Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಡಾ. ತಿಪ್ಪೇಸ್ವಾಮಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ದಲಿತ ಸಂಘಟನೆಗಳ ಒಮ್ಮತದ ಬೆಂಬಲ
ಜಿಲ್ಲಾ ಸುದ್ದಿ

ಡಾ. ತಿಪ್ಪೇಸ್ವಾಮಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ದಲಿತ ಸಂಘಟನೆಗಳ ಒಮ್ಮತದ ಬೆಂಬಲ

D KumaraswamyBy D KumaraswamyNovember 8, 2023Updated:November 8, 2023No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಹೊರ ಜಿಲ್ಲೆಯವರನ್ನು ಇಲ್ಲಿಗೆ ಕರೆ ತಂದು ಟಿಕೆಟ್ ಕೊಟ್ಟು ಗೆಲ್ಲಿಸುವ ಬದಲು ಸ್ಥಳೀಯ ಮುಖಂಡ ಕಾಂಗ್ರೆಸ್‍ನ ಜೆ.ಜೆ.ಹಟ್ಟಿಯ ಡಾ.ಬಿ.ತಿಪ್ಪೇಸ್ವಾಮಿಗೆ ಟಿಕೆಟ್ ನೀಡಿ ಗೆಲ್ಲಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾಂಗ್ರೆಸ್‍ಗೆ ಬುದ್ದಿ ಕಲಿಸಬೇಕಾಗುತ್ತದೆಂದು ಮಾದಿನ ಜನಾಂಗ ಹಾಗೂ ವಿವಿದ ದಲಿತಪರ ಸಂಘಟನೆಗಳು ಪ್ರವಾಸಿ ಮಂದಿರದಲ್ಲಿ ಬುಧವಾರ ಸಭೆ ನಡೆಸಿ ತೀರ್ಮಾನ ಕೈಗೊಂಡರು.
ನಗರಸಭೆ ಮಾಜಿ ಉಪಾಧ್ಯಕ್ಷ ದಲಿತ ಮುಖಂಡ ದುರುಗೇಶಪ್ಪ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ಎಲ್ಲಾ ರಾಷ್ಟ್ರೀಯ ಪಕ್ಷಗಳು ಜಿಲ್ಲೆಯ ಮತದಾರರನ್ನು ಜೀತದಾಳುಗಳನ್ನಾಗಿ ಮಾಡಿಕೊಂಡು ಹೊರಗಿನ ಹಣವಂತರನ್ನು ಹುಡುಕಿ ತಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಟಿಕೇಟ್ ನೀಡಿ ಗೆಲ್ಲಿಸಿಕೊಳ್ಳುತ್ತಿವೆ. ಇನ್ನಾದರೂ ಮಾದಿಗರು ಎಚ್ಚೆತ್ತುಕೊಂಡು ಕಾಂಗ್ರೆಸ್ ನಾಯಕರುಗಳಿಗೆ ಬುದ್ದಿ ಕಲಿಸದಿದ್ದರೆ ಸ್ಥಳೀಯರು ಲೋಕಸಭೆ ಆಯ್ಕೆಯಾಗುವುದು ಕನಸಿನ ಮಾತಾಗುತ್ತದೆ ಎಂದು ಜಾಗೃತಿಗೊಳಿಸಿದರು.
ಪ್ರೊ.ಬಿ.ಕೃಷ್ಣಪ್ಪನವರ ಮಾರ್ಗದರ್ಶನ, ಅವರ ಹೆಜ್ಜೆ ಗುರುತಿನಲ್ಲಿ ಮಾದಿಗರು ಕೆಲಸ ಮಾಡಬೇಕಾಗಿದೆ. ಜನಾಂಗದ ವಿಚಾರ ಬಂದಾಗ ದಲಿತರೆಲ್ಲಾ ಒಂದಾಗಿ ರಾಷ್ಟ್ರೀಯ ಪಕ್ಷಗಳಿಗೆ ಶಕ್ತಿ ಪ್ರದರ್ಶಿಸಬೇಕು. ಸ್ಥಳೀಯ ಮುಖಂಡ ಡಾ.ಬಿ.ತಿಪ್ಪೇಸ್ವಾಮಿಗೆ ಪಾರ್ಲಿಮೆಂಟ್ ಚುನಾವಣೆಯಲ್ಲಿ ಸ್ಪರ್ಧಿಸಲು ನಾಯಕರುಗಳು ಟಿಕೇಟ್ ನೀಡದಿದ್ದರೆ ಕಾಂಗ್ರೆಸ್‍ಗೆ ಬುದ್ದಿ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲೆಯಾದ್ಯಂತ ಪ್ರತಿ ತಾಲ್ಲೂಕಿನಲ್ಲಿ ಎರಡರಿಂದ ಮೂರು ಸಾವಿರ ಜನ ಗುಂಪುಕಟ್ಟಿಕೊಂಡು ಡಾ.ಬಿ.ತಿಪ್ಪೇಸ್ವಾಮಿಗೆ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸುವುದಾಗಿ ದೃಢ ನಿರ್ಧಾರ ಕೈಗೊಳ್ಳುವಂತೆ ಮಾದಿಗ ಜನಾಂಗದವರಲ್ಲಿ ಮನವಿ ಮಾಡಿದರು.
ಭಾರತೀಯ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಡಾ.ಬಿ.ಪ್ರಕಾಶ್‍ಬೀರಾವರ ಮಾತನಾಡಿ ಸ್ಥಳೀಯ ಮುಖಂಡ ಡಾ.ಬಿ.ತಿಪ್ಪೇಸ್ವಾಮಿಯನ್ನು ಕಾಂಗ್ರೆಸ್ ನಾಯಕರುಗಳು ಕಡೆಗಣಿಸುತ್ತಿರುವುದರಿಂದ ಪ್ರತಿ ಪಾರ್ಲಿಮೆಂಟ್ ಚುನಾವಣೆಯಲ್ಲಿ ಹೊರ ಜಿಲ್ಲೆಯವರು ಇಲ್ಲಿಗೆ ಬಂದು ಗೆದ್ದು ಸಂಸತ್‍ಗೆ ಹೋಗುತ್ತಿದ್ದಾರೆ. ಹಾಗಾಗಿ ಹೊರಗಿನವರಿಗೆ ಪಕ್ಷ ಮಣೆ ಹಾಕಬಾರದು. ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ದಲಿತರು ಕಾಂಗ್ರೆಸ್‍ಗೆ ಮತ ನೀಡುತ್ತಾ ಬರುತ್ತಿದ್ದರೂ ಜೀತದಾಳುಗಳಂತೆ ನೋಡುತ್ತಿದೆ. ಈಗಲಾದರು ದಲಿತರು ಎಚ್ಚೆತ್ತುಕೊಂಡು ಡಾ.ಬಿ.ತಿಪ್ಪೇಸ್ವಾಮಿಗೆ ಬೆಂಬಲಿಸಿ ಗೆಲ್ಲಿಸುವ ಮೂಲಕ ಪಾರ್ಲಿಮೆಂಟ್‍ಗೆ ಕಳಿಸಬೇಕೆಂದು ವಿನಂತಿಸಿದರು.
ಮಾದಿಗ ಮುಖಂಡ ಸಿ.ತಿಪ್ಪೇಸ್ವಾಮಿ ಮಾತನಾಡುತ್ತ ಚಿತ್ರದುರ್ಗ ಜಿಲ್ಲೆಯಲ್ಲಿ ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತರ ಮತಗಳೆ ನಿರ್ಣಾಯಕ ಎನ್ನುವುದನ್ನು ಕಾಂಗ್ರೆಸ್ ಮರೆತಂತಿದೆ. ಡಾ.ಬಿ.ತಿಪ್ಪೇಸ್ವಾಮಿಗೆ ಟಿಕೆಟ್ ಕೊಡಿಸುವ ಕೆಲಸವಾಗಬೇಕಾಗಿರುವುದರಿಂದ ದಲಿತರೆಲ್ಲಾ ಸೇರಿ ಒಗ್ಗಟ್ಟು ಪ್ರದರ್ಶಿಸೋಣ ಎಂದು ಹೇಳಿದರು.
ಮಾದಿಗ ದಂಡೋರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ಮಾತನಾಡಿ ಬಿ.ಎನ್.ಚಂದ್ರಪ್ಪ, ಈಗಿನ ಲೋಕಸಭಾ ಸದಸ್ಯ ಎ.ನಾರಾಯಣಸ್ವಾಮಿ ಇವರುಗಳಿಂದ ಜಿಲ್ಲೆಯಲ್ಲಿ ಯಾವ ಅಭಿವೃದ್ದಿಯೂ ಆಗಿಲ್ಲ. ಪ್ರತಿ ಚುನಾವಣೆಯಂತೆ ಈ ಬಾರಿಯೂ ಹೊರಗಿನವರು ನಮ್ಮ ಜಿಲ್ಲೆಗೆ ವಲಸೆ ಬಂದು ಚುನಾವಣೆಯಲ್ಲಿ ಸ್ಪರ್ಧಿಸಿ ಮಾದಿಗರಹಟ್ಟಿಗೆ ಬಂದರೆ ಘೇರಾವ್ ಮಾಡುವ ನಿರ್ಧಾರಕ್ಕೆ ಬರೋಣ ಎಂದರು.
ಅಂಬೇಡ್ಕರ್ ಸ್ವಾಭಿಮಾನಿ ಸೇನೆ ರಾಜ್ಯ ಕಾರ್ಯದರ್ಶಿ ರಾಮಚಂದ್ರ ಕೆ. ಮಾತನಾಡುತ್ತ ಇಲ್ಲಿಯವರೆಗೂ ಹೊರಗಿನವರು ನಮ್ಮ ಜಿಲ್ಲೆಯನ್ನು ಆಳುತ್ತಿದ್ದಾರೆ. ಮಾದಿಗ ಸಮಾಜ ಒಂದಾದರೆ ಮಾತ್ರ ಕಾಂಗ್ರೆಸ್‍ನಿಂದ ಟಿಕೆಟ್ ತಂದು ಡಾ.ಬಿ.ತಿಪ್ಪೇಸ್ವಾಮಿಯನ್ನು ಗೆಲ್ಲಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.
ಕುಂಚಿಗನಹಾಳ್ ಮಹಲಿಂಗಪ್ಪ, ಮಹಂತೇಶ್, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾಧ್ಯಕ್ಷ ಗಣೇಶ್, ಚೌಳೂರು ಪ್ರಕಾಶ್ ಇನ್ನು ಅನೇಕರು ಮಾತನಾಡಿ ಡಾ.ಬಿ.ತಿಪ್ಪೇಸ್ವಾಮಿಗೆ ಬೆಂಬಲಿಸುವುದಾಗಿ ನುಡಿದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಮುರುಘಾ ಶರಣರಿಗೆ ಜಾಮೀನು ಮಂಜೂರು ಮಾಡಿದ ಹೈ ಕೋರ್ಟ್
Next Article ತೆಲಂಗಾಣದ ಜನತೆ ಮೋದಿಯವರ ಮಕ್ಮಲ್ ಟೋಪಿಗೆ ತಲೆ ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.