ಚಿತ್ರದುರ್ಗ ಜಿಲ್ಲೆಯಲ್ಲಿ 30 ಜನರಿಗೆ ಕೋವಿಡ್ ಸೋಂಕು ಧೃಢ

ಆರೋಗ್ಯ

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 30 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,904 ಕ್ಕೆ ಏರಿಕೆಯಾಗಿದ್ದು, ಒಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ. Chitradurga 30 covid positive case today
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 63 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಮಂಗಳವಾರ ಒಟ್ಟು 2124 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 30 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 12,904ಕ್ಕೆ ಏರಿಕೆಯಾಗಿದೆ. ಒಟ್ಟು 62 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 12,363 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 478 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,02,870 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 1,28,005 ಜನರ ಮಾದರಿ ಸಂಗ್ರಹಿಸಲಾಗಿದ್ದು, 1,13,738 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 871 ಜನರ ವರದಿ ಬರುವುದು ಬಾಕಿ ಇದೆ. 492 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

 

 

 

Leave a Reply

Your email address will not be published. Required fields are marked *