Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಕಾವೇರಿ ನೀರು ಹಂಚಿಕೆ: ಕೇಂದ್ರ ಜಲ ಶಕ್ತಿ ಸಚಿವರ ಪ್ರತಿಕ್ರಿಯೆ ಸಕಾರಾತ್ಮಕ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯ

ಕಾವೇರಿ ನೀರು ಹಂಚಿಕೆ: ಕೇಂದ್ರ ಜಲ ಶಕ್ತಿ ಸಚಿವರ ಪ್ರತಿಕ್ರಿಯೆ ಸಕಾರಾತ್ಮಕ: ಮುಖ್ಯಮಂತ್ರಿ ಸಿದ್ದರಾಮಯ್ಯ

D KumaraswamyBy D KumaraswamySeptember 21, 2023No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕಾವೇರಿ ನೀರು ಹಂಚಿಕೆ: ಕೇಂದ್ರ ಜಲ ಶಕ್ತಿ ಸಚಿವರ ಪ್ರತಿಕ್ರಿಯೆ ಸಕಾರಾತ್ಮಕ: ಮುಖ್ಯಮಂತ್ರಿ ಸಿದ್ದರಾಮಯ್ಯ

 ಕಾವೇರಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜತೆ ಸಭೆ ನಡೆಸಿದ್ದೇವೆ. ಸದ್ಯಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮತ್ತು ಜಲ ಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜತೆಗಿನ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ಕೇಂದ್ರ ಸಚಿವರಿಗೆ ಸಮರ್ಥವಾಗಿ ತಿಳಿಸಿದ್ದೇವೆ. ಅವರ ಸ್ಪಂದನೆ ಸಕಾರಾತ್ಮಕವಾಗಿತ್ತು. ಸುಪ್ರೀಂಕೋರ್ಟ್ ನಲ್ಲೂ ನಮ್ಮ ಮನವಿ ವಿಚಾರಣೆಗೆ ಬರಲಿದೆ. ಸುಪ್ರೀಂಕೋರ್ಟ್ ನಮ್ಮ ಮನವಿಯನ್ನು ಪುರಸ್ಕರಿಸಿ CWMC ಆದೇಶಕ್ಕೆ ತಡೆಯಾಜ್ಞೆ ನೀಡುವ ಭರವಸೆ ಇದೆ. ಹೀಗಾಗಿ ನಾವು ಸುಪ್ರೀಂಕೋರ್ಟ್ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಬಳಿಕ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ವಿವರಿಸಿದರು.

ನಾವು ಪ್ರಧಾನಿ ಅವರ ಸಮಯವನ್ನೂ ಕೇಳಿದ್ದೇವೆ. ಸಮಯ ಸಿಕ್ಕರೆ ಭೇಟಿ ಆಗುತ್ತೇವೆ. ನಾಲ್ಕೂ ರಾಜ್ಯದವರನ್ನು ಕರೆಸಿ ಮಾತನಾಡಲು ಮಧ್ಯ ಪ್ರವೇಶಿಸಿ ಎಂದು ಪ್ರಧಾನಿಗೆ ಮನವಿ ಮಾಡುತ್ತೇವೆ.

*ಗೋಷ್ಠಿಯ ಇತರೆ ಹೈಲೈಟ್ಸ್*

 

 

*ನಮಗೆ ಬೆಳೆ ರಕ್ಷಣೆ, ಕುಡಿಯುವ ನೀರು ಮತ್ತು ಕೈಗಾರಿಕೆಗಳಿಗೆ 106 ಟಿಎಂಸಿ ನೀರು ಅಗತ್ಯವಿದೆ . ಆದರೆ ನಮ್ಮ ನಾಲ್ಕೂ ಜಲಾಶಯಗಳಿಂದ ಕೇವಲ 51 ಟಿಎಂಸಿ ನೀರು ಇದೆ ಎನ್ನುವುದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ್ದೇವೆ*

*123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಬಿದ್ದು ಜಲಾಶಯಗಳ ಒಳ ಹರಿವು ಇಲ್ಲವಾಗಿದೆ ಎಂದು ಸಚಿವರ ಗಮನ ಸೆಳೆದಿದ್ದೇವೆ*

*ನಮ್ಮ ರೈತರು ಮತ್ತು ನಾನಾ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಬಿಡುವುದಕ್ಕೆ ನಮ್ಮ ಬಳಿ ನೀರೇ ಇಲ್ಲ ಎಂದೂ ಹೇಳಿದ್ದೇವೆ*

*ಸುಪ್ರೀಂಕೋರ್ಟ್ ಗೂ ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ನಮ್ಮ ಲೀಗಲ್ ತಂಡ ಮನವರಿಕೆ ಮಾಡಿಸಲು ಯತ್ನಿಸುತ್ತಿದೆ*

*ನಾಲ್ಕೂ ಜಲಾಶಯಗಳ ಒಳ ಹರಿವು 11 ರಿಂದ 8 ಕ್ಯೂಸೆಕ್ಸ್ ಗೆ ಇಳಿದಿದೆ*

ಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್, ಕೃಷಿ ಸಚಿವ ಚಲುವರಾಯಸ್ವಾಮಿ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ಪ್ರಕಾಶ್ ಹುಕ್ಕೇರಿ, ಸಂಸದ ಡಿ.ಕೆ.ಸುರೇಶ್ ಮುಂತಾದವರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆಗೆ ಕ್ರಮ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ
Next Article ಮೋದಿಯವರ ಮಹಿಳಾ ಮೀಸಲಾತಿ 2024, 2029 ಹಾಗೂ 2034 ರಲ್ಲೂ ಜಾರಿ ಆಗುವುದಿಲ್ಲ: ಸಿಎಂ ಸಿದ್ದರಾಮಯ್ಯ
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.