ಪ್ರಾಧಿಕಾರ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ಮುಖಂಡನ ರಾಜೀನಾಮೆ

ಜಿಲ್ಲಾ ಸುದ್ದಿ

ಗ್ಯಾರಂಟಿ ಯೋಜನೆಗಳ ಚಿತ್ರದುರ್ಗ ಜಿಲ್ಲೆಯ ಅನುಷ್ಠಾನ ಪ್ರಾಧಿಕಾರದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್ ತಿಳಿಸಿದ್ದಾರೆ.

 

 

 

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಪಂಚ ಗ್ಯಾರಂಟಿ ಭರವಸೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಫಲಾನುಭವಿಗಳಿಗೆ ಯಾವುದೇ ತೊಂದರೆಯಾ ಗದಂತೆ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟಗಳಿಗೆ ಮೇಲ್ವಿಚಾರಣೆ ನಡೆಸಲು ಪ್ರಾಧಿಕಾರಿಗಳನ್ನು ರಚಿಸಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ಸ್ಥಾನಕ್ಕೆ ನೇಮಕಾತಿಗಳನ್ನು ಮಾಡಿರುವುದು ಸ್ವಾಗತಾರ್ಹ ಮತ್ತು ಅಭಿನಂದನಾರ್ಹ.

ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆ, ಪ್ರಾಮಾಣಿಕತೆಯಿಂದ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿರುತ್ತೇನೆ. ಪ್ರಸ್ತುತ ಈಗಿನ ಸರ್ಕಾರದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಮೇಲ್ವಿಚಾರಣಾ ಪ್ರಾಧಿಕಾರದ ಜಿಲ್ಲಾ ಮಟ್ಟದ ಸದಸ್ಯರನ್ನಾಗಿ ನೇಮಕಾತಿ ಮಾಡಿ ಆದೇಶ ಹೊರಡಿಸಲಾಗಿದೆ. ನಾವು ಈಗಾಗಲೇ ಸರ್ಕಾರದ ಸೇವೆಯಲ್ಲಿ ಭಾಗಿದಾರರಾಗಿರುವುದರಿಂದ ಸಮಿತಿಯ ಹೊರಗಿನಿಂದಲೇ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನವನ್ನು ನಾವು ಗಮನಿಸುತ್ತಿದ್ದು, ಫಲಾನುಭವಿಗಳಿಗೆ ಸೌಲಭ್ಯಗಳು ದೊರಕದೆ ಇದ್ದ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಸಣ್ಣಪುಟ್ಟ ಲೋಪದೋಷಗಳನ್ನು ಸರಿಪಡಿಸಿ ಕೊಡಲು ಪ್ರಾಮಾಣಿಕವಾಗಿ ಪ್ರಯತ್ನಗಳನ್ನು ಮಾಡುತ್ತಿರುವುದಿಂದ ಸದರಿ ಸದಸ್ಯ ಸ್ಥಾನವನ್ನು ಪಕ್ಷದ ಇನ್ನೊಬ್ಬ ಕಾರ್ಯಕರ್ತರಿಗೆ ಸೇವೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಸರ್ಕಾರದ ಆದೇಶದ ಪ್ರಕಾರ ನನ್ನ ನೇಮಕಾತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತಿದ್ದೇನೆ. ಕೂಡಲೇ ನನ್ನ ರಾಜೀನಾಮೆಯನ್ನು ಸಕ್ಷಮ ಪ್ರಾಧಿಕಾರಿಗಳಾದ ತಾವುಗಳು ಅಂಗೀಕರಿಸಿ ಇನ್ನೊಬ್ಬ ಕಾರ್ಯಕರ್ತನಿಗೆ ನೇಮಕ ಮಾಡಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಡಿಸಿಸಿ ಅಧ್ಯಕ್ಷರಲ್ಲಿ ಕೆ.ಪಿ.ಸಂಪತ್‍ಕುಮಾರ್ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *