ಟಿಪ್ಪರ್ ಲಾರಿ ಬೈಕ್ ಗೆ ಡಿಕ್ಕಿ ಬೈಕ್ ಸವಾರ ಸಾವು: ಮಾನವೀಯತೆ ಮೆರೆದ ಶಾಸಕ

ಕ್ರೈಂ

ಚಿತ್ರದುರ್ಗದ ಮದಕರಿ ಪುರದ ಬಳಿ ಟಿಪ್ಪರ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆಯಿತು. ಮೃತನನ್ನು ಮದಕರಿಪುರದ ನರಸಿಂಹ ಮೂರ್ತಿ ಎಂದು ಗುರುತಿಸಲಾಗಿದೆ. ಘಟನೆ ನಡೆದಾಗ ಅದೇ ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಚಿತ್ರದುರ್ಗ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರು ಅಪಘಾತಕ್ಕೀಡಾಗಿ ತೀವ್ರ ಗಾಯಗೊಂಡಿದ್ದ, ನರಸಿಂಹ ಮೂರ್ತಿಗೆ ಸ್ಥಳದಲ್ಲಿಯೇ ಚಿಕಿತ್ಸೆ ಕೊಡಿಸುವ ವ್ಯವಸ್ಥೆಯನ್ನು ಮಾಡುವ ಮೂಲಕ ಮಾನವೀಯತೆಯನ್ನು ಮೆರೆದಿದ್ದರು. ವೈದ್ಯರು ಬಂದು‌ ಚಿಕಿತ್ಸೆ ನೀಡಿದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ನರಸಿಂಹ ಮೂರ್ತಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ‌ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

 

Leave a Reply

Your email address will not be published. Required fields are marked *