ಸಂವಿಧಾನ ಉಳಿವಿಗಾಗಿ ನಡೆಯುತ್ತಿರುವ ‌ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿ

ರಾಜ್ಯ

2024ರ ಚಿತ್ರದುರ್ಗ ಲೋಕಸಭಾ ಚುನಾವಣೆ ಪ್ರಯುಕ್ತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಕಾರ್ಯದರ್ಶಿಗಳು ಹಾಗೂ ರಾಜ್ಯ ವಕ್ಫ್ ಪರಿಷತ್ ಸದಸ್ಯ ಅಬ್ದುಲ್ ಘನೀ ತಾಹಿರ್ ನೇತೃತ್ವದಲ್ಲಿ ಅಲ್ಪಸಂಖ್ಯಾತ ವಿಭಾಗದ ಸಭೆ ನಡೆಸಲಾಯಿತು.
ಸಭೆಯಲ್ಲಿ ಮಾತಾಡಿದ, ಅಬ್ದುಲ್ ಘನೀ ತಾಹಿರ್ ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳು ತಮ್ಮ ವಾರ್ಡ್ ಮತ್ತು ಹಳ್ಳಿಯಲ್ಲಿ ಅತಿ ಹೆಚ್ಚು ಮತಗಳನ್ನು ಹಾಕಿಸುವ ಜವಾಬ್ದಾರಿ ತಮ್ಮ ಮೇಲಿದೆ. ಎಲ್ಲಾ ಅಲ್ಪಸಂಖ್ಯಾತ ಮತದಾರರನ್ನು ಭೇಟಿ ಮಾಡಿ,ಎಲ್ಲರೂ ತಪ್ಪದೇ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಬೇಕು. ಎಲ್ಲರೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿ, ನಮ್ಮ ಅಭ್ಯರ್ಥಿ ಗೆಲ್ಲಿಸುವಲ್ಲಿ ನಿರಂತರವಾಗಿ ಶ್ರಮಿಸಬೇಕು. ಈ ಚುನಾವಣೆ ನಮ್ಮ ದೇಶದ ಬಡವರ ರಕ್ಷಣೆ ಮತ್ತು ಸಂವಿಧಾನದ ಉಳಿಗಾಗಿ ನಡೆಯುತ್ತಿರುವ ಚುನಾವಣೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಹಲವು ಗ್ಯಾರಂಟಿ ನೀಡುವುದಾಗಿ ಪ್ರಕಟಿಸಿದೆ. ಆದ್ದರಿಂದ ತಾವುಗಳು ಮನೆಮನೆಗೆ ಗ್ಯಾರಂಟಿಗಳ ಬಗ್ಗೆ ಜಾಗೃತಿ ಮೂಡಿಸಿ, ಹೆಚ್ಚಿನ ಮತ ಪಡೆಯಲು ಶ್ರಮಿಸಬೇಕು ಎಂದರು.
ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಖುದ್ದುಸ್, ಮಾತಾಡಿ ಮುಂಬರುವ ಲೋಕಸಭಾ ಚುನಾವಣೆ ಚಿತ್ರದುರ್ಗದ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಪರವಾಗಿ ಮತಯಾಚಿಸಲು ಇದೇ ತಿಂಗಳ ದಿನಾಂಕ 15 ರ ಸೋಮವಾರ ಸಂಜೆ ನಾಲ್ಕು ಗಂಟೆಗೆ ಚಿತ್ರದುರ್ಗ ನಗರದ ಉಮಾಪತಿ ಕಲ್ಯಾಣ ಮಂಟಪಕ್ಕೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ವಸತಿ ಸಚಿವರಾದ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಆಗಮಿಸುತ್ತಿದ್ದು, ನಮ್ಮ ಅಲ್ಪಸಂಖ್ಯಾತ ವಿಭಾಗದ ಎಲ್ಲಾ ಪದಾಧಿಕಾರಿಗಳು ಮುಖಂಡರು ಎಲ್ಲರೂ ಅತಿ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.ಚಿತ್ರದುರ್ಗ ನಗರ ಅಧ್ಯಕ್ಷ ಡಾ. ರಾಮತುಲ್ಲಾ, ಶಿಕ್ಷಕರ ಮತ್ತು ಪದವೀಧರರ ವಿಭಾಗದ ಜಿಲ್ಲಾಧ್ಯಕ್ಷ ಮುದಾಸಿರ್ ನವಾಜ್, ಉಬೆದುಲ್ಲಾ, ಚಾಂದ್ ಪೀರ್, ರಹಮತ್, ಅಕ್ಬರ್ ಭಾಷಾ, ರಾಜು ಕೀಮ್ಚಂದ್ ಜೈನ್, ಅರುಣ್ ಫ್ರಾನ್ಸಿಸ್ ಡಿಸೋಜಾ, ಕಮ್ಮು, ಶರೀಫ್, ಜಬಿ ಉಲ್ಲಾ, ನಿಜಾಮ್ ಮತ್ತಿತರರು ಉಪಸ್ಥಿತರಿದ್ದರು.

 

 

 

 

 

Leave a Reply

Your email address will not be published. Required fields are marked *