ಚಿತ್ರದುರ್ಗ : ಜಿಲ್ಲೆಯಲ್ಲಿ ಗೆದ್ದಿರುವ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರು ಪಕ್ಷಭೇದ ಮರೆತು ಚುನಾವಣೆಯ ಸಂದರ್ಭದಲ್ಲಿ ನಡೆದಿರಬಹುದಾದ ಕಹಿಘಟನೆಗಳನ್ನು ಲೆಕ್ಕಿಸದೆ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಮಾಜ ಕಲ್ಯಾಣ ಮಾಜಿ ಸಚಿವ ಹೆಚ್. ಆಂಜನೇಯ ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಬಹಳಷ್ಟು ಗ್ರಾಮ ಪಂಚಾಯತಿಗಳು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ ವಿಶೇಷವಾಗಿ ನನ್ನ ಮತ ಕ್ಷೇತ್ರ ಹೊಳಲ್ಕೆರೆಯಲ್ಲಿ ಬಹುತೇಕ ಗ್ರಾಮಪಂಚಾಯತಿಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೆ ಗೆದ್ದಿರುವುದು ನನ್ನ ಅಧಿಕಾರದ ಅವಧಿಯಲ್ಲಿ ಮಾಡಿದ ಸಾಧನೆ, ಅಭಿವೃದ್ಧಿ ಕಡೆಗೆ ಮತದಾರರು ಒಲವನ್ನು ತೋರಿಸಿದ್ದಾರೆ ಮತ ನೀಡಿದ. ಮತದಾರರಿಗೆ ಕೃತಜ್ಞತೆಗಳು. ಜಯಗಳಿಸಿದ ಅಭ್ಯರ್ಥಿಗಳಿಗೆ ಅಭಿನಂದನೆ.ಗ್ರಾಮಗಳು ರಾಮರಾಜ್ಯ ವಾಗಬೇಕೆಂಬ ಗಾಂಧೀಜಿಯವರ ಕನಸನ್ನು ನನಸು ಮಾಡಿದವರು
ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಅಧಿಕಾರ ಸಮಾನವಾಗಿ ಹಂಚಿಕೆಯಾಗಬೇಕು ಇದು ಸಾಮಾಜಿಕ ನ್ಯಾಯ. ಜನರ ಕೈಗೆ ಅಧಿಕಾರ ನೀಡಿದ ಕೀರ್ತಿ ಕಾಂಗ್ರೆಸ್ ಪಾರ್ಟಿಗೆ ಸಲ್ಲಬೇಕು ಎಂದು ಹೇಳಿದ್ದಾರೆ.
ಸಂಯುಕ್ತವಾಣಿ




