ಮಠಕ್ಕೆ ರಾಹುಲ್ ಭೇಟಿಗೂ ಮುನ್ನ ಮಠದಲ್ಲಿ ಕಾಂಗ್ರೆಸ್ ನಾಯಕರ ವಾಗ್ವಾದ..!

ರಾಜಕೀಯ

 

BREAKING NEWS:

ಮಠಕ್ಕೆ ರಾಹುಲ್ ಭೇಟಿಗೂ ಮುನ್ನ ಮಠದಲ್ಲಿ ಕಾಂಗ್ರೆಸ್ ನಾಯಕರ ವಾಗ್ವಾದ..!

 

 

 

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಜಿಲ್ಲೆಗೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಕೆಲವೇ ಕ್ಷಣಗಳಲ್ಲಿ ಚಿತ್ರದುರ್ಗಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾ ಶರಣರ ಆಶಿರ್ವಾದ ಪಡೆದು ನಂತರ ವಿವಿಧ ಮಠಾಧೀಶರ ಜೊತೆ ಸಂವಾದ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಠಾಧೀಶರ ಸಭೆಗೆ ಸಂವಾದದಲ್ಲಿ ಪಾಲ್ಗೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರ ನಡುವೆ ವಾಗ್ವಾದ ನಡೆದಿದೆ

ಹುಬ್ಬಳ್ಳಿಯಿಂದ ರಾಹುಲ್ ಗಾಂಧಿ ರಸ್ತೆ ಮಾರ್ಗವಾಗಿ ಬರುತ್ತಿದ್ದು, ಮಳೆ ಕಾರಣಕ್ಕೆ ವಿಳಂಬವಾಗುತ್ತಿದೆ. ಬೆಳಿಗ್ಗೆ 11 ರಿಂದ 11.50ರವರೆಗೆ ಸಭೆ ನಿಗದಿಯಾಗಿದೆ.

ರಾಹುಲ್ ಭೇಟಿ ಹಿನ್ನಲೆಯಲ್ಲಿ ಮಠಕ್ಕೆ ಭಾರಿ ಭದ್ರತೆ ಕಲ್ಪಿಸಲಾಗಿದೆ. ಮಠದ ಪ್ರವೇಶ ಹಾಗೂ ಸಂವಾದದಲ್ಲಿ ಪಾಲ್ಗೊಳ್ಳಲು ಕೆಪಿಸಿಸಿ ವತಿಯಿಂದ ಪಾಸ್ ವ್ಯವಸ್ಥೆ ಮಾಡಲಾಗಿದೆ. ಪಾಸ್ ವಿತರಿಸುವಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ಪರಸ್ಪರ ವಾಗ್ವಾದ ನಡೆಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಾಸಲು ಸತೀಶ್ ಹಾಗೂ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್ ಪೀರ್ ಏರುಧ್ವನಿಯಲ್ಲಿ ಗಲಾಟೆ ಮಾಡಿಕೊಂಡರು. ಪೊಲೀಸರು ಮಧ್ಯ ಪ್ರವೇಶಿಸಿ ಸಾಸಲು ಸತೀಶ್ ಅವರು ಸಭಾಂಗಣಕ್ಕೆ ತೆರಳಲು ಅವಕಾಶ ಮಾಡಿಕೊಟ್ಟರು. ಕಾಂಗ್ರೆಸ್ ಮುಖಂಡ ಮುರಳಿಧರ ಹಾಲಪ್ಪ ವಿರುದ್ಧ ಸತೀಶ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *