ಅಂಬೇಡ್ಕರ್ ಅಭಿವೃದ್ದಿ ನಿಗಮಕ್ಕೆ ಮುನ್ನೂರು ಕೋಟಿ ಹೆಚ್ಚುವರಿ ಅನುದಾನ ಬಿಡುಗಡೆ

ಜಿಲ್ಲಾ ಸುದ್ದಿ

ಚಿತ್ರದುರ್ಗ ಮಾ. 25

ಮಾದಿಗ ಸಮುದಾಯದ ಬಗ್ಗೆ ಸರ್ಕಾರಕ್ಕೆ ವಿಶೇಷ ಕಾಳಜಿ ಇದೆ, ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯ ಸಮ್ಮತ ನಿರ್ಣಯ ಕೈಗೊಂಡು ಈ ಸಮುದಾಯಕ್ಕೆ ನ್ಯಾಯ ಒದಗಿಸುತ್ತೇನೆ, ನನ್ನ ಮೇಲೆ ವಿಶ್ವಾಸವಿಡಿ ಎಂದು ಮುಖ್ಯಮಂತ್ರಿಗಳಾದ ಯಡಿಯೂರಪರವರು ತಮ್ಮನ್ನು ಭೇಟಿಯಾದ ಸ್ವಾಮೀಜಿಗಳ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

Chitradurga swamiji niyoga

 

 

 

ಮಾದಿಗ ಸಮುದಾಯದ ಮಠಾಧೀಶರು ಹಾಗೂ ಡಿಸಿಎಂ ಗೋವಿಂದ ಕಾರಜೋಳ ಹಾಗೂ ಸಂಸದ ಎ. ನಾರಾಯಣಸ್ವಾಮಿ ಸೇರಿದಂತೆ ಅನೇಕ ಜನಪ್ರತಿನಿಧಿಗಳು, ಹೋರಾಟಗಾರರು ಇಂದು ಸಿಎಂ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿ ಒಳಮೀಸಲಾತಿ, ಸದಾಶಿವ ಆಯೋಗದ ವರದಿ-ಮಾದಿಗ ಸಮುದಾಯದ ಸ್ಥಿತಿಗತಿಗಳ ಬಗ್ಗೆ ಸುಧೀರ್ಘ ಮಾತುಕತೆ ನಡೆಸಿ ಒಳಮೀಸಲಾತಿಗೆ ಸಂಬಂಧಿಸಿದಂತೆ ತಜ್ಞರೊಂದಿಗೆ ಚರ್ಚಿಸಿ ಶೀಘ್ರದಲ್ಲಿಯೇ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಭರವಸೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಆದಿಜಾಂಬವ ಅಭಿವೃದ್ಧಿ ನಿಗಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ತಲಾ 150 ಕೋಟಿ ರೂಗಳಂತೆ ಒಟ್ಟು 300 ಕೋಟಿ ಅನುದಾನವನ್ನು ಹೆಚ್ಚುವಾರಿಯಾಗಿ ಬಿಡುಗಡೆ ಮಾಡುವುದಾಗಿ ಬಿಎಸ್‍ವೈ ತಿಳಿಸಿದರು.

ಸಂಯುಕ್ತ ವಾಣಿ

Leave a Reply

Your email address will not be published. Required fields are marked *