Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ
ರಾಜ್ಯ

ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

D KumaraswamyBy D KumaraswamyAugust 10, 2025No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

ಚಿತ್ರದುರ್ಗ,ಆ10: ಬಸವಣ್ಣನವರ ಕ್ರಾಂತಿ, ಭಗವಾನ್ ಬುದ್ಧರ ಸಮಾನತೆಯ ಶಾಂತಿ, ಅಂಬೇಡ್ಕರ್ ಅವರ ಜ್ಞಾನ ಈ ಮೂರು ವಿಷಯಗಳು ಸಮ್ಮಿಲನ ಆದಾಗ ಮಾತ್ರ ಉತ್ತಮ ಸಮಾಜ ನಿರ್ಮಿಸಲು ಸಾಧ್ಯವೆಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದರು.

ನಗರದ ಹೊರವಲಯದ ಮುರುಘಾ ಮಠದ ಅನುಭವ ಮಂಟಪದಲ್ಲಿ ಭಾನುವಾರ ಶಿವ ಶರಣ ಮಾದಾರ ಚನ್ನಯ್ಯ ಗುರುಪೀಠ, ಸಂತೋಷ್ ಲಾಡ್ ಫೌಂಡೇಷನ್ ಹಾಗೂ ಇಂಡೋ-ಟಿಬೆಟ್ ಸ್ನೇಹ ಸೊಸೈಟಿ ವತಿಯಿಂದ ಆಯೋಜಿಸಿದ್ದ ಬಸವೇಶ್ವರ ನಾಡಿನಲ್ಲಿ ಬುದ್ದನ ಸ್ಮರಣೆ ಕಾರ್ಯಕ್ರಮದಲ್ಲಿ ಟಿಬೆಟ್ ಧರ್ಮಗುರು ದಲೈಲಾಮಾ ಅವರ 90ನೇ ಜನ್ಮ ದಿನದ ಲೋಗೋವನ್ನ ಬಿಡುಗಡೆ ಮಾಡಿ ಮಾತನಾಡಿದರು ವಿಶ್ವಗುರು ಬಸವಣ್ಣ ಸಮಾಜದಲ್ಲಿ ಉತ್ತಮ ಸಂದೇಶಗಳ ಜನರಿಗೆ ಪ್ರವಚನಗಳನ್ನು ಮಾಡುವುದರ ಮೂಲಕ ಸಮ ಸಮಾಜ ನಿರ್ಮಾಣ ಮಾಡುವುದಕ್ಕೆ ಶ್ರಮಿಸಿದ್ದಾರೆ, ಇಡೀ ಪ್ರಪಂಚವೇ ಕೊಂಡಾಡುವಂತ ಭಗವಾನ್ ಬುದ್ಧರವರು ಶಾಂತಿಯ ಮಂತ್ರವನ್ನು ಪಠಿಸಿದ್ದಾರೆ, ಬಾಬಾ ಸಾಹೇಬ್ ಡಾ. ಬಿಆರ್ ಅವರ ಜ್ಞಾನ ಬಲದಿಂದ ದೇಶಕ್ಕೆ ಸುಸಜ್ಜಿತ ಸಂವಿಧಾನವನ್ನು ಕೊಡುಗೆಯನ್ನಾಗಿ ನೀಡಿದ್ದಾರೆ ಮಹನೀಯರ ತತ್ವದ ಆದರ್ಶಗಳ ಅಡಿಯಲ್ಲಿ ಉತ್ತಮ ಪ್ರಜೆಯಾಗಿ ನಾವೆಲ್ಲರೂ ಬದುಕಬೇಕೆಂದು ತಿಳಿಸಿದರು.

 

 

ದಲೈಲಾಮರವರ 90ನೇ ಹುಟ್ಟುಹಬ್ಬವನ್ನು ಚಿತ್ರದುರ್ಗ ನಾಡಿನಲ್ಲಿ ಮಾಡುತ್ತಿರುವುದು ಅತ್ಯಂತ ಸಂತಸದ ವಿಚಾರ ದುರ್ಗದ ನಾಡಿಗೆ ಬೌದ್ಧ ಬಿಕ್ಕುಗಳು ಕಾಲಿಟ್ಟಿರುವುದರಿಂದ ನಾವೆಲ್ಲರೂ ಧನ್ಯರಾಗಿದ್ದೇವೆ, ಚಿತ್ರದುರ್ಗದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಅವರ ವಿಚಾರಾಗೋಷ್ಠಿಯನ್ನ ಬೃಹತ್ ವೇದಿಕೆಯನ್ನು ಸಿದ್ದಪಡಿಸಿ ಮುಂದಿನ ದಿನಗಳಲ್ಲಿ ಮಾಡಲಾಗುವುದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಹರಿಹರದ ಜಗದ್ಗುರು ಪಂಚಮಸಾಲಿ ಲಿಂಗಾಯತ ಗುರುಪೀಠದ ವಚನಾನಂದ ಸ್ವಾಮೀಜಿ, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಮುರುಘಾಮಠದ ಡಾ.ಬಸವಕುಮಾರ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ, ಆಹಾರ ಮತ್ತು  ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್, ಕಾರ್ಮಿಖ ಸಚಿವ ಸಂತೋಷ್ ಎಸ್.ಲಾಡ್, ಶಾಸಕ ಟಿ. ರಘುಮೂರ್ತಿ,  ರಾಜ್ಯಸಭಾ ಮಾಜಿ ಸದಸ್ಯ ಹೆಚ್.ಹನುಮಂತಪ್ಪ, ಮುಂಡಗೋಡಿನ ರಿನ್‍ಚೆನ್ ವಾನ್ಗೋ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಇತರರು ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಬೆಳ್ಳಂಬೆಳಗ್ಗೆ ಚಿತ್ರದುರ್ಗದಲ್ಲಿ ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಸರಗಳ್ಳರು
Next Article ರೈತರಿಗೆ ಗುಡ್ ನ್ಯೂಸ್ ಕೊಟ್ಟ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.