ಆಗಸ್ಟ್ ಅಂತ್ಯದೊಳಗೆ 15 ಸಾವಿರ ಶಿಕ್ಷಕರ ನೇಮಕಾತಿ

ರಾಜ್ಯ

 

BREAKING NEWS

ಆಗಸ್ಟ್ ಅಂತ್ಯದೊಳಗೆ 15 ಸಾವಿರ ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ; ಶಿಕ್ಷಣ ಸಚಿವ ಬಿ‌ಸಿ ನಾಗೇಶ್

 

 

 

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ನೇಮಕ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ ಅಂತ್ಯದೊಳಗೆ ನೀಡುವ ಗುರಿ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.


ಅಕ್ಟೋಬರ್ ಅಂತ್ಯದೊಳಗೆ ನೇಮಕ ಪ್ರಕ್ರಿಯೆಯ ಪಟ್ಟಿಯನ್ನು ಬಿಡುಗಡೆ ಮಾಡುವ ಗುರಿ ಇದೆ ಎಂದು ತಿಳಿಸಿದ್ದಾರೆ.
ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲಾಗುತ್ತದೆ. ಆದರೆ ಈ ವರ್ಷ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿರುವುದರಿಂದ ಬರುವ ನವೆಂಬರ್ 6 ರಂದು ಒಂದೇ ಟಿಇಟಿ ನಡೆಸಲಾಗುವುದು ಎಂದರು.

ಅತಿಥಿ ಉಪನ್ಯಾಸಕರಿಗು ಶುಭ ಸುದ್ದಿ: ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು 3,000 ರೂ. ಹೆಚ್ಚಳ‌ ಮಾಡಲಾಗಿದೆ. ಅತಿಥಿ ಶಿಕ್ಷಕರ ಗೌರವ ಸಂಭಾವನೆ 2,500 ರೂ. ಹೆಚ್ಚಳ ಮಾಡಲಾಗಿದೆ. ಅಕ್ಷರ ದಾಸೋಹ ಬಿಸಿಯೂಟ ನೌಕರರ ಗೌರವ ಸಂಭಾವನೆಯನ್ನು 1 ಸಾವಿರ ರೂ. ಹೆಚ್ಚಳ ಮಾಡಲಾಗಿದೆ. 2022-23ನೇ ಸಾಲಿನಲ್ಲಿ 32,159 ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲಾಗುತ್ತಿದೆ. 2022-23ನೇ ಸಾಲಿನಲ್ಲಿ ಪಿಯು ಕಾಲೇಜುಗಳಿಗೆ 3,708 ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *