ಪ್ರವೀಣ್ ಹತ್ಯೆಯ ಬೆನ್ನಲ್ಲೆ ನಿನ್ನೆ ಮಂಗಳೂರಿನ ಹೊರ ವಲಯದಲ್ಲಿ ಫಾಜಿಲ್ ಎಂಬ ಯುವಕನ ಕೊಲೆಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಪರಾರಿಯಾಗಿದ್ದರು, ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ನಾಲ್ಕು ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಿರುವ ಜಿಲ್ಲಾಡಳಿತ ಸುರತ್ಕಲ್ ,ಬಜ್ಬೆ, ಮುಲ್ಕಿ ಪಣಂಬೂರು ಠಾಣಾ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆಯನ್ನು ಮಂಗಳೂರು ನಗರದ ಕಮಿಷನರ್ ಘೋಷಿಸಿದ್ದಾರೆ. ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ





