Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಬಾಲ ಗರ್ಭಿಣಿ ಪ್ರಕರಣ : ಎಂ.ಎಲ್.ಸಿ ಹಾಗೂ ಎಫ್.ಐ.ಆರ್ ಕೈಗೊಳ್ಳಲು ಡಿಸಿ ಸೂಚನೆ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ
ರಾಜ್ಯ

ಬಾಲ ಗರ್ಭಿಣಿ ಪ್ರಕರಣ : ಎಂ.ಎಲ್.ಸಿ ಹಾಗೂ ಎಫ್.ಐ.ಆರ್ ಕೈಗೊಳ್ಳಲು ಡಿಸಿ ಸೂಚನೆ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

D KumaraswamyBy D KumaraswamyJuly 22, 2024Updated:July 22, 2024No Comments5 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಬಾಲ ಗರ್ಭಿಣಿ ಪ್ರಕರಣ : ಎಂ.ಎಲ್.ಸಿ ಹಾಗೂ ಎಫ್.ಐ.ಆರ್ ಕೈಗೊಳ್ಳಲು ಡಿಸಿ ಸೂಚನೆ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

ಚಿತ್ರದುರ್ಗ,ಜುಲೈ 22:
ಆಸ್ಪತ್ರೆಗಳಲ್ಲಿ ಬಾಲ ಗರ್ಭಿಣಿ ಪ್ರಕರಣ ಪತ್ರೆಯಾದ ತಕ್ಷಣವೇ ಎಂ.ಎಲ್.ಸಿ (ಮೆಡಿಕೋ ಲೀಗಲ್ ಕೇಸ್) ಮಾಡಿ ಎಫ್.ಐ.ಆರ್. ದಾಖಲಿಸಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.
ಜುಲೈ 08 ಮತ್ತು 09 ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ,ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಗಳ ಸಮ್ಮೇಳನದಲ್ಲಿ ಚರ್ಚಿಸಲಾದ ವಿಷಯಗಳ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿವಿಧ ಇಲಾಖೆಗಳ ಅನುಪಾಲನಾ ಸಭೆ ನಡೆಸಿ ಅವರು ಮಾತಾಡಿದರು.
2022-23ನೇ ಸಾಲಿನಲ್ಲಿ ಬೆಳಕಿಗೆ ಬಂದ 806 ಬಾಲ ಗರ್ಭಿಣಿಯರ ಪ್ರಕರಣಗಳಲ್ಲಿ ಸಂಬಂಧಪಟ್ಟ ವೈದ್ಯಾಧಿಕಾರಿಗಳು ಏಕೆ ಎಂ.ಎಲ್.ಸಿ ಮಾಡಿಲ್ಲ? ಆರ್.ಸಿ.ಹೆಚ್. ತಂತ್ರಾಂಶದಲ್ಲಿ ನೋಂದಣಿ ಮಾಡಿದರೆ ಮಾತ್ರ ಸಾಲದು. ಮೊದಲ ಹಂತದಲ್ಲಿ ಎಂ.ಎಲ್.ಸಿ ಮಾಡಿದರೆ, ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳುವುದು. ಬಾಲ ಗರ್ಭಿಣಿ ಪ್ರಕರಣಗಳಲ್ಲಿ ಎಂ.ಎಲ್.ಸಿ ಮಾಡದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
2022-23, 2023-24 ಹಾಗೂ 2024-25 ಸಾಲಿನಲ್ಲಿ ಜಿಲ್ಲೆಯಲ್ಲಿ ಪತ್ತೆಯಾದ ಬಾಲ ಗರ್ಭಿಣಿ ಪ್ರಕರಣಗಳ ಸಂಪೂರ್ಣ ವಿವರ ನೀಡಿ. ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರರಣಗಳೆರೆಡು ಸಹ ಸಂಬಂಧ ಹೊಂದಿವೆ. ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಮರ್ಪಕ ಕಾರ್ಯ ಕೈಗೊಳ್ಳದಿರುವುದು ಮೇಲ್ಮೋಟಕ್ಕೆ ಕಂಡು ಬರುತ್ತಿದೆ. ಸಿಡಿಪಿಓಗಳು ಕಚೇರಿಯಲ್ಲಿ ಕುಳಿತುಕೊಳ್ಳದೇ ಗ್ರಾಮೀಣ ಪ್ರದೇಶದಲ್ಲಿ ಸುತ್ತಾಡಿ, ಬಾಲ್ಯ ವಿವಾಹವನ್ನು ತಡೆಗಟ್ಟಲು ಪ್ರಯತ್ನಿಸಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆರೋಗ್ಯ, ಶಿಕ್ಷಣ, ಕಾರ್ಮಿಕ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಒಟ್ಟಾಗಿ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಮಾತ್ರ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯಂತಹ ಪಿಡುಗನ್ನು ಜಿಲ್ಲೆಯಿಂದ ನಿರ್ಮೂಲನೆ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ತಾಲ್ಲೂಕು ಮಟ್ಟದಲ್ಲಿ ಬಾಲ್ಯ ವಿವಾಹ ತಡೆ ಮೇಲ್ವಿಚಾರಣಾ ಸಮಿತಿ ಹಾಗೂ ಗ್ರಾಮಗಳಲ್ಲಿ ಬಾಲ್ಯ ವಿವಾಹ ಕಾವಲು ಸಮಿತಿಗಳನ್ನು ರಚಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು ತಪ್ಪದೇ ಸಭೆಗಳನ್ನು ಆಯೋಜಿಸಿ ತಾಲ್ಲೂಕು ಮಟ್ಟದ ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳಲ್ಲಿ ಜಾಗೃತಿ ಮೂಡಿಸಬೇಕು. ಎಲ್ಲಾ ಶಾಲಾ ಕಾಲೇಜುಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪಿಡುಗಿನ ಕುರಿತು ಜಾಗೃತಿ ಮೂಡಿಸಬೇಕು ಎಂದು ಜಿ.ಪಂ.ಸಿಇಓ ಎಸ್.ಜೆ ಸೋಮಶೇಖರ್ ಸಭೆಯಲ್ಲಿ ಹೇಳಿದರು.
ಬಾಲ್ಯ ವಿವಾಹ ಹಲವು ಸಾಮಾಜಿಕ ಪಿಡುಗುಗಳಿಗೆ ನಾಂದಿಯಾಗುತ್ತದೆ. ಇದರಿಂದ ಬಾಲ ಗರ್ಭಿಣಿ, ಬಾಲ ತಾಯಿ, ಅನೀಮಿಯಾ, ತಾಯಿ ಹಾಗೂ ಮಗುವಿನ ಮರಣ ಸಹ ಉಂಟಾಗುತ್ತದೆ. ಈ ಸಾಮಾಜಿಕ ಅನಿಷ್ಠಗಳು ಜಿಲ್ಲೆಯ ಅಭಿವೃದ್ಧಿಗೆ ಕಳಂಕ ತರುತ್ತವೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬಾಲ್ಯ ವಿವಾಹವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಬಾಲ್ಯ ವಿವಾಹ ತಡೆಗೆ ಕಾರ್ಯಪ್ರವೃತ್ತವಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.

ವಾರದೊಳಗೆ ಅಂಗನವಾಡಿ ನಿವೇಶನದ ಸಮಸ್ಯೆ ಬಗೆಹರಿಸಿ :

ಜಿಲ್ಲೆಯ ಗ್ರಾಮೀಣ ಪ್ರದೇಶ ಹಾಗೂ ನಗರ ವ್ಯಾಪ್ತಿಯಲ್ಲಿ ಅಂಗನವಾಡಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿವೇಶನ ಗುರುತಿಸಬೇಕು. ವಾರದೊಳಗೆ ಅಂಗನವಾಡಿ ಕಟ್ಟಡ ನಿವೇಶನದ ಸಮಸ್ಯೆ ಬಗೆಹರಿಸಿ ಸ್ಥಳ ಮೀಸಲಿರಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಜಾಗ ಗುರುತಿಸಿ, ಅಂಗನವಾಡಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಇರುವ ಭೂಮಿಯನ್ನು ಮಂಜೂರು ಮಾಡಬೇಕು. ಈ ನಿಟ್ಟಿನಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ನಿವೇಶನ ಮೀಸಲಿರಿಸಬೇಕು. ಅಂಗನವಾಡಿ ನಿರ್ಮಾಣಕ್ಕೆ ಜಾಗದ ಸಮಸ್ಯೆ ಇರಬಾರದು. ಈ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಭಾರತಿ ಆರ್ ಬಣಕಾರ್ ಅವರಿಗೆ ಸೂಚನೆ ನೀಡಿದರು.

ಸಿಂಧುತ್ವ ಪ್ರಮಾಣ ಪತ್ರ ಬಾಕಿ ಪ್ರಕರಣ ಇತ್ಯರ್ಥಕ್ಕೆ ಸೂಚನೆ:

ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗಳ ಮೂಲಕ ಸಿಂಧುತ್ವ ಪ್ರಮಾಣ ಪತ್ರ ಬಾಕಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಮಾಜ ಕಲ್ಯಾಣ,ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಬಾಕಿ ಇರುವ ಸಿಂಧುತ್ವ ಪ್ರಮಾಣ ಪತ್ರ ಬಾಕಿ ಪ್ರಕರಣಗಳ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ತಹಶೀಲ್ದಾರ್‍ಗಳು ನಿರಂತರವಾಗಿ ಗಮನಹರಿಸಿ, ಬಾಕಿ ಇರುವ ಎಲ್ಲ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಕ್ರಮವಹಿಸಬೇಕು ಎಂದರು.

ವಿದ್ಯಾರ್ಥಿ ವೇತನದ ಬ್ಯಾಂಕ್ ಖಾತೆಗೆ ಆಧಾರ್ ಜೋಡಿಸಿ:

 

 

ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಎಲ್ಲಾ ವಿದ್ಯಾರ್ಥಿಗಳ ಖಾತೆಗಳಿಗೆ ಆಧಾರ್ ಜೋಡಣೆಗೆ ತುರ್ತಾಗಿ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿಲ್ಲಾ ಪಂಚಾಯಿತಿ ಸಿಇಒ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿದ್ಯಾರ್ಥಿ ವೇತನಕ್ಕೆ ಆಧಾರ್ ಜೋಡಣೆ ಕಡ್ಡಾಯವಾಗಿದ್ದು, ಆಧಾರ್ ಜೋಡಣೆಗೆ ಉಂಟಾಗಿರುವ ತಾಂತ್ರಿಕ ದೋಷಗಳು, ಕೆವೈಸಿ ಅಪ್‍ಡೇಟ್ ಸೇರಿದಂತೆ ಬಾಕಿ ಇರುವ ವಿದ್ಯಾರ್ಥಿಗಳ ಆಧಾರ್ ಜೋಡಣೆ ಪೂರ್ಣಗೊಳಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಶಾಲೆ, ವಸತಿ ನಿಲಯ, ಆಸ್ಪತ್ರೆ ಭೇಟಿ ಕಡ್ಡಾಯ:

ಉಪವಿಭಾಗಾಧಿಕಾರಿ, ತಹಶೀಲ್ದಾರ್ ಹಾಗೂ ತಾ.ಪಂ. ಇ.ಓ ಗಳು ವಸತಿ ನಿಲಯ, ಶಾಲೆ, ಆಸ್ಪತ್ರೆಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಗಳ ಕುರಿತು ಜಿ.ಪಿ.ಎಸ್ ಪೋಟೋದೊಂದಿಗೆ ವರದಿ ನೀಡುವಂತೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು.
ವಾರಕ್ಕೆ ಕನಿಷ್ಟ ಎರಡು-ಮೂರು ಶಾಲೆ, ವಸತಿ ನಿಲಯ, ಆಸ್ಪತ್ರೆಗಳಿಗೆ ಭೇಟಿ ನೀಡಬೇಕು ಎಂದು ತಾಕೀತು ಮಾಡಿದರು. ಜಿಲ್ಲೆಯಲ್ಲಿರುವ ಎಲ್ಲಾ ಹಾಸ್ಟೆಲ್, ಶಾಲೆಗಳು ಹಾಗೂ ಅಂಗನವಾಡಿಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಶೇ.100 ರಷ್ಟು ನೀರು ಪೂರೈಕೆಗೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಗ್ರಾಮೀಣ ಕುಡಿಯುವ ನೀರು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗಂಗಾ ಕಲ್ಯಾಣ ಯೋಜನೆ ಪಂಪಸೆಟ್‍ಗಳಿಗೆ ವಿದ್ಯುತ್ ಸಂಪರ್ಕಕ್ಕೆ ಸೂಚನೆ: ಅಂಬೇಡ್ಕರ್, ಬೋವಿ, ಅಲ್ಪ ಸಂಖ್ಯಾತ ಹಾಗೂ ದೇವರಾಜ ಅರಸು ಅಭಿವೃದ್ಧಿ ನಿಗಮಗಳಡಿ ಬರುವ ವಿವಿಧ ನಿಗಮಗಳ ಅನುದಾನದಲ್ಲಿ ಈಗಾಗಲೇ ಕೊರೆಸಿರುವ ಬೋರ್‍ವೆಲ್‍ಗಳಿಗೆ ಶೀಘ್ರವೇ ವಿದ್ಯುತ್ ಸಂಪರ್ಕ ನೀಡಬೇಕು.
ಪ್ರತಿಯೊಂದು ನಿಗಮಗಳು 2023 ಡಿಸೆಂಬರ್ ಅಂತ್ಯಕ್ಕೆ ಬೋರ್‍ವಲ್ ಕೊರೆಯಲು ನಿಗದಿ ಪಡಿಸಿದ ಗುರಿ, ಕೊರೆಸಿದ ಬೋರವೆಲ್, ಫಲಪ್ರಧವಾದ ಬೋರ್‍ವೆಲ್, ವಿದ್ಯುತ್ ಸಂಪರ್ಕ ಕಲ್ಪಿಸಿದ ಹಾಗೂ ಕಲ್ಪಿಸದ ಬೋರ್‍ವೆಲ್ ವಿವರಗಳನ್ನು ಮುಂದಿನ ಸಭೆಯ ವೇಳೆ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ :

ವಿವೇಕ ಯೋಜನೆಯಡಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಹಾಗೂ ಪಿಯು ಇಲಾಖೆಗೆ ಮಂಜೂರಾದ ಶಾಲಾ ಕೊಠಡಿಗಳ ನಿರ್ಮಾಣವನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ಇಂಜಿನಿಯರಿಂಗ್ ಅಧಿಕಾರಿಗೆ ಸಭೆಯಲ್ಲಿ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಮಳೆಗಾಲ ಮುಂದುವರೆದಿದ್ದು, ಅತ್ಯಂತ ದುಸ್ಥಿತಿಯಲ್ಲಿರುವ ಶಾಲಾ ಕೊಠಡಿಗಳ ದುರಸ್ಥಿಗೆ ವಿಪತ್ತು ನಿರ್ವಹಣಾ ನಿಧಿಯಿಂದ ಅನುದಾನ ನೀಡಲಾಗುವುದು. ಯಾವುದೆ ಕಾರಣಕ್ಕೂ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳಲ್ಲಿ ಮಕ್ಕಳನ್ನು ಕೂರಿಸಿ ಪಾಠ ಮಾಡಬಾರದು. ಇದರ ಹೊರತಾಗಿ ಕೊಠಡಿಗಳ ದುರಸ್ಥಿ ಪಟ್ಟಿಯನ್ನು ಸಿದ್ದಪಡಿಸಿ ಇಲಾಖೆಗೆ ಸಲ್ಲಿಸುವಂತೆ ಹೇಳಿದರು.
ಜಿಲ್ಲೆಯಲ್ಲಿ ವಿವೇಕ ಯೋಜನೆಯಡಿ 191 ಶಾಲಾ ಕೊಠಡಿಗಳು ಮಂಜೂರಾಗಿದ್ದವು. ಇದರಲ್ಲಿ 171 ಕೊಠಡಿಗಳ ಕಾಮಗಾರಿ ಪೂರ್ಣಗೊಂಡಿದೆ. 13 ಪ್ರಗತಿಯಲ್ಲಿವೆ. 7 ಸ್ಥಳಗಳಲ್ಲಿ ಕೊಠಡಿ ನಿರ್ಮಾಣಕ್ಕೆ ಸ್ಥಳದ ಕೊರತೆ ಇದೆ. ಜಿಲ್ಲೆಯಲ್ಲಿ 560 ಕ್ಕೂ ಹೆಚ್ಚು ಶಾಲಾ ಕೊಠಡಿಗಳ ದುರಸ್ತಿಯಾಗಬೇಕಿದೆ. ಈ ಕುರಿತು ಪ್ರಸ್ತಾವನೆಯನ್ನು ಇಲಾಖೆ ಮುಖ್ಯಸ್ಥರಿಗೆ ಸಲ್ಲಿಸಲಾಗಿದೆ ಎಂದು ಡಿ.ಡಿ.ಪಿ.ಐ ಸಭೆಗೆ ಮಾಹಿತಿ ನೀಡಿದರು.

ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಸೂಚನೆ :

ಶಾಲೆಯಿಂದ ಹೊರಗುಳಿದ 18 ವರ್ಷ ಒಳಗಿನ ಮಕ್ಕಳ ಸಮೀಕ್ಷೆ ಕಾರ್ಯ ಜಿಲ್ಲೆಯಲ್ಲಿ ನಡೆಯುತ್ತಿದೆ. ಶಾಲೆಯಿಂದ ಹೊರಗುಳಿದ ಮಕ್ಕಳೇ, ಬಾಲಕಾರ್ಮಿಕರು ಹಾಗೂ ಬಾಲ್ಯವಿವಾಹಕ್ಕೆ ತುತ್ತಾಗುತ್ತಾರೆ. ಆದ್ದರಿಂದ ಎಲ್ಲಾ ನಗರ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿಯೂ ಮನೆ ಮನೆ ಸಮೀಕ್ಷೆ ಮಾಡುವ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಬೇಕು. ಇವರನ್ನು ಮುಖ್ಯವಾಹಿನಿಗೆ ತರಬೇಕು. ಎಲ್ಲಾ ತಾ.ಪಂ. ಇಓ ಹಾಗೂ ಪಿಡಿಓಗಳಿಗೆ ಸಮೀಕ್ಷೆ ಕುರಿತು ಎರಡು ಬಾರಿ ತರಬೇತಿ ನೀಡಲಾಗಿದೆ. ಸಮೀಕ್ಷೆ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಸೂಚಿಸಿದರು.
ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಚರ್ಚಿಸಿದ ವಿಷಯಗಳು ಕಡ್ಡಾಯವಾಗಿ ಅನುಷ್ಠಾನಗೊಳ್ಳಬೇಕು. ಇಲ್ಲದಿದ್ದರೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೆಶಕ ಬಿ.ಆನಂದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಹಿಂದು ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುಬ್ರನಾಯ್ಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಸೇರಿದಂತೆ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್, ನಗರಸಭೆ ಪೌರಾಯುಕ್ತರು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

 

Share. Facebook Twitter Pinterest LinkedIn Tumblr WhatsApp Email
Previous Articleಜ್ಞಾನಾಭಿವೃದ್ಧಿಗೆ ಗುರು ಪರಂಪರೆ ಅತ್ಯಂತ ಮಹತ್ವವಾದ ಕೊಡುಗೆ ನೀಡಿದೆ
Next Article ಅಂಗನವಾಡಿ ಕೇಂದ್ರಗಳಿಗೆ ನ್ಯಾ. ಎಂ. ವಿಜಯ ಅನಿರೀಕ್ಷಿತ ಭೇಟಿ : ಅಸಮಾಧಾನ ವ್ಯಕ್ತ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.