ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸದೆ ಹಾಗೆಯೇ ಇಟ್ಟುಕೊಂಡಿದ್ದ ಹಾಸಿಗೆ ಮತ್ತು ಹೊದಿಕೆಗಳನ್ನು ನೋಡಿ ಅಧಿಕಾರಿಗಳ ಮೇಲೆ ಜಿಲ್ಲಾ ಪಂಚಾಯಿತಿ ಸಿಇಓ ಎಂ ಎಸ್ ದಿವಾಕರ್ ಕೆಂಡಮಂಡಲವಾದ ಘಟನೆ ನಡೆಯಿತು.

ಚಿತ್ರದುರ್ಗ ನಗರದಲ್ಲಿ ಇರುವ ಸರ್ಕಾರಿ ಬಾಲಕರ ಹಾಸ್ಟೆಲಿಗೆ ಅವರು ಅನಿರೀಕ್ಷಿತ ಭೇಟಿ ನೀಡಿದರು. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ತಕ್ಷಣವೇ ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿಗಳನ್ನು ಕರೆಸಿ ತಾವೇ ಸ್ವತಃ ಹಾಸಿಗೆ ಮತ್ತು ಹೊದಿಕೆಗಳನ್ನು ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದರು. ಇದಕ್ಕೂ ಮುನ್ನ ಹಾಸ್ಟೆಲ್ ನಲ್ಲಿದ್ದ ಕುಂದುಕೊರತೆಗಳ ಬಗ್ಗೆ ಮಾಹಿತಿ ಪಡೆದು ಅಡುಗೆ ಸಾಮಗ್ರಿಗಳು ಮತ್ತು ಸುಚಿತ್ವದ ಬಗ್ಗೆ ಪರಿಶೀಲಿಸಿದರು. ಸ್ವಚ್ಛತೆ ಇಲ್ಲದ ಕಾರಣ ಶುಚಿತ್ವವನ್ನು ಕಾಪಾಡಿಕೊಳ್ಳಬೇಕು ನಿರ್ಲಕ್ಷ ಕಂಡು ಬಂದರೆ ಕಠಿಣ ಕ್ರಮ ನಿಶ್ಚಿತ ಎಂದು ಎಚ್ಚರಿಕೆ ನೀಡಿದರು. ಜೊತೆಗೆ ಸುಚಿತ್ವ ಬಗ್ಗೆ ಮತ್ತು ಪೌಷ್ಟಿಕ ಆಹಾರ ನೀಡಬೇಕೆಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯನ್ನು ನೀಡಿದರು.





