Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಉಳುವವನೇ ಭೂಮಿ ಒಡೆಯ ಎನ್ನುವುದನ್ನು ಬಿಜೆಪಿ ಉಲ್ಟಾ ಮಾಡಿದೆ. ಉಳ್ಳವನೇ ಭೂಮಿ ಒಡೆಯ ನನ್ನಾಗಿಸಿದೆ
ರಾಜ್ಯ

ಉಳುವವನೇ ಭೂಮಿ ಒಡೆಯ ಎನ್ನುವುದನ್ನು ಬಿಜೆಪಿ ಉಲ್ಟಾ ಮಾಡಿದೆ. ಉಳ್ಳವನೇ ಭೂಮಿ ಒಡೆಯ ನನ್ನಾಗಿಸಿದೆ

D KumaraswamyBy D KumaraswamyAugust 20, 2023No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಉಳುವವನೇ ಭೂಮಿ ಒಡೆಯ ಎನ್ನುವುದನ್ನು ಬಿಜೆಪಿ ಉಲ್ಟಾ ಮಾಡಿದೆ. ಉಳ್ಳವನೇ ಭೂಮಿ ಒಡೆಯ ನನ್ನಾಗಿಸಿದೆ

ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲವ ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಸಮೂಹಕ್ಕೆ ಕರೆ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ದೇವರಾಜು ಅರಸು ಅವರ 108 ನೇ ಜನ್ಮ ದಿನಾಚರಣೆ ಹಾಗೂ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಅರಸು ಪ್ರಶಸ್ತಿ ವಿತರಿಸಿ ಮಾತನಾಡಿದರು.

ಕನ್ನಡ ನೆಲ ಸಾಮಾಜಿಕ ನ್ಯಾಯವನ್ನು ಕ್ರಾಂತಿಕಾರಿಯಾಗಿ ಜಾರಿ ಮಾಡಿದ ಇತಿಹಾಸ ಹೊಂದಿದೆ. ಬಸವಣ್ಣನವರಿಂದ ಹಿಡಿದು ಕೃಷ್ಣರಾಜ ಒಡೆಯರು ಮತ್ತು ದೇವರಾಜ ಅರಸು ಅವರ ವರೆಗೂ ಸಾಮಾಜಿಕ ನ್ಯಾಯ ಒದಗಿಸಿದ ಚರಿತ್ರೆ ನಮ್ಮ ನಾಡಿಗೆ ಇದೆ.‌

ಅಧಿಕಾರ ಮತ್ತು ಸಂಪತ್ತು ಕೆಲವರ ಕೈಯಲ್ಲಿ ಮಾತ್ರ ಇರಬಾರದು ಎನ್ನುವ ಆಶಯ ಬಸವಣ್ಣನವರ ಕಾಲದಿಂದಲೂ ಈ ನೆಲದಲ್ಲಿ ನೆಲೆಯೂರಿದೆ.

ದೇವರಾಜ ಅರಸರು ಜಾರಿಗೆ ತಂದಿದ್ದು, ಕಾಗೋಡು ತಿಮ್ಮಪ್ಪನವರು ಹೋರಾಟ ಮಾಡಿದ್ದು ಉಳುವವನೇ ಭೂಮಿ ಒಡೆಯ ಆಗಬೇಕು ಎನ್ನುವುದಾಗಿತ್ತು. ಆದರೆ ಈಗ ಬಿಜೆಪಿ ಬಂದ ಮೇಲೆ “ಉಳ್ಳವನೇ ಭೂಮಿ ಒಡೆಯ” ಎನ್ನುವಂತಾಗಿದೆ ಎಂದು ಟೀಕಿಸಿದರು.

 

 

ಕಾಗೋಡು ಹೋರಾಟ ಮತ್ತು ಗೇಣಿ ಹೋರಾಟದ ಫಲಾನುಭವಿಗಳು ಮತ್ತು ಈಗಿನ ಪೀಳಿಗೆಯ ಯುವಕ, ಯುವತಿಯರು ಇದನ್ನೆಲ್ಲಾ ಅರ್ಥ ಮಾಡಿಕೊಳ್ಳಬೇಕು. ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದರು.

ಸಂವಿಧಾನದಲ್ಲಿ ಮೀಸಲಾತಿಗೆ ಅವಕಾಶ ಇದ್ದರೂ ಅದು ಜಾರಿ ಆಗಿರಲಿಲ್ಲ. ರಾಜ್ಯದಲ್ಲಿ ದೇವರಾಜು ಅರಸರು‌ ಮುಖ್ಯಮಂತ್ರಿಯಾಗಿ ಹಾವನೂರು ವರದಿ ತರಿಸಿಕೊಂಡು ಅದನ್ನು ಜಾರಿ ಮಾಡುವ ಎದೆಗಾರಿಕೆ ತೋರಿಸಿದರು. ಹೀಗೆ ಮಾಡುವಾಗ ಎಲ್ಲಾ ಜಾತಿ-ಸಮುದಾಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡರು. ಆ ಮೂಲಕ ಸಂವಿಧಾನಬದ್ದವಾದ ಮೀಸಲಾತಿಯನ್ನು ಕನ್ನಡ ನೆಲದಲ್ಲಿ ಜಾರಿ ಮಾಡಿದರು ಎಂದು ವಿವರಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್ ತಂಗಡಗಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ , ಶಾಸಕ ಗೋಪಾಲಕೃಷ್ಣ ಬೇಳೂರು, ನಾಗರಾಜ ಯಾದವ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.

*ಕಾಗೋಡು ತಿಮ್ಮಪ್ಪ ಅವರಿಂದ ಅರಸು ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ*

ಸಮಾಜವಾದಿ ಚಳವಳಿ ಮತ್ತು ಗೇಣಿ ಹೋರಾಟಗಾರ ಕಾಗೋಡು ತಿಮ್ಮಪ್ಪ ಅವರಿಗೆ ದೇವರಾಜು ಅರಸು ಪ್ರಶಸ್ತಿ ಲಭಿಸಿರುವುದರಿಂದ ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ನಾನು ಮುಖ್ಯಮಂತ್ರಿ ಆಗಿರುವ ಅವಧಿಯಲ್ಲೇ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ಲಭಿಸಿರುವುದು ನನಗೆ ಅತ್ಯಂತ ಖುಷಿಯಾಗಿದೆ. ಬಹಳಷ್ಟು ಯುವ ನಾಯಕರನ್ನು ಕಾಗೋಡು ತಿಮ್ಮಪ್ಪ ಬೆಳೆಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

Share. Facebook Twitter Pinterest LinkedIn Tumblr WhatsApp Email
Previous Articleಆಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ
Next Article ವಿವಿ ಗಳ ಎಸ್ ಸಿ-ಎಸ್ ಟಿ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಗೆ 230 ಕೋಟಿ ಒದಗಿಸಲು ಸಿಎಂ ಸೂಚನೆ
D Kumaraswamy
  • Tumblr

Related Posts

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026

ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

January 6, 2026

ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

December 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.