ಅಕಾಲಿಕ‌ ಮಳೆ ತುರ್ತು ಸಭೆ ನಡೆಸಿದ ಚಳ್ಳಕೆರೆ ಶಾಸಕ

ಜಿಲ್ಲಾ ಸುದ್ದಿ

ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡರು.

ತಾಲೂಕಿನಾದ್ಯಂತ ಸುಮಾರು ಒಂದು ವಾರದಿಂದ ಸುರಿದ ಅಕಾಲಿಕ ಮಳೆಗೆ ವೇದಾವತಿ ನದಿಯು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಹಳ್ಳಿಗಳಿಗೆ ನೀರು ನುಗ್ಗಿ ಅಪಾರ ಬೆಳೆ ಮತ್ತು ಜನಜಾನುವಾರುಗಳಿಗೆ ನಷ್ಟವಾಗಿದ್ದು ತುರ್ತು ಸಭೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನ ಸಭೆ ಕೈಗೊಂಡರು.

 

 

 

ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಎನ್ ರಘುಮೂರ್ತಿ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೊನ್ನಯ್ಯ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಧಿಕಾರಿಗಳು , ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಸಹಾಯಕರು ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *