ಮುಖ್ಯ ಮಂತ್ರಿಗಳಾಗಿ ಪ್ರಮಾಣ ವಚನ ಪಡೆದ ನೂತನ ಸಿಎಂ ಸಿದ್ದರಾಮಯ್ಯ ಅವರು ಇಂದೇ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ನೂತನ ಸಿಎಂ ಸಿದ್ದರಾಮಯ್ಯ ಹೇಳಿದರು.
ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದರು
ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಈ ಎಲ್ಲಾ ಗ್ಯಾರಂಟಿಗಳನ್ನು ಜಾರಿ ತರುತ್ತೇವೆ. ಸಭೆಯಲ್ಲಿ ಅನುಮತಿ ಪಡೆಯುತ್ತೇವೆ ಎಂದು ನಾಡಿನ ಏಳು ಕೋಟಿ ಕನ್ನಡಿಗರಿಗೆ ವಾಗ್ದಾನ ನೀಡಿದರು. ನಾವು ಜನಪರವಾದ ಆಡಳಿತವನ್ನು ನೀಡುತ್ತೇವೆ. ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಜಾರಿಗೆ ತರುತ್ತೇವೆ ಎಂದು ಹೇಳಿದರು.