ಮಹಿಳೆಯರಿಗೆ ವಾಹನ ಚಾಲನಾ ತರಬೇತಿಗೆ ಜಿಪಂ ಸಿಇಒ ಎಂ.ಎಸ್. ದಿವಾಕರ್ ಚಾಲನೆ

ಜಿಲ್ಲಾ ಸುದ್ದಿ

ಮಹಿಳೆಯರಿಗೆ ವಾಹನ ಚಾಲನಾ ತರಬೇತಿಗೆ ಜಿಪಂ ಸಿಇಒ ಎಂ.ಎಸ್. ದಿವಾಕರ್ ಚಾಲನೆ

 

 

 

ಚಿತ್ರದುರ್ಗ ನಗರದಲ್ಲಿನ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆ (ರುಡ್‍ಸೆಟಿ) ಸಂಸ್ಥೆಯಲ್ಲಿ ಮಹಿಳೆಯರಿಗಾಗಿ ಆಯೋಜಿಸಲಾಗಿರುವ ಲಘು ವಾಹನ ಚಾಲನಾ ತರಬೇತಿ ಕಾರ್ಯಕ್ರಮಕ್ಕೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್ ಅವರು ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ತರಬೇತಿ ಸಂಸ್ಥೆಯಲ್ಲಿ ಮಹಿಳೆಯರಿಗಾಗಿ ನಡೆಸಲಾಗುತ್ತಿರುವ ಬಟ್ಟೆ ಹೊಲಿಗೆ ತರಬೇತಿ, ಕಂಪ್ಯೂಟರ್ ತರಬೇತಿ ಸೇರಿದಂತೆ ವಿವಿಧ ಕಾರ್ಯ ಚಟುವಟಿಕೆಗಳ ಕುರಿತು ಜಿ.ಪಂ. ಸಿಇಒ ಅವರು ಪರಿಶೀಲಿಸಿ, ಮಾಹಿತಿ ಪಡೆದುಕೊಂಡರು.
ರುಡ್‍ಸೆಟಿ ತರಬೇತಿ ಸಂಸ್ಥೆಯ ವಿವಿಧ ಅಧಿಕಾರಿಗಳು, ಜಿ.ಪಂ. ನ ಅಧಿಕಾರಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *