Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಭರಮಸಾಗರ-ಚಿತ್ರದುರ್ಗ ರೈಲ್ವೇ ಕಾಮಗಾರಿಗೆ ಶೀಘ್ರ ಭೂಮಿ ಪೂಜೆ
ರಾಜ್ಯ

ಭರಮಸಾಗರ-ಚಿತ್ರದುರ್ಗ ರೈಲ್ವೇ ಕಾಮಗಾರಿಗೆ ಶೀಘ್ರ ಭೂಮಿ ಪೂಜೆ

D KumaraswamyBy D KumaraswamyJuly 11, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಭರಮಸಾಗರ-ಚಿತ್ರದುರ್ಗ ರೈಲ್ವೇ ಕಾಮಗಾರಿಗೆ ಶೀಘ್ರ ಭೂಮಿ ಪೂಜೆ

 

 

ಭರಮಸಾಗರ-ಚಿತ್ರದುರ್ಗ ಮಧ್ಯದ 29 ಕಿ.ಮೀ ಉದ್ದದ ರೈಲ್ವೇ ಭೂಸ್ವಾಧೀನ ಪ್ರಕ್ರಿಯೆ ಶೇ.90 ರಷ್ಟು ಮುಕ್ತಾಯಗೊಂಡಿದ್ದು, ಭೂಮಿ ಹಸ್ತಾಂತರ ಮಾಡಲಾಗಿದೆ. ಕಾಮಗಾರಿಯ ಟೆಂಡೆರ್ ಪ್ರಕ್ರಿಯೆ ಪೂರ್ಣಗೊಂಡಿದೆ.  ಶೀಘ್ರವೇ ರಾಜ್ಯದವರೇ ಆದ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಂದ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸಂಸದ ಗೋವಿಂದ ಎಂ ಕಾರಜೋಳ ರೈಲ್ವೇ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ರೈಲ್ವೇ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಯೋಜನೆ ಜಿಲ್ಲೆ ಅಗತ್ಯವಾಗಿದೆ. ಯೋಜನೆಗೆ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಒಟ್ಟು 1210 ಎಕೆರೆ ಭೂಮಿ ಅವಶ್ಯಕವಾಗಿದೆ. ಇದರಲ್ಲಿ 1053 ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡು ರೈಲ್ವೇ ಇಲಾಖೆ ನೀಡಲಾಗಿದೆ. ಬಾಕಿ ಇರುವ 145 ಎಕರೆ ಭೂ ಸ್ವಾಧೀನ ಪ್ರಕ್ರಿಯ ಅಂತಿಮ ಹಂತದಲ್ಲಿದೆ. ಯೋಜನೆ ವಿಳಂಭವಾಗದAತೆ ರೈಲ್ವೇ ಕಾಮಗಾರಿಗೆ ಅಗತ್ಯ ಇರುವ ಭೂಮಿ ಸ್ವಾಧೀನ ಹಾಗೂ ರೈಲ್ವೇ ಇಲಾಖೆಗೆ ಭೂಮಿ ಹಸ್ತಾಂತರಿಸುವ ಪ್ರಕ್ರಿಯೆಯನ್ನು ತ್ವರಿತವಾಗಿ ಮಾಡುವಂತೆ ಸಂಸದ ಗೋವಿಂದ ಎಂ ಕಾರಜೋಳ ಭೂಸ್ವಾಧೀನಾಧಿಕಾರಿಗಳಿಗೆ ಸೂಚಿಸಿದರು.
ಆಲಮಟ್ಟಿ-ಕೊಪ್ಪಳ-ಚಿತ್ರದುರ್ಗ ರೈಲುಮಾರ್ಗ ಕೇಂದ್ರಕ್ಕೆ ಪ್ರಸ್ತಾವ:  
ಈ ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಗಳಿದ್ದಾಗ ಆಲಮಟ್ಟಿ-ಕೊಪ್ಪಳ-ಚಿತ್ರದುರ್ಗ ರೈಲು ಮಾರ್ಗ ಯೋಜನೆಯ ಪ್ರಸ್ತಾವವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಕೊಡಲಾಗಿತ್ತು. 50:50 ಮಾದರಿಯಲ್ಲಿ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡುವುದರೊಂದಿಗೆ, ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಭೂಮಿ ಹಸ್ತಾಂತರ ಮಾಡುವುದಾಗಿ ಪ್ರಸ್ತಾವನೆಯಲ್ಲಿ ತಿಳಿಸಲಾಗಿತ್ತು. ಈ ಯೋಜನೆಗೆ ಮರುಜೀವ ನೀಡುವ ನಿಟ್ಟಿನಲ್ಲಿ ಚಿತ್ರದುರ್ಗ ಜಿಲ್ಲೆಯಿಂದ ಮತ್ತೊಮ್ಮೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಚಿತ್ರದುರ್ಗ ಜಿಲ್ಲಾಧಿಕಾರಿಗಳು ಬಾಗಲಕೋಟೆ ಹಾಗೂ ಬಿಜಾಪುರ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ಈ ಹಿಂದೆ ಸಲ್ಲಿಸಿದ್ದ ಯೋಜನೆ ಪ್ರಸ್ತಾವನೆ ಪ್ರತಿ ಪಡೆದುಕೊಳ್ಳುವಂತೆ ನಿರ್ದೇಶನ ನೀಡಿದ್ದೇನೆ ಎಂದು ಸಂಸದ ಗೋವಿಂದ ಎಂ ಕಾರಜೋಳ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಭೂಸ್ವಾಧೀನಾಧಿಕಾರಿ ವಿವೇಕ್, ನೈರುತ್ಯ ರೈಲ್ವೇ ಮುಖ್ಯ ಇಂಜಿನಿಯರ್ ಪರದೀಪ್ ಪುರಿ, ಕಾರ್ಯಪಾಲಕ ಇಂಜಿನಿಯರ್ ರಜತ್ ತುನಹಾ, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಬಿ.ಪುರುಷೊತಮ್, ವಿಭಾಗೀಯ ಸಹಾಯಕ ಇಂಜಿನಿಯರ್ ನಿತ್ಯಾನಂತದ ಸ್ವಾಮಿ  ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಕೇಂದ್ರದಲ್ಲಿ ರಾಜ್ಯದ ಪರವಾಗಿ ನಿರಂತರ ಹೋರಾಟ ಮುಂದುವರೆಸಿ: ರಾಜ್ಯದ ಸಂಸದರಿಗೆ ಸಿಎಂ‌ ಕರೆ
Next Article ಜಿಲ್ಲೆಯಲ್ಲಿ ಡೆಂಗೀ ನಿಯಂತ್ರಣ, ನಿರ್ಮೂಲನೆಗೆ ಕ್ರಮವಹಿಸಿ: ಅಪರ ಜಿಲ್ಲಾಧಿಕಾರಿ ಬಿ ಟಿ‌ ಕುಮಾರಸ್ವಾಮಿ
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.