Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಆರೋಗ್ಯ»ಕಾಲೇಜ್ ಮತ್ತು ಕ್ಯಾಂಪಸ್ ಗಳ ಮೇಲೆ ತೀವ್ರ ನಿಗಾ ವಹಿಸಿ: ಡಿಸಿ ವೆಂಕಟೇಶ್
ಆರೋಗ್ಯ

ಕಾಲೇಜ್ ಮತ್ತು ಕ್ಯಾಂಪಸ್ ಗಳ ಮೇಲೆ ತೀವ್ರ ನಿಗಾ ವಹಿಸಿ: ಡಿಸಿ ವೆಂಕಟೇಶ್

D KumaraswamyBy D KumaraswamyJuly 1, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಮಾದಕ ವಸ್ತುಗಳ ನಿಯಂತ್ರಣಕ್ಕೆ ವಿವಿಧ ಇಲಾಖಾ ಅಧಿಕಾರಿಗಳ ತಂಡ ರಚನೆ

 

 

ಮಾದಕ ವಸ್ತುಗಳ ನಿಯಂತ್ರಣ ದಿಸೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಅಧಿಕಾರಿಗಳ ತಂಡ ರಚಿಸಿ, ನಿಯಮಿತವಾಗಿ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಮಾದಕ ವಸ್ತುಗಳ ನಿಯಂತ್ರಣ ಕುರಿತಾದ ಜಿಲ್ಲಾ ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಎಲ್ಲ ವಸತಿ ನಿಲಯಗಳಲ್ಲಿ ಪ್ರತಿ ತಿಂಗಳಿಗೊಮ್ಮೆ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮದ ಕುರಿತು ವಿದ್ಯಾರ್ಥಿಗಳಿಗೆ ನಿಯಮಿತವಾಗಿ ಜಾಗೃತಿ ಮೂಡಿಸಿ, ಕಡ್ಡಾಯವಾಗಿ ವರದಿ ನೀಡಬೇಕು ಎಂದು ತಾಕೀತು ಮಾಡಿದರು.
ಮಾದಕ ವಸ್ತುಗಳ ನಿಯಂತ್ರಣ ಕುರಿತಂತೆ ಪೊಲೀಸ್ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಸ್ಟೆಲ್, ಕಾಲೇಜು ಕ್ಯಾಂಪಸ್ ಮಾತ್ರವಲ್ಲದೇ ಕಾಲೇಜು ಕ್ಯಾಂಪಸ್ ಹೊರಗಡೆಯೂ ಪೆಟ್ಟಿಗೆ ಅಂಗಡಿ ಸೇರಿದಂತೆ ಕೆಲವು ನಿರ್ಧಿಷ್ಟ ಸ್ಥಳಗಳ ಅಡ್ಡಗಳ ಮೇಲೆಯೂ ತೀವ್ರ ನಿಗಾ ವಹಿಸಬೇಕು. ಮಾದಕ ವಸ್ತುಗಳ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ತಾಲ್ಲೂಕುವಾರು ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ತಂಡ ರಚನೆ ಮಾಡಿ ಆಗಿಂದಾಗೆ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಲು ಕ್ರಮ ವಹಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಯುವ ಜನರು ಮಾದಕ ವಸ್ತುಗಳ ಬಳಕೆಯ ಬಲೆಗೆ ಬೀಳದಂತೆ ಎಚ್ಚರ ವಹಿಸುವುದು ಅಗತ್ಯವಾಗಿದ್ದು, ಶಿಕ್ಷಣ ಸಂಸ್ಥೆಗಳು ಕೂಡ ಆಂತರಿಕವಾಗಿ ಇಂತಹ ಅಕ್ರಮ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾ ವಹಿಸುವಂತಹ ವ್ಯವಸ್ಥೆಯನ್ನು ಮಾಡಿಕೊಂಡು, ಮಾದಕ ವಸ್ತುಗಳ ಚಟುವಟಿಕೆ ಬೆಳವಣಿಗೆಗೆ ಅವಕಾಶ ನೀಡದಂತೆ ತೀವ್ರ ಕಟ್ಟೆಚ್ಚರ ವಹಿಸಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮದ ಕುರಿತು ಇಲಾಖೆ ವ್ಯಾಪ್ತಿಯ ಎಲ್ಲ ವಸತಿ ಶಾಲೆ ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಲಾಗಿದೆ. ಈ ಕುರಿತು ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡಲಾಗುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.
