Chitradurga full lockbdown

ಇಲ್ಲಿದೆ ರಾಜ್ಯ ಸರ್ಕಾರದ ಪರಿಷ್ಕೃತ ಹೊಸ ಮಾರ್ಗ ಸೂಚಿ

ರಾಜ್ಯ

 

 

ಬೆಂಗಳೂರು: ಕೋರೋನಾ ಎರಡನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ಸೋಮವಾರದಿಂದ ಶುಕ್ರವಾರದ ವರೆಗೆ ರಾತ್ರಿ 9 ರಿಂದ ಬೆಳಗ್ಗೆ 6 ರವೆರೆಗೆ ನೈಟ್ ಕರ್ಫ್ಯೂ ಹಾಗೂ ವಿಕೇಂಡ್ ಆಗಿ ಶನಿವಾರ ಹಾಗೂ ಭಾನುವಾರ ಪೂರ್ತಿ ಕರ್ಪ್ಯೂ ಜಾರಿ ಮಾಡಿದ್ದು, ಇದರ ಜೊತೆಗೆ ಮತ್ತಷ್ಟು ಹೊಸ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದೆ.

 ಹೊಸ ಮಾರ್ಗಸೂಚಿ ಕ್ರಮದಂತೆ ಮದುವೆಗೆ 50 ಜನರಿಗೆ, ಅಂತ್ಯಕ್ರಿಯೆಗೆ 20 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ. ಎಲ್ಲಾ ಇ ಕಾಮರ್ಸ್ ಚಟುವಟಿಕೆಗೆ ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್, ಸ್ವಿಮ್ಮಿಂಗ್ ಫೂಲ್, ಮಾರ್ಕೆಟ್ ಬಂದ್ ಮಾಡಲಾಗುತ್ತಿದೆ. ಶಾಲಾ-ಕಾಲೇಜು ಮುಚ್ಚಲಾಗುತ್ತಿದೆ. ರಾತ್ರಿ ಪಾಳಿಯಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡೋದಕ್ಕೆ ಅವಕಾಶ ನೀಡಲಾಗಿದೆ.

 

 

 

Chitradurga new guide lines for covid

ರಾತ್ರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಸ್ ನಲ್ಲಿ ತೆರಳೋರು ಟಿಕೆಟ್ ತೋರಿಸಿ ಸಾಗಬೇಕು. ರಾಜ್ಯಾಧ್ಯಂತ ಧಾರ್ಮಿಕ ಕ್ಷೇತ್ರಗಳು ಬಂದ್ ಮಾಡಲಾಗುತ್ತಿದೆ. ಭಕ್ತರಿಗೆ ಅವಕಾಶವಿಲ್ಲ. ಸಲೂನ್, ಬ್ಯೂಟಿ ಪಾರ್ಲರ್ ಗೆ ಅವಕಾಶ ನೀಡಲಾಗಿದೆ. ಸರ್ಕಾರಿ ಕಚೇರಿಯಲ್ಲಿ ಶೇ.50ರಷ್ಟು ಜನರಿಗೆ ಕೆಲಸ ಮಾಡೋದಕ್ಕೆ ಅವಕಾಶ ನೀಡಲಾಗಿದೆ.

ಇದಲ್ಲದೇ ಅಗತ್ಯ ಸೇವೆ ಒದಗಿಸುವಂತ ಸೇವೆಯ ಶಾಪ್ ಗಳು ಹೊರತಾಗಿ, ರಾಜ್ಯಾಧ್ಯಂತ ಇತರೆ ಶಾಪ್ ಗಳನ್ನು ಬಂದ್ ಮಾಡುವಂತೆ ಇದೀಗ ನೂತನ ಮಾರ್ಗಸೂಚಿ ಆದೇಶದಲ್ಲಿ ತಿಳಿಸಲಾಗಿದೆ. ಈ ಮೂಲಕ ನಿನ್ನೆಯಿಂದಲೇ ಅನ್ವಯವಾಗುವಂತೆ ಪರಿಷ್ಕೃತ ಮಾರ್ಗಸೂಚಿ ಆದೇಶದಲ್ಲಿ ಅಗತ್ಯಸೇವೆ ಹೊರತಾಗಿ ಉಳಿದ ಎಲ್ಲಾ ಶಾಪ್ ಬಂದ್ ಗೆ ಸೂಚಿಸಲಾಗಿದೆ. ಹೀಗಾಗಿ ಪೊಲೀಸರು ಫೀಲ್ಡಿಗೆ ಇಳಿದಿದ್ದು, ಅಗತ್ಯ ಸೇವೆ ಒದಗಿಸುವಂತೆ ಮೆಡಿಕಲ್, ಹಾಲು, ಇ-ಕಾಮರ್ಸ್ ಸೇರಿದಂತೆ ಇತರೆ ಶಾಪ್ ಹೊರತಾಗಿ, ಇತರೆ ಅಂಗಡಿ ಮುಂಗಟ್ಟುಗಳನ್ನು ಕ್ಲೋಸ್ ಮಾಡುತ್ತಿದ್ದಾರೆ.

 

ಸಂಯುಕ್ತವಾಣಿ

Leave a Reply

Your email address will not be published. Required fields are marked *