Breaking | ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ

ಚಿತ್ರದುರ್ಗ: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಹಿರಿಯೂರು ಶಾಸಕ ಡಿ. ಸುಧಾಕರ್ ಅವರು ಇಂದು ಮುಂಜಾನೆ 3.15ಕ್ಕೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲವು ತಿಂಗಳಿನಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೊಣಕಾಲು ಶಸ್ತ್ರಚಿಕಿತ್ಸೆಯ ನಂತರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅವರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನ 12 […]

Continue Reading

ರೈತನಾಯಕ ಬಿಎಸ್‌ವೈಗೆ ಚಿತ್ರದುರ್ಗದಲ್ಲಿ ವೈಭವಯುತ ಮೆರವಣಿಗೆ

ಚಿತ್ರದುರ್ಗ:ಐವತ್ತು ವರ್ಷಗಳ ಸುದೀರ್ಘ ರಾಜಕೀಯ ಪಯಣ ಪೂರೈಸಿರುವ ರೈತ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ B. S. Yediyurappa ಅವರ ಅಭಿಮಾನೋತ್ಸವದ ಅಂಗವಾಗಿ ಶುಕ್ರವಾರ ನಗರದಲ್ಲಿ ವೈಭವೋಪೇತ ಮೆರವಣಿಗೆ ನಡೆಯಿತು. ದಕ್ಷಿಣ ಭಾರತದಲ್ಲಿ ಕಮಲ ಅರಳಿಸಿದ ನಾಯಕರಾಗಿ ಗುರುತಿಸಿಕೊಂಡಿರುವ ಬಿಎಸ್‌ವೈ ಅವರು ಹೆಣ್ಣುಮಕ್ಕಳಿಗಾಗಿ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದು, ರೈತರ ಹೆಸರಿನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮಾಣವಚನ ಸ್ವೀಕರಿಸಿದ ರೈತನಾಯಕನಾಗಿ ಅಭಿಮಾನಿಗಳ ಮನದಲ್ಲಿ ವಿಶೇಷ ಸ್ಥಾನ ಪಡೆದಿದ್ದಾರೆ. ಮೆರವಣಿಗೆಯ ಮಾರ್ಗದುದ್ದಕ್ಕೂ ಅಭಿಮಾನಿಗಳು ಪಟಾಕಿ ಸಿಡಿಸಿ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. […]

Continue Reading

ಬಿಎಸ್‌ವೈ ಮೆಚ್ಚಿನ ಸಿಕೆಆರ್ 45 ಕಾರು ಅಭಿಮಾನೋತ್ಸವದ ಕೇಂದ್ರಬಿಂದು: ವಿಜಯೇಂದ್ರ

ಚಿತ್ರದುರ್ಗ:ರೈತ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ರಾಜಕೀಯ ಜೀವನದಲ್ಲಿ ಬಳಸಿದ್ದ ಸಿಕೆಆರ್ 45 ನಂಬರಿನ ಹಿಂದೂಸ್ತಾನ್ ಅಂಬಾಸಿಡರ್ ಕಾರು ಇಡೀ ರಾಜ್ಯದ ಜನರಿಗೆ ಪರಿಚಿತವಾಗಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ B. Y. Vijayendra ಹೇಳಿದರು. ಚಿತ್ರದುರ್ಗದಲ್ಲಿ ನಾಳೆ ನಡೆಯಲಿರುವ ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಈ ಐತಿಹಾಸಿಕ ಕಾರನ್ನು ತರಲಾಗಿದ್ದು, ಪ್ರದರ್ಶನಕ್ಕೆ ಇಡಲಾಗಿದೆ. ಕಾರಿನ ಮುಂದೆ ಶಾಸಕರು, ಮಾಜಿ ಶಾಸಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಫೋಟೋ ತೆಗಿಸಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಮಾಧ್ಯಮಗಳೊಂದಿಗೆ […]

Continue Reading

ಅಭಿಮಾನೋತ್ಸವದಲ್ಲಿ ಟೊಮೆಟೊ ಬಾತ್, ಮೊಸರನ್ನ, ಮೈಸೂರು ಪಾಕ್: ಲಕ್ಷಾಂತರ ಜನರಿಗೆ ಊಟದ ವ್ಯವಸ್ಥೆ

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ ಹಾಗೂ ಪುರಪ್ರವೇಶ ಕಾರ್ಯಕ್ರಮವನ್ನು ಸಾಂಸ್ಕೃತಿಕ ಹಬ್ಬದಂತೆ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ತಿಳಿಸಿದರು. ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸುಮಾರು 24 ಕಲಾತಂಡಗಳು, ಕವಿಗಳು ಹಾಗೂ ಸಾಹಿತಿಗಳು ಭಾಗವಹಿಸಲಿದ್ದಾರೆ. ರೈತರು, ಮಹಿಳೆಯರು ಮತ್ತು ಮಕ್ಕಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದು, ಇದೊಂದು ವಿಶಿಷ್ಟ ಪುರಪ್ರವೇಶ ಕಾರ್ಯಕ್ರಮವಾಗಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಶಾಸಕ ಎಸ್.ಆರ್. ವಿಶ್ವನಾಥ್ […]

Continue Reading

ಬಿಎಸ್‌ವೈ ಅಭಿನಂದನಾ ಮಹೋತ್ಸವಕ್ಕೆ 10 ಲಕ್ಷ ಜನರ ನಿರೀಕ್ಷೆ ಅಭಿಮಾನೋತ್ಸವಕ್ಕೆ ವ್ಯಾಪಕ ಸಿದ್ಧತೆ: ವಿಜಯೇಂದ್ರ

ಚಿತ್ರದುರ್ಗ: ಮೇ 9ರಂದು ಬೆಳಿಗ್ಗೆ ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ನಡೆಯಲಿದೆ. ಆದ್ದರಿಂದ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್‍ವೈ ಅಭಿಮಾನೋತ್ಸವವು ಬೆಳಿಗ್ಗೆ ಬದಲಿಗೆ ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ನಡೆಯಲಿದೆ. 3.45ರವೇಳೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿ, ಅಪ್ರತಿಮ ಹೋರಾಟಗಾರ, ರೈತ ನಾಯಕ, ಬಡವರ ಕಣ್ಮಣಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನದ 50 ವರ್ಷಗಳ ಪಯಣ ಪೂರೈಸಿದ,ಶುಭ ಘಳಿಗೆಯಲ್ಲಿ […]

Continue Reading

ಗೃಹಲಕ್ಷ್ಮಿ ಯೋಜನೆ ಚುನಾವಣಾ ಲಕ್ಷ್ಮಿಯಾಗಿ ಪರಿವರ್ತನೆ: ವಿಜಯೇಂದ್ರ ಟೀಕೆ

ಚಿತ್ರದುರ್ಗ: ಮುಖ್ಯಮಂತ್ರಿಗಳು ಗ್ಯಾರಂಟಿಗಳಿಂದ ಬೀಗುತ್ತಿದ್ದಾರೆ. ನಿಮ್ಮ ಗ್ಯಾರಂಟಿಗಳ ಬಗ್ಗೆ ಅಷ್ಟೊಂದು ವಿಶ್ವಾಸ ಇದ್ದರೆ ಸಿಎಂ,ಯಾಕೆ 15 ದಿನಗಳ ಕಾಲ ಬಾಗಲಕೋಟೆಗೆ ಬಂದು ಕೂರಬೇಕಾಗಿತ್ತು, ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ. ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿ, ಉಪ ಚುನಾವಣೆಯ ಸೋಲಿನಿಂದ ಹತಾಶರಾಗುವ ಪ್ರಶ್ನೆಯಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಂಥ ದಿಟ್ಟ ನಾಯಕತ್ವ ದೇಶಕ್ಕೆ ಸಿಕ್ಕಿದೆ. ನಿತಿನ್ ನವೀನ್ ಜೀ ಒಬ್ಬ ಯುವ ರಾಷ್ಟ್ರೀಯ ಅಧ್ಯಕ್ಷರು ನೇತೃತ್ವ ವಹಿಸಿಕೊಂಡಿದ್ದಾರೆ. ಅಮಿತ್ ಶಾ ಜೀ ಚುನಾವಣಾ ಚಾಣಕ್ಯ ನಮ್ಮ ಜೊತೆಗಿದ್ದಾರೆ. […]

Continue Reading