Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಪತ್ರಿಕೋದ್ಯಮ ಮತ್ತು ಸಂವಿಧಾನದ ಆಶಯಗಳ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಸದಾ ಸಿದ್ದ
ರಾಜ್ಯ

ಪತ್ರಿಕೋದ್ಯಮ ಮತ್ತು ಸಂವಿಧಾನದ ಆಶಯಗಳ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಸದಾ ಸಿದ್ದ

D KumaraswamyBy D KumaraswamyJuly 16, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಪತ್ರಿಕೋದ್ಯಮ ಮತ್ತು ಸಂವಿಧಾನದ ಆಶಯಗಳ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಅವರು ಸದಾ ಸಿದ್ದ: ಕೆ.ವಿ.ಪ್ರಭಾಕರ್ 

ಸಂವಿಧಾನದ ಆಶಯಗಳು ಮತ್ತು ಪತ್ರಿಕೋದ್ಯಮದ ಆಶಯಗಳು ಒಂದೇ ಆಗಿವೆ. ಹಾಗೆಯೇ ಸಂವಿಧಾನದ ಮತ್ತು ಪತ್ರಿಕೋದ್ಯಮದ ಆಶಯಗಳೇ ಸಿದ್ದರಾಮಯ್ಯ ಅವರ ಆಶಯಗಳಾಗಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು.

ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಮಾಧ್ಯಮ ದಿನಾಚರಣೆಯಲ್ಲಿ ಪ್ರಧಾನ ಉಪನ್ಯಾಸ ನೀಡಿ ಅವರು ಮಾತನಾಡಿದರು.

 

 

ಸಂವಿಧಾನದ ಆಶಯಗಳಿಗೆ ಧಕ್ಕೆ ಬಂದಾಗಲೆಲ್ಲಾ ಪತ್ರಕರ್ತರು ಅದರ ರಕ್ಷಣೆಗೆ ನಿಲ್ಲುತ್ತಾರೆ. ಹಾಗೆಯೇ ಸಂವಿಧಾನಕ್ಕೆ ಧಕ್ಕೆ ಬಂದಾಗಲೆಲ್ಲಾ ಸಿದ್ದರಾಮಯ್ಯ ಅವರೂ ಸೆಟೆದು ನಿಲ್ಲುತ್ತಾರೆ. ಹೀಗಾಗಿ ಪತ್ರಕೋದ್ಯಮ ಮತ್ತು ಸಂವಿಧಾನದ ಆಶಯಗಳೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶಯಗಳೂ ಆಗಿವೆ. ಪತ್ರಿಕೋದ್ಯಮದ ಸ್ವಾತಂತ್ರ್ಯ ರಕ್ಷಿಸಲು ಮತ್ತು ಪತ್ರಕರ್ತರ ಯೋಗಕ್ಷೇಮಕ್ಕೆ ಮುಖ್ಯಮಂತ್ರಿಗಳು ಸದಾ ಸಿದ್ದರಿರುತ್ತಾರೆ ಎಂದು ವಿವರಿಸಿದರು.

ನೈಜ ಪತ್ರಕರ್ತರು ಸಮಾಜವನ್ನೇ ತಮ್ಮ ಕುಟುಂಬದಂತೆ ಭಾವಿಸುತ್ತಾರೆ. ಹೀಗಾಗಿ ಸಮಾಜ ಪತ್ರಕರ್ತ ಸಮೂಹದ ಪರವಾಗಿ ಇರಬೇಕು. ಜಿಲ್ಲಾ ಮತ್ತು ತಾಲ್ಲೂಕು , ಗ್ರಾಮೀಣ ಮಟ್ಟದಲ್ಲಿ ಪತ್ರಕರ್ತ ಸಮೂಹ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರದ ನೆರವು ಒದಗಿಸಿಕೊಡಲು ಶ್ರಮಿಸುತ್ತೇನೆ. ರಾಜ್ಯ ಬಹಳ ಆರ್ಥಿಕ ಸಂಕಷ್ಟದಲ್ಲಿದ್ದಾಗಲೂ ಪತ್ರಕರ್ತರ ಮಾಸಾಶನ ಮತ್ತಿತರ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಈ ಬಜೆಟ್ ನಲ್ಲಿ ಈಡೇರಿಸಿದ್ದಾರೆ. ಮುಂದಿನ ಬಜೆಟ್ ಗಳಲ್ಲಿ ಇನ್ನಷ್ಟು ನೆರವು ನಮ್ಮ ಸಮೂಹಕ್ಕೆ ಒದಗಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.

ಸಹಕಾರ ಸಚಿವ ಕೆ.ಎನ್.ರಾಜಣ್ಣ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಏಷ್ಯಾ ಪತ್ರಕರ್ತರ ಒಕ್ಕೂಟದ ಸಂಚಾಲಕರೂ, ಜನಮಿತ್ರ ಪತ್ರಿಕೆಯ ಸಂಪಾದಕರೂ ಆದ ಮದನ್ ಗೌಡರು ಪ್ರಾಸ್ತಾವಿಕ ಮಾತನಾಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ತಮ್ಮ ಆಶಯ ನುಡಿಗಳಲ್ಲಿ ಕೆ.ವಿ.ಪ್ರಭಾಕರ್ ಅವರು ಪತ್ರಕರ್ತ ಸಮೂಹಕ್ಕೆ ಅಗತ್ಯ ನೆರವು ದೊರಕಿಸಿಕೊಡಿಸಲು ಶ್ರಮಿಸುತ್ತಿರುವುದನ್ನು ವಿವರಿಸಿ ಮೆಚ್ಚುಗೆ ಸೂಚಿಸಿದರು.

ಶಾಸಕ ಶಿವಲಿಂಗೇಗೌಡರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು, ಪತ್ರಕರ್ತರ ಸಂಘದ ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು: ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದ ಸಿಎಂ
Next Article ಜನರ ಕೈಗೆ ದುಡ್ಡು ನೀಡಲು ನಮ್ಮ ಸರ್ಕಾರ ಪಂಚ ಗ್ಯಾರಂಟಿ : ಮುಖ್ಯಮಂತ್ರಿ ಸಿದ್ದರಾಮಯ್ಯ
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.