Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಕಡಿಮೆ ಖರ್ಚಿನಲ್ಲಿ ತಡೆಗೋಡೆ ನಿರ್ಮಿಸಿ 90 ಡಿಗ್ರಿಯಲ್ಲಿ ಗುಡ್ಡ ಕಡಿದಿರುವುದಕ್ಕೆ ಸಿಎಂ‌ ಆಕ್ರೋಶ ಕೇಂದ್ರ ಸಚಿವ ಗಡ್ಕರಿಗೆ ಪತ್ರ ಬರೆಯಲು ತೀರ್ಮಾನ: ಸಿಎಂ ಸಿದ್ದರಾಮಯ್ಯ
ರಾಜ್ಯ

ಕಡಿಮೆ ಖರ್ಚಿನಲ್ಲಿ ತಡೆಗೋಡೆ ನಿರ್ಮಿಸಿ 90 ಡಿಗ್ರಿಯಲ್ಲಿ ಗುಡ್ಡ ಕಡಿದಿರುವುದಕ್ಕೆ ಸಿಎಂ‌ ಆಕ್ರೋಶ ಕೇಂದ್ರ ಸಚಿವ ಗಡ್ಕರಿಗೆ ಪತ್ರ ಬರೆಯಲು ತೀರ್ಮಾನ: ಸಿಎಂ ಸಿದ್ದರಾಮಯ್ಯ

D KumaraswamyBy D KumaraswamyAugust 4, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಶಿರಾಡ್ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಸಿಎಂ‌ ಶಾಕ್

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಗೆ ಸಿಎಂ ಪ್ರಶ್ನೆಗಳ ಸುರಿಮಳೆ

ಖರ್ಚು ಕಡಿಮೆ ಮಾಡಲು ತಡೆಗೋಡೆ ನಿರ್ಮಿಸದ್ದಕ್ಕೆ, 90 ಡಿಗ್ರಿಯಲ್ಲಿ ಗುಡ್ಡ ಕಡಿದಿರುವುದಕ್ಕೆ ಸಿಎಂ‌ ಆಕ್ರೋಶ

ಕೇಂದ್ರ ಸಚಿವ ಗಡ್ಕರಿಗೆ ಪತ್ರ ಬರೆದು ವಿವರಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ

ಶಿರಾಡಿ ಘಾಟ್ : ಶಿರಾಡ್ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದರು.

ಗುಡ್ಡ ಕುಸಿತದ ಸ್ಥಳ ಪರಿಶೀಲನೆಗೆ ಅಧಿಕಾರಿಗಳ ತಂಡದೊಂದಿಗೆ ರಸ್ತೆ ಮಾರ್ಗವಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದಕ್ಕೆ ಅಸಮಾಧಾನಗೊಂಡು ಗುಡ್ಡ ಕುಸಿತಕ್ಕೆ ಇದೂ ಕೂಡ ಪ್ರಮುಖ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಸ್ತೆ ಕಾಮಗಾರಿ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಿಎಂ ಗೆ ವಿವರಿಸುತ್ತಾ, “ಒಟ್ಟು 45 km ನಲ್ಲಿ 35 km ಹೈವೇ ಕಾಮಗಾರಿ ಮುಗಿದಿದೆ. 10 km ಬಾಕಿ ಇದೆ. ಆದರೆ ಇಲ್ಲಿಯವರೆಗೂ ಎಲ್ಲೂ ತಡೆಗೋಡೆಗಳನ್ಜು ನಿರ್ಮಿಸಿಲ್ಲ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಂತೆ ಇಲ್ಲ” ಎಂದು ವಿವರಿಸಿದರು.

 

 

ಮೊಣಕಾಲುದ್ದುದ ಕೆಸರಲ್ಲೇ ಗುಡ್ಡ ಕುಸಿತದ ಜಾಗದುದ್ದಕ್ಕೂ ನಡೆದು ಪರಿಶೀಲಿಸಿದ ಮುಖ್ಯಮಂತ್ರಿಗಳು ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ SDRF ತಂಡದೊಂದಿಗೆ ಕೆಲ ಹೊತ್ತು ಚರ್ಚಿಸಿದರು.

ಬಳಿಕ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ‌ ಅಧಿಕಾರಿ ವಿಲಾಸ್ ಅವರ ಮುಂದೆ ಸಿಎಂ ಸಾಲು ಸಾಲು ಪ್ರಶ್ನೆಗಳನ್ನು ಇಟ್ಟರು…

*ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಗೊಳಿಸಿಕೊಳ್ಳುವುದು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಿದ್ದೀರಿ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ?

*ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತಲ್ಲವೇ?

*ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದೀರಾ? ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ಏಕೆ ವಹಿಸಿಲ್ಲ ಎಂದು ಪ್ರಶ್ನಿಸಿದರು.

ವಿಲಾಸ್ ಅವರಿಂದ ಸೂಕ್ತ ಉತ್ತರ ಬರದಿದ್ದಾಗ ಒಟ್ಟಾರೆ ಸ್ಥಿತಿ ಗತಿ ಕುರಿತು ಕೇಂದ್ರ ಸಚಿವರಾದ ಗಡ್ಕರಿ ಅವರಿಗೆ ಪತ್ರ ಬರೆಯುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.

ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಶಾಸಕ ಶಿವಲಿಂಗೇಗೌಡರು, ಸಂಸದ ಶ್ರೇಯಸ್ ಪಟೇಲ್ , ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯಬಾರಾಯಣ್ ಸೇರಿ ಹಿರಿಯ ಅಧಿಕಾರಿಗಳ ತಂಡವೇ ಸ್ಥಳದಲ್ಲಿತ್ತು.

Share. Facebook Twitter Pinterest LinkedIn Tumblr WhatsApp Email
Previous Articleಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ: ಸಿ.ಎಂ.ಸಿದ್ದರಾಮಯ್ಯ
Next Article ಸಿದ್ದರಾಮಯ್ಯ ಬೆಂಬಲಿಸಿ ವಿವಿಧ ಒಕ್ಕೂಟಗಳಿಂದ ಚಿತ್ರದುರ್ಗದಲ್ಲಿ ಬೈಕ್ ರ್ಯಾಲಿ
D Kumaraswamy
  • Tumblr

Related Posts

ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

January 31, 2026

ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

January 30, 2026

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.