ಮುರುಘಾ ಮಠಕ್ಕೆ ಆಡಳಿತಾಧಿಕಾರಿ ವಿಚಾರ: ಸರ್ಕಾರಕ್ಕೆ ಸೆಡ್ಡು ಹೊಡೆದ ಮಠಾಧೀಶರು

ರಾಜ್ಯ

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ: ಸರ್ಕಾರಕ್ಕೆ ಸೆಡ್ಡು ಹೊಡೆದ ಮಠಾಧೀಶರು

 

 

 

ನಗರದ ಹೊರವಲಯದಲ್ಲಿರುವ ಮುರುಘಾ ಮಠದ ಶ್ರೀಗಳು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದು, ಈ ಹಿನ್ನೆಲೆಯಲ್ಲಿ ಮಠದ ವ್ಯವಹಾರ ನೋಡಿಕೊಳ್ಳಲು ಸರ್ಕಾರ ಆಡಳಿತಾಧಿಕಾರಿಯನ್ನು ನೇಮಕ ಮಾಡಿದೆ. ಸರ್ಕಾರದ ಆದೇಶವನ್ನು ವಿರೋಧಿಸಿ ಸುಮಾರು 15 ಕ್ಕೂ ಹೆಚ್ಚು ವಿವಿಧ ಮಠಾಧೀಶರು, ಮಠದ ಪ್ರಭಾರ ಪೀಠಾಧ್ಯಕ್ಷರಾದ ಬಸವಪ್ರಭು ಶ್ರೀ ನೇತೃತ್ವದಲ್ಲಿ ಜಿಲ್ಲಾಧಿಕಾರಿ ವೃತ್ತದಲ್ಲಿ ಧರಣಿ ನಡೆಸಿದರು.

ಬಸವ ಕೇಂದ್ರದ 15 ಕ್ಕೂ ಹೆಚ್ಚು ಮಠಾಧೀಶರು ಧರಣಿಯಲ್ಲಿ ಭಾಗವಹಿಸಿದ್ದು, ಕೂಡಲೇ ಸರ್ಕಾರ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಮುರುಘಾ ಮಠದ ಆಡಳಿತದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಿದ್ದು, ಸರಿಯಲ್ಲ, ಬೇರೆಲ್ಲಾ ಮಠಗಳಲ್ಲಿ‌ಆಡಳಿತ ಸರಿಯಿಲ್ಲದಿದ್ದರೂ ಸುಮ್ಮನಿರುವ ಸರ್ಕಾರ ಮುರುಘಾ ಮಠಕ್ಕೆ ಮಾತ್ರ ಕೈಯಾಡಿಸಿದೆ ಎಂದು ಸಿದ್ದ ಬಸವ ಕಬೀರ ಸ್ವಾಮೀಜಿ‌ ಆಕ್ರೋಶ ವ್ಯಕ್ತಪಡಿಸಿದರು. ಲಿಂಗಾಯಿತ ಮುಖ್ಯ ಮಂತ್ರಿ‌ ಇದ್ದಾಗಲೇ ಇಂತಹ ದುಸ್ಥಿತಿ ಬಂದಿರುವುದು ವಿಪರ್ಯಾಸ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಠಕ್ಕೆ ಆಡಳಿತಾಧಿಕಾರಿ ನೇಮಿಸಿದ್ದ ಸರ್ಕಾರ : ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿಎಸ್ ವಸ್ತ್ರದ್ ಅವರನ್ನು ಮಠದ ಆಡಳಿತಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದರಿಂದ ಮಠದ ಆಡಳಿತದಲ್ಲಿ ಹಸ್ತ ಕ್ಷೇಪ‌ ಮಾಡುತ್ತಿದ್ದು, ಇದರಿಂದ ನೋವಾಗುತ್ತಿದೆ. ಪ್ರಭಾರ ಪೀಠಾಧ್ಯಕ್ಷರಾಗಿರುವ ಬಸವಪ್ರಭು ಸ್ವಾಮೀಜಿ ಅವರು ಆಡಳಿತವನ್ನು ಸುಸೂತ್ರವಾಗಿ ನಡೆಸಿಕೊಂಡು‌ಹೊಗುತ್ತಿದ್ದಾರೆ. ಆದರೂ ಇಲ್ಲಿ ಆಡಳಿತಾಧಿಕಾರಿಯನ್ನು‌ನೇಮಿಸಲಾಗಿದೆ. ಇದರಿಂದ ನಾಲ್ಕು ತಿಂಗಳಿಂದ ಆಡಳಿತಾಧಿಕಾರಿ‌ ಇಲ್ಲದಿದ್ದು, ಸರ್ಕಾರ ನೇಮಿಸುವ ಮೊದಲೇ ಮುರುಘಾ ಶರಣರು ಕೂಡ ನಿವೃತ್ತ ನ್ಯಾಯಮೂರ್ತಿ ವಸ್ತ್ರಮಠ್ ಅವರನ್ನು ಆಡಳಿತಾಧಿಕಾರಿಯನ್ನಾಗಿ‌ನೇಮಿಸಿದ್ದರು. ಇದೀಗ ಸರ್ಕಾರವೂ ಪಿಎಸ್ ವಸ್ತ್ರಮಠದ್ ಅವರನ್ನು ನೇಮಿಸಿದೆ.ಇದಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದೂ, ಚಿತ್ರದುರ್ಗ ಶ್ರೀ ಜಗದ್ಗುರು ಮುರುಘಾರಾಜೇಂದ್ರ ಬೃಹಲ್ಮಠದ ಪೀಠಾಧಿಪತಿ ಹಾಗೂ ಎಸ್ ಜೆ ಎಂ ವಿದ್ಯಾಪೀಠದ ಅಧ್ಯಕ್ಷರು ಆಗಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರು ದಿನಾಂಕ 01-09-2022ರಿಂದ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಹೀಗಾಗಿ ಸಂಸ್ಥೆಯ ನಿರ್ವಹಣೆಯಲ್ಲಿ ಈ ಸಂಸ್ಧೆಯ ದಿನನಿತ್ಯದ ಕಾರ್ಯಚಟುವಟಿಕೆಗೆ ಹಾಗೂ ಮೇಲುಸ್ತುವಾರಿ ನಡೆಸಲು ಸಮಸ್ಯೆ ಉಂಟಾಗಿದೆ ಎಂದಿದ್ದರು.
ಈ ಹಿನ್ನಲೆಯಲ್ಲಿ ಹಾಗೂ ಸಾರ್ವಜನಿಕರ ಹಿತದೃಷ್ಠಿಯಿಂದ ಮಠದ ಚರಾ-ಸ್ಥಿರ ಆಸ್ತಿಗಳನ್ನು ಸಂರಕ್ಷಿಸುವ ಹಿತದೃಷ್ಟಿಯಿಂದ ಹಾಗೂ ಸಂಸ್ಥೆಯ ಹಣ ದುರುಪಯೋಗ ಆಗದಂತೆ ಲೆಕ್ಕಪತ್ರಗಳನ್ನು ನಿರ್ವಹಿಸುವ ಹಾಗೂ ಒಟ್ಟಾರೆ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಡೆಸುವ ಹಿತದೃಷ್ಠಿಯಿಂದ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ಈ ಕೂಡಲೋ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗೆ ಆಡಳಿತಾ ಧಿಕಾರಿಯನ್ನಾಗಿ ನೇಮಿಸಿ ಆದೇಶಿಸಿದ್ದಾರೆ. ನ್ಯಾಯಾಂಗ ಬಂಧನದಲ್ಲಿದ್ದ ಶ್ರೀಗಳು : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಶಿವಮೂರ್ತಿ ಶರಣರನ್ನು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನು ಶ್ರೀಗಳ ವಿರುದ್ಧ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಇತ್ತ ಶ್ರೀಗಳ ಪರ ವಕೀಲರು ಜಾಮೀನು ನೀಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಆ ಅರ್ಜಿಯನ್ನು ಕೋರ್ಟ್ ಪರಿಶೀಲನೆ ನಡೆಸಿ ಮುಂದೂಡಲಾಗಿದೆ. ಸದ್ಯಕ್ಕೆ ಶ್ರೀಗಳಿಗೆ ಬಿಡುಗಡೆ ಭಾಗ್ಯ ಇಲ್ಲ ಎನ್ನಲಾಗಿದೆ. ಒಟ್ಟಾರೆ ಸರ್ಕಾರಕ್ಕೆ ಸೆಡ್ಡು ಹೊಡೆದಿರುವ ಮಠಾಧೀಶರು ಜನವರಿಯಲ್ಲಿ‌ ಲಕ್ಷಾಂತರ ಭಕ್ತರನ್ನು ಸೇರಿಸಿ ಬೃಹತ್ ಪ್ರತಿಭಟನೆಯನ್ನು ಮಾಡಲಾಗುತ್ತದೆ. ಸರ್ಕಾರಕ್ಕೆ ಸರಿಯಾದ ಪಾಠ ಕಲಿಸಲಾಗುತ್ತದೆ ಎಂದು ಸ್ವಾಮೀಜಿ‌ ಹೇಳಿದರು.

Leave a Reply

Your email address will not be published. Required fields are marked *