ಬೆಂಗಳೂರು: ಕೋರೋನಾ ಮಹಾ ಮಾರಿಯನ್ನು ತಡೆಯಲು ವ್ಯಾಕ್ಸಿನ್ ಗಾಗಿ ವಿಧಾನ ಪರಿಷತ್, ವಿಧಾನ ಸಭಾ ಸದಸ್ಯರು ಹಾಗೂ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ನೂರು ಕೋಟಿ ನೀಡಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಘೋಷಿಸಿದರು.
ಕಾಂಗ್ರೆಸ್ ನ ಎಲ್ಲಾ ವಿಧಾನ ಸಭಾ, ಹಾಗೂ ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ಒಂದು ಕೋಟಿಯಂತೆ ಒಟ್ಟು ನೂರು ಕೋಟಿಯನ್ನು ವ್ಯಾಕ್ಸಿನ್ ಹಂಚಿಕೆ ಪ್ರಕ್ರಿಯೆಗೆ ನೀಡಲು ತೀರ್ಮಾನಿಸಿದ್ದೇವೆ. ಎಲ್ಲರಿಗೂ ಆದಷ್ಟು ಬೇಗ ವ್ಯಾಕ್ಸಿನ್ ಸಿಗಲಿ ಎಂಬುದು ನಮ್ಮ ಆಶಯವಾಗಿದೆ. ಎಂದು ಸರಣಿ ಟ್ವೀಟ್ ಮಾಡುವ ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದ ಪ್ರತಿಯೊಬ್ಬರಿಗೂ ವ್ಯಾಕ್ಸಿನ್ ನೀಡುವುದೇ ಸೋಂಕು ತಡೆಗಟ್ಟಲು ಇರುವ ಏಕೈಕ ಮಾರ್ಗ ಎಂದು ತಜ್ಙರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಅರ್ಧದಷ್ಟು ಜನರಿಗೆ ವ್ಯಾಕ್ಸಿನ್ ನೀಡಿದ್ದರೆ ಕೋರೋನಾ ವಿರುದ್ಧ ಹೋರಾಡಲು ಮತ್ತಷ್ಟು ಬಲ ಬಂದಿರುತ್ತಿತ್ತು. ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯಕ್ಕೆ ವ್ಯಾಕ್ಸಿನ್ ಬರುವುದು ಹಲವು ತಿಂಗಳು ಆಗಬಹುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ. ಕೋರೋನಾ 3 ನೇ ಅಲೆ ಬಗ್ಗೆ ತಜ್ಙರು ಹೇಳಿರುವುದನ್ನು ಗಮನಿಸಿದರೆ ಆತಂಕವಾಗುತ್ತದೆ ಎಂದಿದ್ದಾರೆ ಸಿದ್ದರಾಮಯ್ಯ.18 ರಿಂದ 45 ವಯೋಮಾನದವರಿಗೆ ವ್ಯಾಕ್ಸಿನ್ ನೀಡಲು ರಾಜ್ಯ ಸರ್ಕಾರಗಳೆ ಹಣ ಹಾಕಬೇಕು ಎಂದು ಕೇಂದ್ರ ಹೇಳಿರುವುದು ನುಣಿಚಿಕೊಳ್ಳುವ ಮಾತು. ಕೇಂದ್ರ ಸರ್ಕಾರವೇ ದೇಶದ ಪ್ರತಿಯೊಬ್ಬರಿಗೂ ವ್ಯಾಕ್ಸಿನ್ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಸಂಯುಕ್ತವಾಣಿ