80% ಕ್ಕಿಂತ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು, ಎಲ್ಲರೂ ಭಾಗವಹಿಸುವಂತೆ ಕೋರಿದ್ದಾರೆ.




