ರಾಜ್ಯಕ್ಕೂ ಕಾಲಿಡ್ತಾ ಮಂಕಿ ಪಾಕ್ಸ್?

ಆರೋಗ್ಯ

ಮಂಕಿ ಪಾಕ್ಸ್ ಖಾಯಿಲೆ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಹೊಸ ಮಾರ್ಗ ಸೂಚಿಯನ್ನು ಪ್ರಕಟಿಸಿದ್ದು ಈ‌ ನಿಯಮಗಳ ಪಾಲನೆ ಕಡ್ಡಾಯಗೊಳಿಸಿದೆ.
ಕೇರಳದಲ್ಲಿ ಮಂಕಿ ಪಾಕ್ಸ್ ಖಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಆರೋಗ್ಯ ಇಲಾಖೆ ಖಾಯಿಲೆ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗ ಸೂಚಿಯನ್ನು ಪ್ರಕಟಿಸಿದೆ.

 

 

 


ಈ ಸಂಬಂಧ ಆರೋಗ್ಯ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು,ಕೇರಳದ ಮಂಕಿಪಾಕ್ಸ್ ಪ್ರಕರಣ ಎರಡನೇ ಪ್ರಕರಣ ಖಚಿತ ಪಟ್ಟ ಹಿನ್ನೆಲೆಯಲ್ಲಿ ರಾಜ್ಯವು ಕಣ್ಗಾವಲು ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಹೇಳಿದೆ ರಾಜ್ಯದ ಎಲ್ಲಾ ಜಿಲ್ಲೆಗಳು ಪರಿಣಾಮಕಾರಿಯಾದ ಪೂರ್ವ ಸಿದ್ದತೆಗಳನ್ನು ತೆಗೆದುಕೊಳ್ಳಬೇಕು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಮಾರ್ಗ ಸೂಚಿಗಳ ಪ್ರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದೆ.

Leave a Reply

Your email address will not be published. Required fields are marked *