ನವದೆಹಲಿ: ಕೈಪಕ್ಷದ ಹಿರಿಯ ನಾಯಕ ಕಾಂಗ್ರಸ್ ನ ಕಟ್ಟಾಳು ಅಹಮದ್ ಪಟೇಲ್ ಇಂದು ನಿಧನರಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ.
ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಅಮಹದ್ ಪಟೇಲ್ ಪಾತ್ರ ಬಹಳ ಪ್ರಮುಖವಾಗಿತ್ತು. ಕಾಂಗ್ರೆಸ್ ಪಕ್ಷಕ್ಕೆಎದುರಾಗಿದ್ದ ಕಷ್ಟದ ದಿನಗಳಲ್ಲಿ ಹೆಗಲಿಗೆ ಹೆಗಲು ಕೊಟ್ಟು ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಮುಂದಾಗಿದ್ದರು. ಕಾಂಗ್ರೆಸ್ ಅಧಿನಾಯಕಿ ಸೋನೀಯಾ ಗಾಂಧಿಗೆ ರಾಜಕೀಯ ಅಪ್ತರು ಆಗಿದ್ದರು. ರಾಜಕೀಯ ಜೀವನದಲ್ಲಿ ಮೂರು ಬಾರಿ ಲೋಕಸಭಾ, ಐದು ಬಾರಿ ರಾಜ್ಯ ಸಭಾ ಸದಸ್ಯರಾಗಿದ್ದರು.
ಇಂತಹ ನಾಯಕ ಪಟೇಲ್ ಕಳೆದ ೧ ತಿಂಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಜೊತೆಗೆ ಬಹು ಅಂಗಾಂಗಳ ವೈಫಲ್ಯದಿಂದ ಬಳಲುತ್ತಿದ್ದರು. ಇಂದು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸಂಯುಕ್ತವಾಣಿ