ಚಿತ್ರದುರ್ಗ ನರ್ರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ದೇವರಾಜ್ ಅರಸ ಶಿಕ್ಷಣ ಸಂಸ್ಥೆ ಅಡಿಯಲ್ಲಿ ಅಭೂತಪೂರ್ವ ಯಶಸ್ಸಿನೊಂದಿಗೆ ಮುನ್ನು ಗುತ್ತಿರುವ ಇಂಡಿಯನ್ ಇಂಟರ್ ನ್ಯಾಷನಲ್ ಸಿ.ಬಿ.ಎಸ್ ಇ ಶಾಲೆಯು ೨೦೨೪-೨೫ರ ಹತ್ತನೆ ತರಗತಿಯ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆಗೈದಿದೆ. ನಿಜಾ ಜೆನ್ ಎಂಬ ವಿದ್ಯಾರ್ಥಿನಿ ೫೦೦ ಅಂಕಗಳಿಗೆ ೪೮೩ ಅಂಕಗಳಿಸಿ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ೩೦ವಿದ್ಯಾರ್ಥಿಗಳು ಅತ್ತ್ಯುತ್ತಮ ಶ್ರೇಣಿ, ೬೦ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಉತ್ತಮ ಶ್ರೇಣಿಯನ್ನು ಪಡೆದಿರುವ ಎಲ್ಲಾ ವಿದ್ಯಾರ್ಥಿಗಳನ್ನು ಹಾಗೂ ಉತ್ತಮ ಫಲಿತಾಂಶಕ್ಕೆ ಶ್ರಮಿಸಿರುವ ಎಲ್ಲಾ ಸಿಬ್ಬಂದಿ ವರ್ಗದವರನ್ನು , ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಡಾ. ಎಂ ಚಂದ್ರಪ್ಪನವರು ಆಡಳಿತಾಧಿಕಾರಿಯಾದ ಶ್ರೀಮತಿ ಚಂದ್ರಕಲಾ ಅವರು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಎಂ.ಸಿ ರಘುಚಂದನ್ ಅವರು ಅಭಿನಂದಿಸಿದ್ದಾರೆ.



