ಒಳಮೀಸಲಾತಿ ಜಾರಿಗಾಗಿ ಹೆಚ್ ಎನ್ ನಾಗಮೋಹನ್ ದಾಸ್ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ಸಿಎಂ ಸಿದ್ದರಾಮಯ್ಯ ರಚಿಸಿದ್ದು, ನಿಗಧಿತ ಅವಧಿಯೊಳಗೆ ವರದಿನೀಡುವಂತೆ ಸೂಚಿಸಿದ್ದಾರೆ. ಇದರಿಂದ ಇದೇ 13 ರಂದು ಬೆಂಗಳೂರಿನ ವಸಂತ ನಗರದ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಮಾದಿಗ ಸಮುದಾಯ ಹಾಗೂ ಸಂಬಂಧಿತ ಜಾತಿಗಳ ಸಮನ್ವಯ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಗೆ ಆಗಮಿಸಿ ಮಾಹಿತಿಯನ್ನು ನೀಡುವಂತೆ ಮಾಜಿ ಸಚಿವ ಹೆಚ್ ಆಂಜನೇಯ ಹಾಗೂ ಕರ್ನಾಟಕ ಮಾದಿಗ ಒಳ ಮೀಸಲಾತಿ ಹೋರಾಟ ಸಮಿತಿ ಕರೆ ನೀಡಿದ್ದಾರೆ.





