ಚಳ್ಳಕೆರೆ ಶಾಸಕರಾದ ಶ್ರೀ ಟಿ ರಘುಮೂರ್ತಿ ಅವರು ಚಳ್ಳಕೆರೆ ತಾಲೂಕು ಪಿ ಮಹದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಪ್ಪನಹಳ್ಳಿ ಗೇಟ್ನಿಂದ ಆಂಧ್ರ ಗಡಿಯವರೆಗೆ 5 ಕೋಟಿ ರೂಪಾಯಿ ವೆಚ್ಚದ ಮುಖ್ಯರಸ್ತೆ ಡಾಂಬೀಕರಣ ಕಾಮಗಾರಿ ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ತ್ಯಾಗರಾಜ್ ಉಪಾಧ್ಯಕ್ಷರಾದ ಶ್ರೀಮತಿ ರತ್ನಮ್ಮ ಗ್ರಾಮ ಪಂಚಾಯಿತಿ ಸದಸ್ಯರು ತಾಲೂಕು ದಂಡಾಧಿಕಾರಿಗಳಾದ ಎನ್ ರಘುಮೂರ್ತಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಾದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಈಶ್ವರ , ರೈತ ಮುಖಂಡರಾದ ಸೋಮಗುದ್ದು ರಂಗಸ್ವಾಮಿ , ಮುಖಂಡರು ಮತ್ತು ಸಾರ್ವಜನಿಕರು ಮುಂತಾದವರು ರಾಜರಿದ್ದರು