ಎನ್‍ಎಸ್‍ಎಸ್ ಜಿಲ್ಲಾ ಬೋಧಕ ಲೋಕೇಶ್ ಮಾತನಾಡಿ,  ಎನ್‍ಎಸ್‍ಎಸ್ ವಾರ್ಷಿಕ ಶಿಬಿರಗಳಲ್ಲಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಕುರಿತು ಉಪನ್ಯಾಸ, ಜಾಗೃತಿ ಜಾಥಾಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು. ಎನ್‍ಎಸ್‍ಎಸ್ ತಂಡಗಳು ಹಾಗೂ ಸ್ವಯಂ ಸೇವಕರ ತಂಡವು ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ ತಂಬಾಕು ಮುಕ್ತ ಗ್ರಾಮಗಳನ್ನಾಗಿ ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಮಾತನಾಡಿ, ಮಾದಕ ವಸ್ತುಗಳ ಬಳಕೆ ಸಂಬಂಧಪಟ್ಟಂತೆ ಹೊಳಲ್ಕೆರೆ ಹಾಗೂ ಚಿತ್ರದುರ್ಗ ತಾಲ್ಲೂಕುಗಳಿಂದ ಸಾಕಷ್ಟು ದೂರುಗಳು ಬರುತ್ತಿವೆ. ದುಡ್ಡಿಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುವ ಪೆಡ್ಲರ್ ಕುರಿತು ಸ್ಥಳೀಯರು, ಅಧಿಕಾರಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಅಥವಾ ಸಾರ್ವಜನಿಕರು ಮಾಹಿತಿ ನೀಡಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಭರತ್ ಮಾತನಾಡಿ, ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಕುರಿತಂತೆ ವಿದ್ಯಾರ್ಥಿಗಳಲ್ಲಿ ಈಗಾಗಲೆ ಜಾಗೃತಿ, ಉಪನ್ಯಾಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.  ಅಲ್ಲದೆ ನಿಯಮಿತವಾಗಿ ಕಣ್ಗಾವಲು ವಹಿಸಲಾಗುತ್ತಿದೆ ಎಂದರು.
ಸಭೆಯಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯಸ್ಥರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleವಿದ್ಯಾರ್ಥಿ ನಿಲಯಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ ಸದಸ್ಯ ಎಸ್.ಕೆ.ವೆಂಟಿಗೋಡಿ ಭೇಟಿ, ಪರಿಶೀಲನೆ
Next Article ಮಕ್ಕಳ ಭವಿಷ್ಯ ಕಟ್ಟುವ ಕೆಲಸ ಶಿಕ್ಷಣ ಸಂಸ್ಥೆಗಳಿಂದ ಮಾತ್ರ ಸಾಧ್ಯ: ಶಿವ ಶರಣ ಮಾದಾರಚನ್ನಯ್ಯ ಶ್ರೀ
D Kumaraswamy
  • Tumblr

Related Posts

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ

August 3, 2025

ತೆರೆಗೆ ಅಪ್ಪಳಿಸಲು ಸಜ್ಜಾದ ಕ್ಯೂಬ್ ಎಂಟರ್ ಟೈನ್ಮೆಂಟ್ ನ ಮಹತ್ವಾಕಾಂಕ್ಷಿ ಚಿತ್ರ ಕಟ್ಟಾಳನ್ 

June 7, 2025

1.11 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಆರು ತಿಂಗಳಲ್ಲಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಹಕ್ಕುಪತ್ರ – ಸಿ.ಎಂ.ಸಿದ್ದರಾಮಯ್ಯ

May 20, 2025

ರಸಗೊಬ್ಬರ ಕೊರತೆ ಉಂಟಾಗದಂತೆ ಕ್ರಮ ವಹಿಸಿ- ಡಿ.ಸಿ. ವೆಂಕಟೇಶ್ ಸೂಚನೆ

March 25, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.