ಸ್ವತಂತ್ರ ದಿನಾಚರಣೆಯ 75ನೇ ವಜ್ರ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಆಯೋಜಿಸಿರುವ *ಹರ್ ಘರ್ ತಿರಂಗಾ ಅಭಿಯಾನ* ದಡಿ
ಸರ್ಕಾರಿ ನೌಕರರಿಗೆ ಹಾಗೂ ಸಂಘದ ಪದಾಧಿಕಾರಿಗಳಿಗೆ ರಾಷ್ಟ್ರ ಧ್ವಜಗಳನ್ನು ವಿತರಿಸುವ ಮೂಲಕ ಚಿತ್ರದುರ್ಗ ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಸರ್ಕಾರಿ ನೌಕರರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ 75ನೇ ಸ್ವತಂತ್ರೋತ್ಸವ ವಜ್ರಮಹೋತ್ಸವದ ಶುಭಾಶಯಗಳನ್ನು ತಿಳಿಸಿರುವ ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಮಂಜುನಾಥ್ ಅವರು

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಆಶಯದಂತೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಸೊಚನೆಯಂತೆ, ಚಿತ್ರದುರ್ಗದ ನೆಚ್ಚಿನ ಜಿಲ್ಲಾಧಿಕಾರಿಗಳ ಸೂಚನೆಯಂತೆ 75ನೇ ಸ್ವಾತಂತ್ರ್ಯ ವಜ್ರ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರವು ವಿತರಿಸುತ್ತಿರುವ ಬಾವುಟಗಳನ್ನು ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿ ಮಾಡಿ ಪ್ರತಿಯೊಬ್ಬ ಸರ್ಕಾರಿ ನೌಕರರು ಮೂರು ದಿನಗಳು ತಮ್ಮ ಮನೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ತಿರಂಗ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ತಮ್ಮಲ್ಲಿ ಈ ಮೂಲಕ ಮನವಿ ಮಾಡಿದ್ದಾರೆ





